Karnataka Election 2023- ಮೇ 10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ

Public TV
3 Min Read
RAJEEV KUMAR 1

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣಾ (Karnataka Vidhanasabha Election 2023) ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ  10  ರಂದು ಚುನಾವಣೆ ನಡೆಯಲಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ (Election Commission) ಮುಖ್ಯಸ್ಥ ರಾಜೀವ್ ಕುಮಾರ್, ಏಪ್ರಿಲ್‌ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್‌ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್‌ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ.  ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಅಲ್ಲದೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ ಎಂದರು.

Voter 1

ಕರ್ನಾಟಕ ಎಲೆಕ್ಷನ್‌ ಮತ್ತು ಉಪಚುನಾವಣೆ ದಿನಾಂಕ ಪ್ರಕಟಿಲಿದ್ದೇವೆ. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು ಯಶಸ್ವಿಯಾಗಿ ಮುಗಿಸಿದ್ದೇವೆ. ಸದ್ಯ ಕರ್ನಾಟಕ ಚುನಾವಣೆಗೆ ಎಲ್ಲಾ ಸಿದ್ಧತೆಗಳು ನಡೆದಿವೆ. ಕರ್ನಾಟಕದಲ್ಲಿ 5,21,73579 ಒಟ್ಟು ಮತದಾರರಿದ್ದು, 2, 62,42, 561 ಪುರುಷರು, 2,59,26,319 ಮಹಿಳೆಯರು, 4,699 ತೃತೀಯ ಲಿಂಗಿ ಹಾಗೂ 5.55 ಲಕ್ಷ ದಿವ್ಯಾಂಗ ಮತದಾರರಿದ್ದಾರೆ. 9.17.241 ಮಂದಿ ಮೊದಲ ಸಲ ಮತದಾನ ಮಾಡುತ್ತಿದ್ದಾರೆ ಎಂದು  ಹೇಳಿದರು.

2023ರ ಮೇ 23ರ ಒಳಗೆ ವಿಧಾನಸಭೆ ಅಂತ್ಯವಾಗಬೇಕು. ಅದಕ್ಕೂ ಮುನ್ನ ಹೊಸ ಸರ್ಕಾರ ರಚನೆ ಆಗಬೇಕು. ಮೇ 24ಕ್ಕೆ ವಿಧಾನಸಭೆ 15ನೇ ವಿಧಾನಸಭೆ ಅವಧಿ ಮುಕ್ತಾಯವಾಗಲಿದೆ.  ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತ ಚಲಾಯಿಸುವ ಅವಕಾಶ ನೀಡಲಾಗುತ್ತಿದೆ. ಸಾಕಷ್ಟು ಚಾಲೆಂಜ್ ಗಳಿವೆ, ಅವುಗಳನ್ನು ಸುಧಾರಿಸಿದೆ.  ಬುಡಕಟ್ಟು ಸಮುದಾಯ ಮತದಾನಕ್ಕೂ ವ್ಯವಸ್ಥೆ ಮಾಡಲಾಗಿದೆ. ತೃತೀಯ ಲಿಂಗಿಗಳು ಮತದಾರರ ಸೇರ್ಪಡೆಗೆ ಹಿಂದೇಟು ಹಾಕುತ್ತಾರೆ. ಅವರಿಗೆ ನೋಂದಣಿ ಮಾಡಿಕೊಳ್ಳಲು ಮನವಿ ಮಾಡಲಾಗಿದೆ ಎಂದರು.

