ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ : ಕಿಚ್ಚ ಸುದೀಪ್

Public TV
1 Min Read
kiccha sudeep 1 1

ಬಿಜೆಪಿ (BJP) ಸೇರುವ ವಿಚಾರವಾಗಿ ಸುದೀಪ್ ((Sudeep) )ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಕೆಲವು ವಿಚಾರಗಳನ್ನು ಸದ್ಯ ಹೇಳುವುದು ಕಷ್ಟ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ರಿಕಾಗೋಷ್ಠಿಗೆ ಆಹ್ವಾನಿಸಿದ್ದಾರೆ. ನಾನು ಹೋಗುತ್ತಿದ್ದೇನೆ. ಅಲ್ಲೇ ಹಲವು ವಿಚಾರಗಳನ್ನು ಮಾತನಾಡುತ್ತೇನೆ’ ಎಂದಿದ್ದಾರೆ ಸುದೀಪ್. ಈ ಸಂದರ್ಭದಲ್ಲಿ ಅವರು ಹಲವು ವಿಚಾರಗಳನ್ನೂ ಹಂಚಿಕೊಂಡಿದ್ದಾರೆ.

Basavaraj Bommai with sudeep

ಮುಂದುವರೆದು ಮಾತನಾಡಿದ ಅವರು, ‘ಬಿಜೆಪಿ ಜೊತೆಗಿನ ಸಂಬಂಧವನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತೇನೆ. ಆದರೆ, ಈ ಸಂದರ್ಭದಲ್ಲಿ ಒಂದು ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ (Election) ಸ್ಪರ್ಧೆ ಮಾಡುವುದಿಲ್ಲ. ಇದನ್ನು ಅಭಿಮಾನಿಗಳಿಗೆ ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಟಿಕೆಟ್ ಕೇಳುವುದಿಲ್ಲ’ ಎಂದಿದ್ದಾರೆ ಸುದೀಪ್.  ಇದನ್ನೂ ಓದಿ: ಕಿಸ್ಸಿಂಗ್ ಪ್ರಕರಣ: 16 ವರ್ಷಗಳ ನಂತರ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್

sudeep 1 1

ಸುದೀಪ್ ಬಿಜೆಪಿಗೆ ಸೇರ್ಪಡೆ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಕಾಶ್ ರೈ ‘ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದು ಬರೆದುಕೊಂಡಿದ್ದಾರೆ. ಈ ಟ್ವೀಟ್ ಗೆ ಅಸಂಖ್ಯಾತ ಜನರು ಪ್ರತಿಕ್ರಿಯಿಸಿದ್ದಾರೆ.

sudeep

ನಟ ಸುದೀಪ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅವರು ಪಕ್ಷವನ್ನು ಸೇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸುದೀಪ್ ಅವರ ಆಪ್ತರ ಪ್ರಕಾರ ಅಧಿಕೃತವಾಗಿ ಬಿಜೆಪಿಗೆ ಸೇರದೆ ಸ್ಟಾರ್ ಪ್ರಚಾರಕರಾಗಿ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

Share This Article