Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ವಕ್ರದೃಷ್ಟಿ – ಮೋದಿ ರೋಡ್‌ಶೋಗೆ ಕುಮಾರಸ್ವಾಮಿ ಒಕ್ಕಲಿಗ ಕಾರ್ಡ್ ಪ್ಲೇ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ವಕ್ರದೃಷ್ಟಿ – ಮೋದಿ ರೋಡ್‌ಶೋಗೆ ಕುಮಾರಸ್ವಾಮಿ ಒಕ್ಕಲಿಗ ಕಾರ್ಡ್ ಪ್ಲೇ

Bengaluru City

ಬಿಜೆಪಿ ವಕ್ರದೃಷ್ಟಿ – ಮೋದಿ ರೋಡ್‌ಶೋಗೆ ಕುಮಾರಸ್ವಾಮಿ ಒಕ್ಕಲಿಗ ಕಾರ್ಡ್ ಪ್ಲೇ

Public TV
Last updated: March 14, 2023 12:14 pm
Public TV
Share
4 Min Read
Narendra Modi HD Kumaraswamy
SHARE

ಬೆಂಗಳೂರು: ಮಂಡ್ಯಕ್ಕೆ (Mandya) ಪ್ರಧಾನಿ ನರೇಂದ್ರ ಮೋದಿ (Narendra Modi) ಬಂದು ಹೋದ ಮೇಲೆ ಜೆಡಿಎಸ್ (JDS) ಆಕ್ಟೀವ್ ಆಗಿದೆ. ಬಿಜೆಪಿ (BJP) ಮೋದಿ ಅಸ್ತ್ರಕ್ಕೆ ಜೆಡಿಎಸ್ ಮಂಡ್ಯದಲ್ಲಿ ಒಕ್ಕಲಿಗ ಕಾರ್ಡ್ ಪ್ಲೇ ಮಾಡಿದೆ. ಖುದ್ದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಒಕ್ಕಲಿಗ ಅಸ್ತ್ರ ಪ್ಲೇ ಮಾಡಿದ್ದಾರೆ. ಬಿಜೆಪಿ ಹೇಳಿದ್ದ ಉರಿಗೌಡ, ನಂಜೇಗೌಡ ಹೆಸರು ಪ್ರಸ್ತಾಪ ಮಾಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಒಕ್ಕಲಿಗರ ಮೇಲೆ ಬಿಜೆಪಿ ವಕ್ರದೃಷ್ಟಿ ಎಂದು ವಾಗ್ದಾಳಿ ನಡೆಸಿದ್ದಾರೆ.

HD Kumaraswamy 5

ಟ್ವೀಟ್‌ನಲ್ಲಿ ಏನಿದೆ?
ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮು ದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನ ಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ. ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ಮೋದಿ ಅವರ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ.

ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ.1/11#ಒಕ್ಕಲಿಗರ_ಮೆಲೆ_ಬಿಜೆಪಿ_ವಕ್ರದೃಷ್ಟಿ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 14, 2023

ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ. ಇಂತಹ ಚಿಲ್ಲರೆ, ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎನ್ನುವುದು ಭ್ರಮೆ, ಮೂರ್ಖತನದ ಪರಮಾವಧಿ. ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಕನ್ನಡಪರ, ಪ್ರಗತಿಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದೇ ತಡ. ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಕಾಲ್ಪನಿಕ ಹೆಸರಗಳನ್ನು ತೆರವುಗೊಳಿಸಿ ಗೌರವ ಉಳಿಸಿಕೊಂಡಿದೆ.

ಇಂತಹ ಲಜ್ಜಗೇಡಿ ನಡೆ ರಾಜ್ಯ ಬಿಜೆಪಿ ಸರ್ಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ. ಪ್ರಧಾನಿ ಮೋದಿ ಅವರನ್ನು ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರುಗಳನ್ನು ಸೃಷ್ಟಿಸಲಾಯಿತಾ? ಅಥವಾ ಆ ಷಡ್ಯಂತ್ರಕ್ಕೆ ರಾಜ್ಯ ಸರ್ಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ ಇಂತಹ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತಾ? ತಿಳಿಯಬೇಕಿದೆ. ಸುಳ್ಳುಗಳಿಗೆ ಆಯಸ್ಸು ಬಹಳ ಕಡಿಮೆ ಎನ್ನುವುದನ್ನು ಇನ್ನಾದರೂ ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು.

ತಾಳ್ಮೆ, ಸ್ವಾಭಿಮಾನ, ಸ್ವಂತಿಕೆ, ಸೇವೆ, ಸೌಹಾರ್ದತೆ, ಸಮನ್ವಯ ತತ್ತ್ವದ ತಳಹದಿಯ ಮೇಲೆ ಬೆಳೆದಿದೆ ಒಕ್ಕಲಿಗ ಸಮುದಾಯ. ದ್ವೇಷ ಮತ್ತು ಹಸಿಸುಳ್ಳುಗಳನ್ನು ಅವರೆಂದು ಪೋಷಿಸಿ ಬೆಳೆಸಿದವರಲ್ಲ. ಒಂದೀಡಿ ಸಮುದಾಯವನ್ನು ಇಂಥ ನಿಕೃಷ್ಟ ರಾಜಕಾರಣಕ್ಕೆ ಇಳಿಸಿ, ಬಳಸಬಹುದು ಎಂಬ ಪಾಪಿಚಿಂತನೆಯೇ ಬಿಜೆಪಿಯ ಹೊಲಸು ರಾಜಕಾರಣದ ಪರಾಕಾಷ್ಠೆ. 10/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 14, 2023

ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ಸುಳ್ಳುಸೃಷ್ಟಿ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ. ಇಡೀ ಒಕ್ಕಲಿಗ ಸಮುದಾಯವನ್ನು ಅಪಹಾಸ್ಯಕ್ಕೆ ಗುರಿ ಮಾಡುವ, ಇಡೀ ಸಮುದಾಯಕ್ಕೆ ಅಪಕೀರ್ತಿ ತರುವ ಹಾಗೂ ಟಿಪ್ಪುವನ್ನು ಕೊಂದ ಕಳಂಕವನ್ನು ಒಕ್ಕಲಿಗರಿಗೆ ಅಂಟಿಸುವ ಹೀನ ಕೆಲಸವನ್ನು ಬಿಜೆಪಿ ಮಾಡಲು ಹೊರಟಿದೆ. ಇದನ್ನು ಒಕ್ಕಲಿಗರು ಸಹಿಸರು. ಇದನ್ನೂ ಓದಿ: ಮಂಡ್ಯ ಜನರ ಎದುರು ಮತ್ತೆ ಸಿಎಂ ಆಗುವ ಮಹಾದಾಸೆ ವ್ಯಕ್ತಪಡಿಸಿದ ಡಿಕೆಶಿ

ಒಂದೆಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಒಕ್ಕಲಿಗರನ್ನು ಓಲೈಸುವ ಕೆಲಸ ಮಾಡುತ್ತಿರುವ ಬಿಜೆಪಿಗರು, ಇನ್ನೊಂದೆಡೆ ಕೊಲೆಯ ಕಳಂಕವನ್ನು ಮೆತ್ತಿ, ಅದೇ ಒಕ್ಕಲಿಗ ಸಮುದಾಯಕ್ಕೆ ಐತಿಹಾಸಿಕವಾಗಿ ಶಾಶ್ವತ ಕಪ್ಪುಚುಕ್ಕೆ ಮೆತ್ತಲು ಷಡ್ಯಂತ್ರ ರೂಪಿಸಿದ್ದಾರೆ.

ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ; ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚಲ್ಲಾಟ ಆಡುತ್ತಿದೆ.
ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ @BJP4Karnataka ಬಹುದೊಡ್ಡ ತಪ್ಪು ಮಾಡಿದೆ. 11/11#ಒಕ್ಕಲಿಗರ_ಮೆಲೆ_ಬಿಜೆಪಿ_ವಕ್ರದೃಷ್ಟಿ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 14, 2023

ಮತಕ್ಕಾಗಿ ಮಾನಕ್ಕೂ ಅಂಜದ ಬಿಜೆಪಿ ಸುಳ್ಳಿನ ಮೂಲಕ ಚುನಾವಣೆ ಗೆಲ್ಲಲು ಹೊರಟಂತಿದೆ. ರೋಡ್ ಶೋ ಮೂಲಕ ಮಂಡ್ಯದ ಜನರಿಗೆ ಮೋಡಿ ಮಾಡುವುದು ಎಂದರೆ ಇದೇನಾ? ಇಂತಹ ವಿದ್ರೋಹಿ ಕೃತ್ಯಗಳನ್ನು ಒಕ್ಕಲಿಗರು ಮಾತ್ರವಲ್ಲ, ಸೌಹಾರ್ದತೆಯಿಂದ ರಾಜ್ಯದಲ್ಲಿ ಬಾಳುತ್ತಿರುವ ಯಾವ ಸಮುದಾಯವೂ ಸಹಿಸದು. ತಾಳ್ಮೆ, ಸ್ವಾಭಿಮಾನ, ಸ್ವಂತಿಕೆ, ಸೇವೆ, ಸೌಹಾರ್ದತೆ, ಸಮನ್ವಯ ತತ್ತ್ವದ ತಳಹದಿಯ ಮೇಲೆ ಬೆಳೆದಿದೆ ಒಕ್ಕಲಿಗ ಸಮುದಾಯ.

ದ್ವೇಷ ಮತ್ತು ಹಸಿಸುಳ್ಳುಗಳನ್ನು ಅವರೆಂದು ಪೋಷಿಸಿ ಬೆಳೆಸಿದವರಲ್ಲ. ಒಂದಿಡೀ ಸಮುದಾಯವನ್ನು ಇಂತಹ ನಿಕೃಷ್ಟ ರಾಜಕಾರಣಕ್ಕೆ ಇಳಿಸಿ, ಬಳಸಬಹುದು ಎಂಬ ಪಾಪಿಚಿಂತನೆಯೇ ಬಿಜೆಪಿಯ ಹೊಲಸು ರಾಜಕಾರಣದ ಪರಾಕಾಷ್ಠೆ. ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ, ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ. ಒಕ್ಕಲಿಗರ ಮೇಲೆ ಬಿಜೆಪಿ ವಕ್ರದೃಷ್ಟಿ ಎಂದು ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಂಡ್ಯ ಬಿಜೆಪಿಗೆ ಸುಮಲತಾ ಬೂಸ್ಟರ್- ಹಾಡಿಹೊಗಳಿದ ಬಿ.ಎಲ್ ಸಂತೋಷ್

TAGGED:bjphd kumaraswamyjdsnarendra modiಕುಮಾರಸ್ವಾಮಿಜೆಡಿಎಸ್ನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
4 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
5 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
6 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
6 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?