ಏ. 9ಕ್ಕೆ ಮೋದಿ ಬಂಡೀಪುರ ಭೇಟಿ – ಪ್ರವಾಸಿಗರಿಗೆ ಇಂದಿನಿಂದ 4 ದಿನ ಸಫಾರಿ, ರೆಸಾರ್ಟ್ ವಾಸ್ತವ್ಯ ಬಂದ್

Public TV
1 Min Read
NARENDRA MODI 1

ಚಾಮರಾಜನಗರ: ವಿಧಾನಸಭಾ ಚುನಾವಣೆ (Assembly Election) ಹಿನ್ನೆಲೆ ರಾಜ್ಯಕ್ಕೆ ಮೇಲಿಂದ ಮೇಲೆ ಪ್ರವಾಸ ಕೈಗೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಬಾರಿ ಮೋದಿ ಅವರು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ (Bandipur National Park) ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ.

ಏಪ್ರಿಲ್ 9 ರಾಷ್ಟ್ರೀಯ ಹುಲಿ ದಿನ. ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಸಫಾರಿ ನಡೆಸಲಿದ್ದಾರೆ. ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆ ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇತ್ತೀಚಿನ ಹುಲಿ ಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.

bandipur

ಪ್ರಧಾನಿ ಭೇಟಿ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ಏಪ್ರಿಲ್ 6 ರಿಂದ 9 ರವರೆಗೆ ಬಂಡೀಪುರದಲ್ಲಿ ಸಫಾರಿ ಬಂದ್ ಇರಲಿದೆ. ಅಲ್ಲದೇ ಬಂಡೀಪುರ ವ್ಯಾಪ್ತಿಯ ಎಲ್ಲಾ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಡಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ರಿಲೀಸ್?

ಇದೇ ವೇಳೆ ಮುದುಮಲೈ ಹುಲಿ ರಕ್ಷಿತಾರಣ್ಯದಲ್ಲಿಯೂ 4 ದಿನ ಸಫಾರಿ ಬಂದ್ ಇರಲಿದೆ. ಪ್ರಧಾನಿ ತಮ್ಮ ಭೇಟಿ ವೇಳೆ ಆಸ್ಕರ್ ಖ್ಯಾತಿಯ ದಿ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರದ ನಿಜ ಪಾತ್ರಧಾರಿಗಳನ್ನು ಭೇಟಿಮಾಡಲಿದ್ದಾರೆ.

BANDIPUR TIGER RESERVE

ಚುನಾವಣೆ ದಿನಾಂಕ ಹಾಗೂ ನೀತಿ ಸಂಹಿತೆ ಜಾರಿಯಾದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಚುನಾವಣೆ ದೃಷ್ಟಿಯಲ್ಲಿ ಜನರನ್ನು ಯಾವ ರೀತಿ ಮೋಡಿ ಮಾಡಲಿದ್ದಾರೆಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಯುಪಿಎಯಿಂದ ನಿರೀಕ್ಷಿಸಿದ್ದೆ, ಬಿಜೆಪಿ ಮುಸ್ಲಿಮರಿಗೆ ಪದ್ಮ ಪ್ರಶಸ್ತಿ ನೀಡಲ್ಲ ಎಂದು ಭಾವಿಸಿದ್ದೆ: ಮೋದಿಗೆ ರಶೀದ್ ಅಹ್ಮದ್ ಖಾದ್ರಿ ಧನ್ಯವಾ

Share This Article