Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3ನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ – ಆಸ್ಟ್ರೇಲಿಯಾಗೆ 9 ವಿಕೆಟ್‌ಗಳ ಭರ್ಜರಿ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 3ನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ – ಆಸ್ಟ್ರೇಲಿಯಾಗೆ 9 ವಿಕೆಟ್‌ಗಳ ಭರ್ಜರಿ ಜಯ

Cricket

3ನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ – ಆಸ್ಟ್ರೇಲಿಯಾಗೆ 9 ವಿಕೆಟ್‌ಗಳ ಭರ್ಜರಿ ಜಯ

Public TV
Last updated: March 3, 2023 12:23 pm
Public TV
Share
2 Min Read
Ausutalia
SHARE

ಇಂದೋರ್: ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ (Travis Head) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ (Australia), ಟೀಂ ಇಂಡಿಯಾ (Team India) ವಿರುದ್ಧ 3ನೇ ಟೆಸ್ಟ್ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 4 ಪಂದ್ಯಗಳ ಬಾರ್ಡರ್ ಗಾವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಮೊದಲ ಜಯ ಸಾಧಿಸಿದೆ.

INDvsAUS 1

2ನೇ ದಿನದಾಟದ ಅಂತ್ಯಕ್ಕೆ 60.3 ಓವರ್‌ಗಳಲ್ಲಿ 163 ರನ್‌ಗಳಿಸಿದ್ದ ಭಾರತ 2ನೇ ಇನ್ನಿಂಗ್ಸ್‌ನಲ್ಲೂ ಒಂದೇ ದಿನಕ್ಕೆ ಸರ್ವಪತನ ಕಂಡಿತ್ತು. ಈ ಮೂಲಕ ಹೆಚ್ಚುವರಿ 75 ರನ್ ಗಳಿಸಿ ಆಸ್ಟ್ರೇಲಿಯಾಗೆ ಕೇವಲ 76 ರನ್‌ಗಳ ಗುರಿ ನೀಡಿತ್ತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 18.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 78 ರನ್ ಗಳಿಸುವ ಮೂಲಕ ಸುಲಭ ಜಯ ಸಾಧಿಸಿತು. ಇದನ್ನೂ ಓದಿ: ಎರಡನೇ ದಿನ 16 ವಿಕೆಟ್ ಪತನ – ಆಸೀಸ್ ಗೆಲುವಿಗೆ ಬೇಕು 76 ರನ್

INDvsAUS

ಆರಂಭಿಕರಾದ ಉಸ್ಮಾನ್ ಖವಾಜ ಆರಂಭದಲ್ಲಿ ಅಶ್ವಿನ್ ಸ್ಪಿನ್ ದಾಳಿಗೆ ತುತ್ತಾದರು. ಮತ್ತೊಬ್ಬ ಆರಂಭಿಕನಾಗಿದ್ದ ಟ್ರಾವಿಸ್ ಹೆಡ್ ಏಕದಿನ ಶೈಲಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆದರು. 53 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್‌ನೊಂದಿಗೆ 49 ರನ್ ಚಚ್ಚಿದರು. ಇದರೊಂದಿಗೆ ಸಾಥ್ ನೀಡಿದ ಮಾರ್ನಸ್ ಲಾಬುಶೇನ್ 58 ಎಸೆತಗಳಲ್ಲಿ 28 ರನ್ ಗಳಿಸಿ ಅಜೇಯರಾಗುಳಿದರು. ಅಂತಿಮವಾಗಿ ಆಸ್ಟ್ರೇಲಿಯಾ 18.5 ಓವರ್‌ಗಳಲ್ಲಿ 78 ರನ್‌ಗಳಿಸಿ ಜಯ ಸಾಧಿಸಿತು.

Australia 6

ಟೀಂ ಇಂಡಿಯಾ ಪರ ಅಶ್ವಿನ್ (Ravichandran Ashwin) 1 ವಿಕೆಟ್ ಪಡೆದರು. ಇದನ್ನೂ ಓದಿ: ಮೊದಲ ದಿನವೇ 14 ವಿಕೆಟ್‌ ಪತನ – ಪಿಚ್‌ ವಿರುದ್ಧ ಭಾರೀ ಟೀಕೆ

ಮೂರೇ ದಿನಕ್ಕೆ 31 ವಿಕೆಟ್ ಪತನ: ಇಂದೋರ್ ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ಎರಡೂ ತಂಡಗಳಿಂದ ಮೂರೇ ದಿನಗಳಲ್ಲಿ 31 ವಿಕೆಟ್ ಪತನಗೊಂಡಿತು. ಮೊದಲ ದಿನ 14 ವಿಕೆಟ್, 2ನೇ ದಿನ 16 ವಿಕೆಟ್ ಹಾಗೂ 3ನೇ ದಿನ 1 ವಿಕೆಟ್ ಪತನಗೊಂಡಿತು.

ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಭಾರತ ಸರಣಿ ಗೆಲ್ಲುವ ತವಕದಲ್ಲಿತ್ತು. ಭಾರತದ ಸರಣಿ ಗೆಲುವಿನ ಕನಸಿಗೆ ಕಾಂಗರೂ ಪಡೆ ತಣ್ಣೀರು ಎರಚಿದೆ. ಇದರಿಂದ ಮಾರ್ಚ್‌ 9 ರಿಂದ 13ರ ವರೆಗೆ ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್‌ ಪಂದ್ಯ ನಿರ್ಣಾಯಕವಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.

Australia

ಸಂಕ್ಷಿಪ್ತ ಸ್ಕೋರ್:
ಭಾರತ ಮೊದಲ ಇನ್ನಿಂಗ್ಸ್ 109/10
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 197/10
ಭಾರತ ಎರಡನೇ ಇನ್ನಿಂಗ್ಸ್ 163/10
ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್ 78/1

TAGGED:australiaRavichandran AshwinRohitSharmaSteven SmithTeamIndiaTravis Headಆರ್.ಅಶ್ವಿನ್ಆಸ್ಟ್ರೇಲಿಯಾಟೀಂ ಇಂಡಿಯಾಟ್ರಾವಿಸ್ ಹೆಡ್ರೋಹಿತ್ ಶರ್ಮಾಸ್ಟೀವ್ ಸ್ಮಿತ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
4 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
15 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
35 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
43 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
55 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?