Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್‌ ಗಾಂಧಿ ಅಜ್ಜಿ ಇಂದಿರಾ ಗಾಂಧಿ ಸಹ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಹುಲ್‌ ಗಾಂಧಿ ಅಜ್ಜಿ ಇಂದಿರಾ ಗಾಂಧಿ ಸಹ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು..!

Latest

ರಾಹುಲ್‌ ಗಾಂಧಿ ಅಜ್ಜಿ ಇಂದಿರಾ ಗಾಂಧಿ ಸಹ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು..!

Public TV
Last updated: March 24, 2023 10:42 pm
Public TV
Share
2 Min Read
Indira Gandhi
SHARE

ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರನ್ನು (Rahul Gandhi) ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮಾನನಷ್ಟ ಪ್ರಕರಣ ಸಂಬಂಧ ಸೂರತ್‌ ಕೋರ್ಟ್‌ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್‌ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

Rahul Gandhi set to lose the perks and privileges of a Member of Parliament, now that he has been disqualified. pic.twitter.com/SysUvHArQq

— Smita Prakash (@smitaprakash) March 24, 2023

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾಗಿ ಸ್ಥಾನ ಕಳೆದುಕೊಂಡಿರುವುದು ಇದೇ ಮೊದಲೇನಲ್ಲ. ಭಾರತದ ರಾಜಕೀಯ ಇತಿಹಾಸದಲ್ಲಿ ಅನೇಕ ಶಾಸಕರು, ಸಂಸದರೂ ಮಾನನಷ್ಟ ಮೊಕದ್ದಮೆಗೆ ಒಳಗಾಗಿ ತಮ್ಮ ಸ್ಥಾನ ಕಳೆದುಕೊಂಡಿದ್ದಾರೆ. ಕಾಕತಾಳೀಯವೆಂಬಂತೆ ಈ ಸಾಲಿನಲ್ಲಿ ರಾಹುಲ್‌ ಗಾಂಧಿ ಅವರ ಅಜ್ಜಿ ಇಂದಿರಾ ಗಾಂಧಿ (Indira Gandhi) ಅವರೂ ಸೇರಿದ್ದಾರೆ. ಇದನ್ನೂ ಓದಿ: ಸಂಸದ ಸ್ಥಾನದಿಂದ ರಾಹುಲ್‌ ಗಾಂಧಿ ಅನರ್ಹ

ಹೌದು. 1975ರಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಜಗಮೋಹನ್ ಲಾಲ್ ಸಿನ್ಹಾ ಇಂದಿರಾ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ದೇಶವೇ ತಿರುಗಿ ನೋಡುವಂತಹ ತೀರ್ಪು ನೀಡಿದ್ದರು. ಈ ತೀರ್ಪು ತುರ್ತು ಪರಿಸ್ಥಿತಿ ಘೋಷಣೆಗೂ ಕಾರಣವಾಗಿತ್ತು ಎಂದು ಹೇಳಲಾಗಿದೆ.

Rahul Gandhi 1 1

ಸಿನ್ಹಾ ಅವರು, 1971ರ ಚುನಾವಣಾ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಅಂದಿನ ಪ್ರಧಾನಿ ಇಂದಿರಾ ಗಾಂಧಿಯ ಅವರನ್ನ ದೋಷಿ ಎಂದು ಘೋಷಿಸಿದ್ದರು. ಅದರಂತೆ ಜನಪ್ರತಿನಿಧಿ ಕಾಯ್ದೆಯ ಅಡಿಯಲ್ಲಿ 6 ವರ್ಷಗಳ ಕಾಲ ಯಾವುದೇ ಚುನಾಯಿತ ಹುದ್ದೆಯಲ್ಲಿ ಮುಂದುವರಿಯದಂತೆ ತಡೆ ಹಾಕಿದ್ದರು. ಇದನ್ನೂ ಓದಿ: ಅಂದು ಸುಗ್ರೀವಾಜ್ಞೆ ಹರಿದು ಎಸೆಯದೇ ಇದ್ದಿದ್ದರೆ ರಾಹುಲ್‌ ಅನರ್ಹರಾಗುತ್ತಿರಲಿಲ್ಲ!

ಇದೀಗ 2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದ್ದರು. ಇದರ ಬೆನ್ನಲ್ಲೇ, ಶುಕ್ರವಾರ ರಾಹುಲ್ ಅವರನ್ನ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.

Rahul Gandhi 2

ಜನಪ್ರತಿನಿಧಿಗಳ ಕಾಯ್ದೆ ಏನು ಹೇಳುತ್ತದೆ?
ಜನಪ್ರತಿನಿಧಿಗಳ ಕಾಯ್ದೆಯಂತೆ ಶಾಸಕರು/ ಸಂಸದರು ಎರಡು ನಿದರ್ಶನಗಳಲ್ಲಿ ತಮ್ಮ ಸ್ಥಾನದಿಂದ ಅನರ್ಹರಾಗಬಹುದು. ಮೊದಲು ಸೆಕ್ಷನ್ 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಪರಾಧ ಮತ್ತು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಅಥವಾ ಸೆಕ್ಷನ್ 171E (ಲಂಚ ತೆಗೆದುಕೊಳ್ಳುವುದು)ನಂತಹ ಪ್ರಕರಣ ಅಥವಾ ಸೆಕ್ಷನ್ 171F (ಚುನಾವಣೆಯಲ್ಲಿ ಅನಗತ್ಯ ಪ್ರಭಾವದ) ಅಪರಾಧ ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾದರೆ ತಮ್ಮ ಸ್ಥಾನವನ್ನು ಸಂಸದರು ಕಳೆದುಕೊಳ್ಳಲಿದ್ದಾರೆ.

ಶಾಸಕರು ಅಥವಾ ಸಂಸದರು ಯಾವುದೇ ಇತರ ಅಪರಾಧ ಪ್ರಕರಣಗಳಲ್ಲಿ ಎರಡು ವರ್ಷ ಅಥವಾ ಎರಡು ವರ್ಷಕ್ಕಿಂತ ಹೆಚ್ಚು ಶಿಕ್ಷೆಗೆ ಒಳಗಾಗಿದ್ದಾರೆ ಅವರನ್ನು ಶಾಸಕ/ ಸಂಸದ ಸ್ಥಾನದಿಂದ ಅನರ್ಹಗೊಳಿಸಬಹುದು. ರಾಹುಲ್‌ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆಯಾದ ಕಾರಣ ಈಗ ಈ ಕಾಯ್ದೆಯ ಅಡಿ ಅನರ್ಹ ಮಾಡಲಾಗಿದೆ.

TAGGED:aiccbjpIndira Gandhilok sabhanarendra modiRahul GandhiSurat Courtಇಂದಿರಾ ಗಾಂಧಿಕಾಂಗ್ರೆಸ್ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿಲೋಕಸಭೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Red Corner Notice Mangaluru
Crime

ವಿದೇಶದಲ್ಲಿ ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ

Public TV
By Public TV
2 minutes ago
Siddaramaiah HD Kumaraswamy
Latest

ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

Public TV
By Public TV
29 minutes ago
seemanth kumar singh 2
Bengaluru City

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌

Public TV
By Public TV
50 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
1 hour ago
nitish kumar
Latest

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – ಶೀಘ್ರವೇ ಬಿಹಾರಕ್ಕೆ ನೂತನ ಸಿಎಂ

Public TV
By Public TV
1 hour ago
Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?