ಸಿಎಂ ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಬಿಜೆಪಿ ಕಚೇರಿ ಮೇಲೆ ದಾಳಿ

Public TV
1 Min Read
BJP OFFICE SEIZE 1

ಬೆಂಗಳೂರು: ನೀತಿ ಸಂಹಿತೆ ವಿಚಾರವಾಗಿ ರಾಜ್ಯ ಚುನಾವಣಾಧಿಕಾರಿಗಳು (Election Officers) ಬಿಜೆಪಿಗೆ (BJP) ಶಾಕ್ ನೀಡಿದ್ದಾರೆ. ಮಲ್ಲೇಶ್ವರಂನಲ್ಲಿರುವ ಪಕ್ಷದ ಮುಖ್ಯ ಕಚೇರಿಯಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸುದ್ದಿಗೋಷ್ಠಿ ನಡೆಸುತ್ತಿದ್ದ ಹೊತ್ತಲ್ಲೇ ದಾಳಿ ನಡೆಸಿದ 15 ಅಧಿಕಾರಿಗಳ ತಂಡ ಕೇಸರಿ ತೋರಣಗಳನ್ನು ಕಿತ್ತು ಹಾಕಿದ್ದಾರೆ.

BJP OFFICE SEIZE

ಚುನಾವಣೆ (Election) ಹೊತ್ತಲ್ಲಿ ಕೇಸರಿ ತೋರಣ ಕಟ್ಟಿ ಸಂಭ್ರಮಕ್ಕೆ ಮುಂದಾಗಿದ್ದ ಬಿಜೆಪಿ ಮುಖಂಡರಿಗೆ ಅಧಿಕಾರಿಗಳ ದಾಳಿ ಮುಜುಗರ ತಂದಿದೆ. ಮಲ್ಲೇಶ್ವರಂನಲ್ಲಿ (Malleshwaram) ಉದ್ಘಾಟನೆಗೊಂಡಿದ್ದ ಬಿಜೆಪಿಯ ಮಾಧ್ಯಮ ಕೇಂದ್ರದಲ್ಲಿ ಸಚಿವರೊಂದಿಗೆ ಸಿಎಂ ಸುದ್ದಿಗೋಷ್ಠಿಯಲ್ಲಿ ತೊಡಗಿದ್ದ ವೇಳೆಯಲ್ಲೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಚೇರಿಗೆ ಕಟ್ಟಿದ್ದ ಕೇಸರಿ ತೋರಣಗಳನ್ನು ತೆರವುಗೊಳಿಸಿದ್ದಾರೆ. ಇದನ್ನೂ ಓದಿ: ಜಗತ್ತಿಗೆ ಶಾಕ್‌ ಕೊಟ್ಟ OPEC – ಕಚ್ಚಾ ತೈಲ ಬೆಲೆ ದಿಢೀರ್‌ ಭಾರೀ ಏರಿಕೆ

ಇಷ್ಟೇ ಅಲ್ಲದೇ ಚುನಾವಣಾಧಿಕಾರಿಗಳು ಬಿಜೆಪಿಯ ಕೃಷ್ಣಯ್ಯ ಶೆಟ್ಟಿಯವರ ಮನೆಯಲ್ಲಿ ಸಂಗ್ರಹಿಸಿದ್ದ ಆಹಾರದ ಕಿಟ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಭಾನುವಾರ ಅವಧಿ ಮೀರಿ ಸಭೆ ನಡೆಸಿದ್ದ ರೇಣುಕಾಚಾರ್ಯ (Renukacharya) ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕೊಪ್ಪಳದ ಕಾರಟಗಿಯಲ್ಲಿ (Karatagi) ಬಿಜೆಪಿಯಿಂದ ಆಯೋಜಿಸಿದ್ದ ಬಾಡೂಟಕ್ಕೆ ಅಧಿಕಾರಿಗಳು ದಾಳಿ ನಡೆಸಿ ತಡೆದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಮೀಸಲಾತಿ ಬಗ್ಗೆ ಮಾತನಾಡೋ ನೈತಿಕತೆ ಇಲ್ಲ – ಕಾರಜೋಳ

Share This Article