ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಕ್ಷಣಗಣನೆ; ಕನ್ನಡದಲ್ಲೇ ಟ್ವೀಟ್‌ ಮಾಡಿ ಮೋದಿ ಬಣ್ಣನೆ

Public TV
1 Min Read
bengaluru mysuru expressway narendra modi

ನವದೆಹಲಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru-Mysuru Expressway) ಭಾನುವಾರ ಉದ್ಘಾಟನೆಯಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕನ್ನಡದಲ್ಲೇ ಟ್ವೀಟ್‌ ಮಾಡಿ ಸರ್ಕಾರದ ಕಾರ್ಯವನ್ನು ಬಣ್ಣಿಸಿದ್ದಾರೆ.

“ನಮ್ಮ ಸರ್ಕಾರ ಸಂಪರ್ಕ ಮತ್ತು ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವತ್ತ ಕೆಲಸ ಮಾಡುತ್ತಿದೆ. ಮೈಸೂರು ಮತ್ತು ಬೆಂಗಳೂರು ನಡುವಿನ ಹೆದ್ದಾರಿ ಮಾರ್ಗ ಆ ದಿಕ್ಕಿನತ್ತ ಹೆಜ್ಜೆಯಾಗಿದೆ” ಎಂದು ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಬಾಲ್ಯದಲ್ಲಿ ನನ್ನ ತಂದೆಯಿಂದಲೇ ಲೈಂಗಿಕ ದೌರ್ಜನ್ಯ ಅನುಭವಿಸಿದ್ದೆ – ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ

“19 ಫೆಬ್ರವರಿ 2018 : NH-275 ಘೋಷಿಸಲಾಗಿತ್ತು. 12ನೇ ಮಾರ್ಚ್ 2023: NH-275 ಉದ್ಘಾಟನೆಯಾಗಲಿದೆ! ನಾಳೆ ಕರ್ನಾಟಕದ ಪಾಲಿಗೆ ಐತಿಹಾಸಿಕ ದಿನ. ಐದು ವರ್ಷಗಳ ಹಿಂದೆ ಪ್ರಧಾನಿ ಮೋದಿಯವರು ಮೈಸೂರಿಗೆ ಭೇಟಿ ನೀಡಿದಾಗ NH-275 ಯೋಜನೆಯನ್ನು ಘೋಷಿಸಿದ್ದರು” ಎಂದು ಸಂಸದ ಪ್ರತಾಪ್‌ ಸಿಂಹ ಟ್ವೀಟ್‌ ಮಾಡಿದ್ದರು.

Bengaluru Mysuru

ಪ್ರತಾಪ್‌ ಸಿಂಹ (Pratap Simha) ಅವರ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಅವರು, ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರ್ಕಾರದ ಬೆಂಬಲ ಕುರಿತು ಕನ್ನಡದಲ್ಲೇ ಟ್ವೀಟ್‌ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Infosys ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ

ಭಾನುವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *