RRR-ನಾಟು ನಾಟು ಹಾಡಿಗೆ ಆಸ್ಕರ್ : ಸಂತಸ ವ್ಯಕ್ತ ಪಡಿಸಿದ ಲಹರಿ ವೇಲು

Public TV
2 Min Read
Oscar

ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ದೇಶಕ ರಾಜಮೌಳಿ (Rajamouli) ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾದ ನಾಟು ನಾಟು (Natu Natu) ಹಾಡಿಗೆ ಓರಿಜನಲ್ ಸಾಂಗ್ ವಿಭಾಗದಲ್ಲಿ ಪ್ರತಿಷ್ಠಿತ ಆಸ್ಕರ್ (Oscar) ಪ್ರಶಸ್ತಿ ಸಂದಿದೆ. ಆರ್.ಆರ್.ಆರ್ ಸಿನಿಮಾದ ಹಾಡುಗಳ (Song) ಹಕ್ಕುಗಳನ್ನು ಪಡೆದಿದ್ದ ಭಾರತೀಯ ಸಿನಿಮಾ ರಂಗದ ಪ್ರತಿಷ್ಠಿತ ಲಹರಿ ಸಂಸ್ಥೆಯು ಸಂತಸ ವ್ಯಕ್ತ ಪಡಿಸಿದೆ. ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಲಹರಿ ವೇಲು, ಆಸ್ಕರ್ ಪ್ರಶಸ್ತಿ ಪಡೆದಿದ್ದಕ್ಕೆ ಆರ್.ಆರ್.ಆರ್ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

oscar 1 1

‘ಲಹರಿ ಸಂಸ್ಥೆಗೆ 48 ವರ್ಷ. ಅಷ್ಟು ವರ್ಷದ ಶ್ರಮಕ್ಕೆ ಸಂದ ಗೌರವವೂ ಇದಾಗಿದೆ. ಆರ್.ಆರ್.ಆರ್ ಸಿನಿಮಾದ ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ, ನಟರಾದ ರಾಮ್ ಚರಣ್ (Ram Charan), ಜ್ಯೂನಿಯರ್ ಎನ್.ಟಿ.ಆರ್, ಸಾಹಿತ್ಯ ಬರೆದವರು, ಹಾಡಿದವರಿಗೆ ಎಲ್ಲರಿಗೂ ಅಭಿನಂದನೆಗಳು. ಈ ಪ್ರಶಸ್ತಿಯನ್ನು ಕನ್ನಡ ತಾಯಿ, ಭಾರತಾಂಬೆಯ ಮಡಲಿಗೆ ಅರ್ಪಿಸುತ್ತೇವೆ ಮತ್ತು ಸಂಗೀತ ಕ್ಷೇತ್ರಕ್ಕೆ, ಮಾಧ್ಯಮದ ಗೆಳೆಯರಿಗೆ ಹಾಗೂ ಭಾರತೀಯ ಸಿನಿಮಾ ರಂಗಕ್ಕೆ ಅರ್ಪಿಸುತ್ತೇವೆ’ ಎಂದರು ಲಹರಿ ವೇಲು. ಇದನ್ನೂ ಓದಿ: `ಜೊತೆ ಜೊತೆಯಲಿ’ ಖ್ಯಾತಿಯ ಶಿಲ್ಪಾ ಅಯ್ಯರ್ ಮದುವೆ ಆಲ್ಬಂ

oscar 2 1

ಜಗತ್ತೇ ಕಾಯುತ್ತಿದ್ದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಳು ಘೋಷಣೆಯಾಗಿದ್ದು, ಭಾರತವನ್ನು ಪ್ರತಿನಿಧಿಸಿದ್ದ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ಸಂದಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ ಹಾಗೂ ಕಾಲಭೈರವ ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು.

RRR 2

ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯದ್ದೇ ಸದ್ದು. ಭಾರತದಲ್ಲೂ ರಾಮ್ ಚರಣ್ ಮತ್ತು ಜ್ಯೂನಿಯರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ಕೋರಿದ್ದಾರೆ. ಅದರಲ್ಲೂ ತೆಲುಗು ಸಿನಿಮಾ ರಂಗದಲ್ಲಿ ಹಬ್ಬದ ವಾತಾವರಣವೇ ಕಂಡು ಬಂದಿದೆ.

NATU NATU

ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.

rrr 1

ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

Share This Article
Leave a Comment

Leave a Reply

Your email address will not be published. Required fields are marked *