– ಪಕ್ಷ ಹೇಳಿದ್ರೆ ನಾನೂ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ
ರಾಮನಗರ: ಅನಿತಾ ಕುಮಾರಸ್ವಾಮಿ (Anita Kumaraswamy) ಮತ್ತೆ ಸ್ಪರ್ಧೆ ಮಾಡಲ್ಲ, ಪಕ್ಷ ಹೇಳಿದ್ರೆ ನಾನೂ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದರು.
ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡ್ತಾರೆ ಎಂಬ ಚರ್ಚೆ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಿತಾ ಕುಮಾರಸ್ವಾಮಿಯವರು ಈಗಾಗಲೇ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಹಿಂದೆ ಮಧುಗಿರಿ ಹಾಗೂ ರಾಮನಗರದಲ್ಲಿ ಅನಿರೀಕ್ಷಿತವಾಗಿ ಸ್ಪರ್ಧೆ ಮಾಡಿದ್ದರು ಎಂದರು.
ಕಳೆದ ಬಾರಿ ರಾಮನಗರದಿಂದ ಸ್ಪರ್ಧೆಗೆ ನನಗೂ ಒತ್ತಡ ಇತ್ತು. ಆಗ ನಾನು ಸಿನಿಮಾದಲ್ಲಿ ಬ್ಯುಸಿ ಆಗಿದ್ದೆ. ಹಾಗಾಗಿ ಅನಿವಾರ್ಯ ಕಾರಣಗಳಿಂದ ಸ್ಪರ್ಧೆ ಮಾಡಿ ಗೆದ್ದರು. ಬಳಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದಾರೆ. ಮತ್ತೆ ಅವರು ಯಾವುದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ, ಅವರಿಗೆ ಆಸಕ್ತಿಯೂ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಅಯೋಧ್ಯೆ ದೇವಸ್ಥಾನ ಬಳಿ ವಾಸ್ತವ್ಯ ಹೂಡಿ – ಮನೆಯಿಲ್ಲ ಎಂದಿದ್ದ ರಾಗಾಗೆ ಅರ್ಚಕ ಆಹ್ವಾನ
ಎಲ್ಲಾ ಪಕ್ಷದಲ್ಲೂ ಗೊಂದಲಗಳು ಇದ್ದೇ ಇರುತ್ತೆ. ಹಾಸನ ಟಿಕೇಟ್ ವಿಚಾರವಾಗಿ ವರಿಷ್ಠರು ಅಂತಿಮ ನಿರ್ಧಾರ ಮಾಡ್ತಾರೆ. ದೇವೇಗೌಡರು ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಹೋರಾಟದ ಹಿನ್ನೆಲೆಯಲ್ಲಿ ಬಂದ ಪಕ್ಷ ಜೆಡಿಎಸ್ ಪಕ್ಷವನ್ನು ಉಳಿಸಿಕೊಳ್ಳಲು ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಒಂದು ವೇಳೆ ಪಕ್ಷ ಹೇಳಿದ್ರೆ ನಾನೇ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ. ಕಾರ್ಯಕರ್ತರು, ಮುಖಂಡರು ತೀರ್ಮಾನ ಮಾಡಿದ್ರೆ ನಾನು ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬಿಜೆಪಿ ಮತ್ತೆ ಅಧಿಕಾರಕ್ಕೆ, ಹಲವು ಕ್ಷೇತ್ರಗಳಲ್ಲಿ ಅಚ್ಚರಿಯ ಅಭ್ಯರ್ಥಿ – ಬೊಮ್ಮಾಯಿ