Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುನೀತ್ ಕೆರೆಹಳ್ಳಿ ಬಂಧನ- ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ 1 ಲಕ್ಷ ಬಹುಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪುನೀತ್ ಕೆರೆಹಳ್ಳಿ ಬಂಧನ- ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ 1 ಲಕ್ಷ ಬಹುಮಾನ

Crime

ಪುನೀತ್ ಕೆರೆಹಳ್ಳಿ ಬಂಧನ- ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ 1 ಲಕ್ಷ ಬಹುಮಾನ

Public TV
Last updated: April 5, 2023 6:33 pm
Public TV
Share
3 Min Read
RAMANAGAR SP
SHARE

ರಾಮನಗರ: ಗೋವು ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಸಾತನೂರು ಪೊಲೀಸರು (Sathanoor Police) ಕಾರ್ಯಾಚರಣೆ ನಡೆಸಿ ಪ್ರಕರಣದ ಐವರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಐದು ದಿನಗಳಿಂದ ತಲೆಮರೆಸಿಕೊಂಡಿದ್ದ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ಸೇರಿ ಐವರು ಆರೋಪಿಗಳನ್ನ ರಾಜಸ್ಥಾನದಲ್ಲಿ ಬಂಧಿಸಿ ರಾಮನಗರಕ್ಕೆ ಕರೆತರಲು ಸಿದ್ಧತೆ ನಡೆಸಿದ್ದಾರೆ.

ಕನಕಪುರ ತಾಲೂಕಿನ ಸಾತನೂರು ಬಳಿ ಮಾ.31ರ ರಾತ್ರಿ ಮಂಡ್ಯದಿಂದ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹವವನ್ನು ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರು ತಡೆದು, ಜಾಲತಾಣಗಳಲ್ಲಿ ವೀಡಿಯೋ ಹಂಚಿಕೊಂಡಿದ್ದರು. ಈ ವೇಳೆ ಕ್ಯಾಂಟರ್‍ನಲ್ಲಿನ ಚಾಲಕ ಹಾಗೂ ಮತ್ತೊಬ್ಬ ಪರಾರಿಯಾಗಿದ್ದರೆ, ವಾಹನದಲ್ಲಿದ್ದ ಇದ್ರೀಶ್ ಪಾಷ (Idrish Pasha) ಘಟನೆ ನಡೆದ 200 ಮೀಟರ್ ದೂರದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧ ಹಿಂದೂ ಕಾರ್ಯಕರ್ತ (Hindu Activist) ಪುನೀತ್ ಕೆರೆಹಳ್ಳಿ ನೈತಿಕ ಪೊಲೀಸ್ ಗಿರಿ (Moral Policing) ಮಾಡಿದ್ದು ಇದ್ರಿಷ್ ಪಾಷಾ ಎಂಬ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಮೃತ ವ್ಯಕ್ತಿ ಇದ್ರಿಷ್ ಪಾಷಾ ಕುಟುಂಬಸ್ಥರು ಸೇರಿ ರಾಜ್ಯದ ಹಲವೆಡೆ ಮುಸ್ಲಿಂ ಸಮುದಾಯ ಪ್ರತಿಭಟನೆ ನಡೆಸಿ ಪುನೀತ್ ಬಂಧನಕ್ಕೆ ಒತ್ತಾಯಿಸಿತ್ತು. ಪ್ರಕರಣ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ 3ಎಫ್‍ಐಆರ್ ದಾಖಲಾಗಿದ್ದ ಹಿನ್ನೆಲೆ ಇಂದು ಸಾತನೂರು ಪೊಲೀಸರು ಪುನೀತ್ ಕೆರೆಹಳ್ಳಿ ಸೇರಿ ಐವರನ್ನ ಬಂಧಿಸಿದ್ದಾರೆ.

RMG PUNITH ARREST AVB

ಏ.1 ರಂದು ಪುನಿತ್ ಕೆರೆಹಳ್ಳಿ ಮೇಲೆ ದೂರು ದಾಖಲಾದ ಬಳಿಕ ಆತ ನಾಪತ್ತೆಯಾಗಿದ್ದ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಅಪ್ಲೋಡ್ ಮಾಡಿ ನಾನು ದೇವಾಲಯಕ್ಕೆ ಬಂದಿದ್ದೇನೆ. ಓಡಿಹೋಗಿಲ್ಲ ಎಂದು ಹೇಳಿಕೆಯನ್ನು ನೀಡುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡಿದ್ದ. ಆತನನ್ನು ಬಂಧಿಲು ಒಟ್ಟು 4 ತಂಡಗಳನ್ನು ರಚನೆ ಮಾಡಿದ್ದ ಜಿಲ್ಲಾ ಪೊಲೀಸರು ಮೊದಲು ಹುಬ್ಬಳ್ಳಿ, ಮಹಾರಾಷ್ಟ್ರ, ಗುಜರಾತ್, ಸೂರತ್‍ಗಳಲ್ಲಿ ಸುತ್ತಾಡಿ, ರಾಜಸ್ಥಾನದಲ್ಲಿ ಓಡಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಬಳಿಕ ರಾಜಸ್ಥಾನ ಪೊಲೀಸರ ಸಹಾಯದಿಂದ ರಾಜಸ್ಥಾನದ ಗಡಿ ಜಿಲ್ಲೆ ಬನಸ್ವಾರ ಎಂಬಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪುನೀತ್ ಕೆರೆಹಳ್ಳಿ ಸೇರಿ ರಾಮನಗರದ ಗೋಪಿ, ತೀರ್ಥಹಳ್ಳಿಯ ಪವನ್ ಕುಮಾರ್, ಬಸವನಗುಡಿಯ ಪಿಲ್ಲಿಂಗ್ ಅಂಬಿಗಾರ್, ರಾಯಚೂರಿನ ಸುರೇಶ್ ರನ್ನ ಬಂಧಿಸಲಾಗಿದೆ. ಅಲ್ಲಿನ ನ್ಯಾಯಾಲಯದ ಅನುಮತಿ ಬಳಿಕ ಆರೋಪಿಗಳನ್ನು ರಾಜ್ಯಕ್ಕೆ ಕರೆತರಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ತಲೆ ಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿ ಐವರ ಬಂಧನ

