‘ಪೆಂಟಗನ್’ ಟ್ರೈಲರ್ ಮೆಚ್ಚಿಕೊಂಡ ಟಾಪ್ ಸೆಲೆಬ್ರಿಟಿಸ್

Public TV
1 Min Read
Pentagon 2 1

ನಿರ್ದೇಶಕ ಗುರು ದೇಶಪಾಂಡೆ (Guru Deshpande) ಪ್ರಧಾನ ನೇತೃತ್ವದಲ್ಲಿ ಮೂಡಿ ಬಂದಿರುವ ಪೆಂಟಗನ್ (Pentagon) ಸಿನಿಮಾ ಟ್ರೈಲರ್ (Trailer) ರಿಲೀಸ್ ಆಗಿದ್ದು, ದಕ್ಷಿಣ ಭಾರತದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಟ್ರೈಲರ್ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಟ್ರೈಲರ್ ಲಿಂಕ್ ಅನ್ನು ಸೋಷಿಯಲ್ ಮೀಡಿಯಾಗಳಲ್ಲೂ ಹಂಚಿಕೊಂಡಿದ್ದಾರೆ. ಅದರಲ್ಲೂ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ (Rishabh Shetty), ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ರವಿಪುಡಿ (Anil Ravipudi), ನಿರ್ದೇಶಕರಾದ ತರುಣ್ ಸುಧೀರ್, ಶಶಾಂಕ್ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

Pentagon 1 1

ಐದು ಜನ ನಿರ್ದೇಶಕರು, ಐದು ಕಥೆಗಳು, ಐದು ಜನ ಬರಹಗಾರರು, ಐದು ಹೀರೋಗಳು ಹೀಗೆ ಐದೈದು ವಿಷಯಗಳನ್ನು ಪೆಂಟಗನ್ ಚಿತ್ರದಲ್ಲಿ ಹೇಳಲು ಹೊರಟಿದೆ ಚಿತ್ರತಂಡ. ಎಲ್ಲ ವಯಸ್ಸಿನವರಿಗೂ ಇಷ್ಟವಾಗುವಂತಹ ಕಥೆಗಳನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗಿದೆ ಎಂದಿದ್ದಾರೆ ಗುರು ದೇಶಪಾಂಡೆ.

Pentagon 2

ಪ್ರತಿಭಾವಂತ ನಿರ್ದೇಶಕರುಗಳಾದ ರಾಘು ಶಿವಮೊಗ್ಗ, ಆಕಾಶ್ ಶ್ರೀವತ್ಸ, ಚಂದ್ರ ಮೋಹನ್, ಕಿರಣ್ ಕುಮಾರ್ ಹಾಗೂ ಮತ್ತೊಂದು ಕಥೆಗೆ ಗುರು ದೇಶಪಾಂಡೆ ಅವರೇ ನಿರ್ದೇಶನ ಮಾಡಿದ್ದಾರೆ. ಪ್ರಕಾಶ್ ಬೆಳವಾಡಿ, ಕಿಶೋರ್ (Kishore), ರವಿಶಂಕರ್ ಸೇರಿದಂತೆ ಹೆಸರಾಂತ ನಟರೇ ತಾರಾ ಬಳಗದಲ್ಲಿ ಇದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಜನರ ಗಮನ ಸೆಳೆದಿವೆ.

Pentagon 2 1

ಇದು ಪ್ರಯೋಗಾತ್ಮಕ ಸಿನಿಮಾವಲ್ಲ, ಪಕ್ಕಾ ಕಮರ್ಷಿಯಲ್ ಚಿತ್ರ. ನೋಡುಗನಿಗೆ ಏನೆಲ್ಲ ಬೇಕಿದೆಯೋ ಎಲ್ಲವನ್ನೂ ಈ ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇವೆ. ಹೊಸ ಆಲೋಚನೆಯ ನಿರ್ದೇಶಕರು, ಬರಹಗಾರರು ಮತ್ತು ಹೊಸ ಕಲಾವಿದರು ಕೂಡ ಸಿನಿಮಾದ ಭಾಗವಾಗಿದ್ದಾರೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಹೊಸ ಅನುಭವನ್ನು ನೀಡಲಿದೆ ಎನ್ನುತ್ತಾರೆ ಗುರು ದೇಶಪಾಂಡೆ.

Share This Article
Leave a Comment

Leave a Reply

Your email address will not be published. Required fields are marked *