ಇಂದೋರ್: ಭಾರತ ಹಾಗೂ ಆಸ್ಟ್ರೇಲಿಯಾ (Australia) ನಡುವಿನ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾ (Team India) ಭರ್ಜರಿ ಗೆಲುವು ದಾಖಲಿಸಿದ್ದು, ಮಾರ್ಚ್ 1ರಿಂದ ಆರಂಭವಾಗಲಿರುವ 3ನೇ ನಿರ್ಣಾಯಕ ಪಂದ್ಯಕ್ಕಾಗಿ ಭರ್ಜರಿ ತಯಾರಿ ನಡೆಸಿದೆ.
ಸರಣಿಯ 2ನೇ ಪಂದ್ಯದ ಬಳಿಕ ವಿರಾಮ ಪಡೆದುಕೊಂಡಿದ್ದ ಇತ್ತಂಡಗಳು ಮತ್ತೆ ಕಣಕ್ಕಿಳಿಯಲು ಸಜ್ಜಾಗಿವೆ. ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದ್ದರೆ, ಹೀನಾಯ ಸೋಲು ಕಂಡಿರುವ ಆಸ್ಟ್ರೇಲಿಯಾ ಗೆಲುವಿಗಾಗಿ ಹೊಸ ತಂತ್ರದೊಂದಿಗೆ ಕಣಕ್ಕಿಳಿಯಲು ಮುಂದಾಗಿದೆ. ಇದನ್ನೂ ಓದಿ: ಬೆತ್ ಮೂನಿ ಭರ್ಜರಿ ಫಿಫ್ಟಿ – ಆಸ್ಟ್ರೇಲಿಯಾಗೆ 6ನೇ ಬಾರಿಗೆ ವಿಶ್ವಕಪ್ ಚಾಂಪಿಯನ್ ಕಿರೀಟ
Preps ????!#TeamIndia get into the groove for the 3⃣rd #INDvAUS Test in Indore ???? ????@mastercardindia pic.twitter.com/iM7kmmrMLQ
— BCCI (@BCCI) February 27, 2023
ಟೀಂ ಇಂಡಿಯಾ ಪರವಾಗಿ ಮೊದಲ ಎರಡು ಪಂದ್ಯಗಳಲ್ಲಿಯೂ ಉತ್ತಮ ಲಯದಲ್ಲಿರುವಂತೆ ತೋರಿದರೂ ದೊಡ್ಡ ಮೊತ್ತವಾಗಿ ಪರಿವರ್ತಿಸಲು ವಿಫಲವಾಗಿರುವ ವಿರಾಟ್ ಕೊಹ್ಲಿ (Virat Kohli). ಇದೀಗ 3ನೇ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ವೈಟ್‌ಬಾಲ್ ಮಾದರಿಯಲ್ಲಿ ಉತ್ತಮ ಫಾರ್ಮ್ ಕಂಡುಕೊಂಡಿರುವ ಕೊಹ್ಲಿ, ಟೆಸ್ಟ್‌ನಲ್ಲಿಯೂ ಅಂತಹದ್ದೇ ಪ್ರದರ್ಶನ ನೀಡುವುದನ್ನ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ 3ನೇ ಟೆಸ್ಟ್ ಪಂದ್ಯಕ್ಕಾಗಿ ಭರ್ಜರಿ ತಾಲೀಮು ನಡೆಸುತ್ತಿದ್ದಾರೆ.
3ನೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಭರ್ಜರಿ ತಾಲೀಮಿನಲ್ಲಿ ತೊಡಗಿದ್ದು, ಈ ವೀಡಿಯೋವನ್ನು ಬಿಸಿಸಿಐ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: RCB, MI, Delhi ಅಭಿಮಾನಿಗಳಿಗೆ ನಿರಾಸೆ – 2023ರ ಐಪಿಎಲ್‌ನಿಂದ ಈ ಸ್ಟಾರ್ ಆಟಗಾರರು ಔಟ್
ರಾಹುಲ್ ಫಾರ್ಮ್‌ನದ್ದೇ ಚಿಂತೆ: ಟಿ20 ವಿಶ್ವಕಪ್ ನಾಕೌಟ್ ಪಂದ್ಯದಿಂದಲೂ ಸತತವಾಗಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ಟೀಕೆಗಳಿಗೆ ಗುರಿಯಾಗಿರುವ ಕೆ.ಎಲ್ ರಾಹುಲ್‌ಗೆ (KL Rahul) ನಿರ್ಣಾಯಕ ಪಂದ್ಯದಲ್ಲಿ ಫಾರ್ಮ್ನದ್ದೇ ಚಿಂತೆಯಾಗಿದೆ.
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್ ಗಾವಾಸ್ಕರ್ ಟ್ರೋಫಿಯಲ್ಲಿ (Border Gavaskar Trophy) ಸತತ 2 ಪಂದ್ಯದ ನಾಲ್ಕು ಇನ್ನಿಂಗ್ಸ್ಗಳಲ್ಲೂ ರಾಹುಲ್ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಕಳೆದ 7 ಇನ್ನಿಂಗ್ಸ್‌ಗಳಲ್ಲಿ ಕ್ರಮವಾಗಿ 22, 23, 10, 2, 20, 17 ಮತ್ತು 1 ರನ್ ಗಳಿಸಿದ್ದಾರೆ. ಈ ನಡುವೆ ಯುವ ಟೆಸ್ಟ್, ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಅಬ್ಬರಿಸಿರುವ ಯುವ ಆಟಗಾರ ಶುಭಮನ್ ಗಿಲ್ (Shubman Gill) ಬಗ್ಗೆ ಒಲವು ಹೆಚ್ಚಾಗುತ್ತಿರುವುದರಿಂದ ರಾಹುಲ್ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಆದ್ದರಿಂದ ನಿರ್ಣಾಯ ಪಂದ್ಯದಲ್ಲಿ ರಾಹುಲ್ ಭರ್ಜರಿ ರನ್ ಗಳಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಮಾರ್ಚ್ 1ರಿಂದ 5 ವರೆಗೆ ಮಧ್ಯಪ್ರದೇಶ ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ಬಾರ್ಡರ್ ಗಾವಾಸ್ಕರ್ ಟ್ರೋಫಿಯ 3ನೇ ಟೆಸ್ಟ್ ಪಂದ್ಯ ನಡೆಯಲಿದೆ.