kolkata vote

58,282 ಒಟ್ಟು ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತಿದೆ. ಒಂದೊಂದು ಮತಗಟ್ಟೆಗೆ 883 ಮಂದಿ ಮತದಾರರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ನಗರ ಪ್ರದೇಶದಲ್ಲಿ 24,063, ಗ್ರಾಮೀಣ ಭಾಗದಲ್ಲಿ 34,219 ಹಾಗೂ 1320 ಮಹಿಳಾ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಇನ್ನು ಯುವಕರಿಗಾಗಿ 224 ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇತರೆ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಉತ್ತಮವಾಗಿದೆ. ಕಳೆದ ಬಾರಿ ಬೆಂಗಳೂರಿನಲ್ಲಿ ಕಡಿಮೆ ಮತದಾನವಾಗಿದೆ. ಹೀಗಾಗಿ ಈ ಬಾರಿ ಮತದಾನ ಹೆಚ್ಚಿಸಲು ಪ್ರಯತ್ನ ಮಾಡುತ್ತಿದ್ದು, ಮತದಾನ ಹೆಚ್ಚಿಸಲು ಜಾಗೃತಿ ಮೂಡಿಸಲಾಗುತ್ತಿದೆ. ಬಹಳಷ್ಟು ಐಟಿ ಕಂಪನಿಗಳು ಇದಕ್ಕೆ ಸಹಕಾರ ನೀಡುತ್ತಿವೆ.

Voter ID 2

ಅಭ್ಯರ್ಥಿಗಳ ಮಾಹಿತಿ, ಪ್ರಮಾಣ ಪತ್ರ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಈ ಮೂಲಕ ಜನರು ತಮ್ಮ ಅಭ್ಯರ್ಥಿಯ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. ಅಫಿಡೆವಿಟ್ APPನಲ್ಲಿ ಅಪ್ಲೋಡ್ ಮಾಡಲಾಗುವುದು. ಆ್ಯಪ್ ಸಹಾಯದಿಂದ ಚುನಾವಣಾ ಅಕ್ರಮಗಳನ್ನು ಜನರು ದೂರು ನೀಡಬಹುದು. ಈ ಹಿಂದೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ 1028 ಕೋಟಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಕರ್ನಾಟಕದಲ್ಲಿ ಅಕ್ರಮ ತಡೆಯಲು 2400 ತಂಡಗಳನ್ನು ರಚಿಸಿದೆ. ವಿಮಾನ ನಿಲ್ದಾಣಗಳಲ್ಲಿ ಪರಿಶೀಲನೆಗಳನ್ನು ನಡೆಸಲಾಗುತ್ತದೆ ಎಂದರು.

ರಾಜೀವ್ ಕುಮಾರ್ ಜೊತೆಗೆ ಚುನಾವಣಾ ಆಯುಕ್ತರಾದ ಅರುಣ್ ಗೋಯಲ್, ಅನುಪ್ ಚಂದ್ರ ಪಾಂಡೆ, ನಿತೇಶ್ ವೈಷ್ಯ, ಧರ್ಮೇಂದ್ರ ಶರ್ಮಾ ಮತ್ತಿತರರು ಭಾಗಿಯಾಗಿದ್ದಾರೆ.

RAJEEV KUMAR

ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ 118, ಕಾಂಗ್ರೆಸ್‌ 69, ಜೆಡಿಎಸ್‌ ಶಾಸಕರ ಬಲಾಬಲ 31, ಇತರೆ 3, ಹಾಗೂ ಖಾಲಿ 3 ಇದೆ.  ರಾಜ್ಯದಲ್ಲಿ ಈಗಾಗಲೇ ಪ್ರಮುಖ ರಾಜಕೀಯ ಪಕ್ಷಗಳಾದ ಭಾರತೀಯ ಜನತಾ ಪಕ್ಷ (BJP), ಕಾಂಗ್ರೆಸ್ (Congress) ಮತ್ತು ಜನತಾ ದಳ (JDS) ಹಾಗೂ ಆಮ್ ಆದ್ಮಿ (AAP) ಪಕ್ಷಗಳುಕರ್ನಾಟಕ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿವೆ. ಇದನ್ನೂ ಓದಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗ್ತಿದೆ, ನನ್ನೆಲ್ಲ ಪ್ರವಾಸ ರದ್ದು ಮಾಡಿದ್ದೇನೆ: ಸಿಎಂ

Congress JDS BJP

ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಆದರೆ ಬಿಜೆಪಿಯು ಚುನಾವಣಾ ದಿನಾಂಕ ಘೋಷಣೆಯ ನಂತರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

Share This Article