ಮಂಡ್ಯದಿಂದ ತಮಿಳುನಾಡಿನ ಕಡೆಗೆ ಕ್ಯಾಂಟರ್ ನಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಚೆಕ್‍ಪೋಸ್ಟ್‍ಗಳ ಕಣ್ತಪ್ಪಿಸಿಕೊಳ್ಳಲು ಕಳ್ಳದಾರಿಯನ್ನು ಬಳಸಲಾಗಿತ್ತು. ಈ ಬಗ್ಗೆ ಕೂಡಾ ತನಿಖೆ ಮುಂದುವರಿದಿದೆ. ಅಲ್ಲದೇ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ನೈತಿಕ ಪೊಲೀಸ್ ಗಿರಿ ಪ್ರದರ್ಶನಕ್ಕೆ ಪುನಿತ್ ಕೆರೆಹಳ್ಳಿ ಮೇಲೆ ಪ್ರಕರಣವನ್ನೂ ಸಹ ದಾಖಲಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ. ಇನ್ನೂ ಆರೋಪಿಗಳನ್ನು ಬಂಧಿಸುವಲ್ಲಿ ಶ್ರಮಿಸಿದ್ದ ಪೊಲೀಸರಿಗೆ 1 ಲಕ್ಷ ಬಹುಮಾನ ನೀಡುವುದಾಗಿ ಎಸ್ಪಿ ಕಾರ್ತಿಕ್ ರೆಡ್ಡಿ ಘೋಷಿಸಿದ್ದಾರೆ.

RAMANAGAR SP 1

ಆರೋಪಿ ಬಂಧನ ಕುರಿತು ಮಾತನಾಡಿದ ಮುಸ್ಲಿಂ ಮುಖಂಡ ಮುಸಾರ್ವಿ ಖಾನ್, ಗೋವುಗಳನ್ನು ಸಾಗಿಸುವುದಕ್ಕೆ ಎಲ್ಲ ದಾಖಲೆಗಳಿದ್ದವು. ಪುನೀತ್ ಕೆರೆಹಳ್ಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಬಳಿಕ ಈತ ಕರೆಂಟ್ ನೀಡಿ ಇದ್ರೀಶ್ ಪಾಷನನ್ನು ಹತ್ಯೆ ಮಾಡಿದ್ದಾನೆ. ಈತನ ಹಿಂದೆ ಕಾಣದ ಶಕ್ತಿಗಳು ಕೆಲಸ ಮಾಡುತ್ತಿವೆ. ಹಿಂದೂ -ಮುಸ್ಲಿಮರುಗಳು ಅಣ್ಣತಮ್ಮರಂತೆ ಬಾಳುತ್ತಿದ್ದೇವೆ. ಕೆಲವರು ಸಮಾಜದ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಇಂತಹವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದಿದ್ದಾರೆ.

ಒಟ್ಟಾರೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಇದ್ರಿಷ್ ಪಾಷಾ ಅನುಮಾನಸ್ಪದ ಸಾವಿನ ಬಗ್ಗೆ ಇನ್ನೂ ಕೂಡ ಸ್ಪಷ್ಟತೆ ದೊರಕಿಲ್ಲ. ಇದ್ರಿಷ್ ಪಾಷಾರನ್ನ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದ್ಯಾ.? ಅಥವಾ ಸಾವಿನ ನಿಖರ ಕಾರಣ ಏನು ಎಂಬುದು ಎಫ್‍ಎಸ್‍ಎಲ್ ವರದಿ ಬಳಿಕಷ್ಟೇ ಗೊತ್ತಾಗಲಿದೆ. ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಬಂಧನಕ್ಕೆ ನಾಲ್ಕು ತಂಡ ರಚನೆ, ಪ್ರಕರಣದಲ್ಲಿ 3 ಎಫ್‌ಐಆರ್ – ಎಸ್ಪಿ ಕಾರ್ತಿಕ್ ರೆಡ್ಡಿ

TAGGED:Puneeth Kerehallirajasthanramanagarಪುನೀತ್ ಕೆರೆಹಳ್ಳಿರಾಜಸ್ಥಾನರಾಮನಗರ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
5 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
6 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
6 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
6 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
7 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?