ಗುರುವಾರ ರಾಜ್ಯಾದ್ಯಂತ 60 ಸಾವಿರ KPTCL ನೌಕರರಿಂದ ಮುಷ್ಕರ

Public TV
1 Min Read
Electricity 1

ಬೆಂಗಳೂರು: ಗುರುವಾರ ಇಡೀ ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ಸ್ಥಗಿತ ಮಾಡಿ ಮುಷ್ಕರ (Strike) ನಡೆಸಲು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (KPTCL) ನೌಕರರು ನಿರ್ಧರಿಸಿದ್ದಾರೆ.

ವೇತನ (Salary) ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ.  ನೌಕರರು ಕೆಲಸ ನಿಲ್ಲಿಸಿದರೆ ರಾಜ್ಯದ ಎಲ್ಲಾ ಕಾರ್ಖಾನೆಗಳು ಬಂದ್ ಆಗುವ ಸಾಧ್ಯತೆ ಇದೆ.

ಲೈನ್‌ಮ್ಯಾನ್‌ಗಳಿಂದ ಹಿಡಿದು ಎಂಜಿನಿಯರ್‌ಗಳವರೆಗೆ ಸುಮಾರು 60 ಸಾವಿರ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ತಾಂತ್ರಿಕ ದೋಷಗಳು, ಗ್ರಾಹಕರ ಕುಂದುಕೊರತೆಗಳನ್ನು ಪರಿಹರಿಸುವುದು ಸೇರಿದಂತೆ ಯಾವುದೇ ಆಡಳಿತಾತ್ಮಕ ಕಾರ್ಯಗಳನ್ನು ನೌಕರರು ನಿರ್ವಹಿಸಲಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯುತ್‌ ಪೂರೈಕೆಯಲ್ಲಿಅಡಚಣೆ ಎದುರಾಗುವ ಸಾಧ್ಯತೆಗಳು ಹೆಚ್ಚಿವೆ.

Electricity

ಬೇಡಿಕೆಗಳೇನು?
ಶೇ. 40% ವೇತನ ಹೆಚ್ಚಳ ಆಗಬೇಕು.  2022ರ ಏಪ್ರಿಲ್‌ 1 ರಿಂದ ಬಾಕಿ ವೇತನ ಬಿಡುಗಡೆ ಮಾಡಬೇಕು. ತಕ್ಷಣವೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿದ್ಯುತ್‌ ಕಂಪನಿಗಳ ಖಾಸಗೀಕರಣ ಉದ್ದೇಶದ ಪ್ರಸ್ತಾವಿತ ಮಸೂದೆಯನ್ನು ಹಿಂಪಡೆಯಬೇಕು. ಇದನ್ನೂ ಓದಿ: ವಜ್ರದ ವ್ಯಾಪಾರಿ ಪುತ್ರಿಯೊಂದಿಗೆ ಮೋದಿ ತವರಿನಲ್ಲಿ ಅದಾನಿ ಪುತ್ರನ ನಿಶ್ಚಿತಾರ್ಥ

ಒಂದು ದಿನ ಕೆಪಿಟಿಸಿಎಲ್ ನೌಕರರು ಕೆಲಸ ನಿಲ್ಲಿಸಿದರೆ 1 ಸಾವಿರ ಕೋಟಿ ರೂ. ನಷ್ಟ ಸಂಭವಿಸುವ ಸಾಧ್ಯತೆಯಿದೆ. ಒಂದು ದಿನ ವಿದ್ಯುತ್ ಉತ್ಪಾದನೆ ನಿಂತರೆ ಒಂದು ವಾರ ರಾಜ್ಯಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತದೆ. ಈ ಅವ್ಯವಸ್ಥೆ ಸರಿಪಡಿಸಲು 10 ರಿಂದ 15 ದಿನಗಳು ಬೇಕಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *