ಗೊಂದಲಕ್ಕೆ ತೆರೆ- ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ

Public TV
1 Min Read
Siddaramaiah 4 1

ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election) ಕಾಂಗ್ರೆಸ್‌ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು, ಕೊನೆಗೂ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವರುಣಾದಿಂದ ಸ್ಪರ್ಧಿಸುವುದು ಖಚಿತವಾಗಿದೆ.

ರಾಜ್ಯ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್‌ (Congress) ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಗೊಂಡಿದೆ. ಈ ಮೊದಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಆದರೆ ಹೈಕಮಾಂಡ್‌ ನಾಯಕರ ಸೂಚನೆ ಬೆನ್ನಲ್ಲೇ ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎನ್ನುವುದು ಗೊಂದಲಕ್ಕೀಡಾಗಿತ್ತು. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಮೊದಲ ಪಟ್ಟಿ ರಿಲೀಸ್‌ – 124 ಕ್ಷೇತ್ರಗಳಿಗೆ ಅಭ್ಯರ್ಥಿ

Congress 1

ಆದರೆ ಇದೀಗ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರ ಹೆಸರಿದ್ದು, ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಅದೇ ರೀತಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ವರುಣಾ  ಟಿಕೆಟ್‌ಯಿಲ್ಲದಂತಾಗಿದೆ. ಇದನ್ನೂ ಓದಿ: ರಾಜ್ಯಕ್ಕಿಂದು ಪ್ರಧಾನಿ ಮೋದಿ ಆಗಮನ

Share This Article
Leave a Comment

Leave a Reply

Your email address will not be published. Required fields are marked *