ತುಮಕೂರು: ಗುಬ್ಬಿ (Gubbi) ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿಎಸ್ ಪ್ರಸನ್ನಕುಮಾರ್ (G.S.Prasanna Kumar) ಅವರನ್ನು ಕಾಂಗ್ರೆಸ್ (Congress) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಚಂದ್ರಶೇಖರ್ ಗೌಡ (Chandrashekar Gowda) ಮಾಹಿತಿ ನೀಡಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪ್ರಸನ್ನಕುಮಾರ್ ಅವರು ಶಾಸಕ ಎಸ್‌ಆರ್ ಶ್ರೀನಿವಾಸ್ (S.R.Srinivas) ಕಾಂಗ್ರೆಸ್ ಸೇರ್ಪಡೆಯಾಗುವುದನ್ನು ಪ್ರಬಲವಾಗಿ ವಿರೋಧಿಸಿದ್ದರು. ಅಲ್ಲದೇ ತಾವೇ ಅಭ್ಯರ್ಥಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ನಿರ್ಧರಿಸಿದ್ದರು ಎಂದರು. ಇದನ್ನೂ ಓದಿ: ಸಿಎಂ ಸಮ್ಮುಖದಲ್ಲಿ ಇಂದು ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ?
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಆರೋಪದಡಿಯಲ್ಲಿ, ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (D.K.Shivakumar) ಹಾಗೂ ವರಿಷ್ಠರ ಅನುಮೋದನೆಯ ಮೇರೆಗೆ ಪ್ರಸನ್ನಕುಮಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ದಾಖಲೆ ಇಲ್ಲದ 2 ಕೋಟಿ ರೂ. ಹಣ ಜಪ್ತಿ