ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟ ನಾವೂ ಮಾಡಿದ್ದೇವೆ; ಇದ್ರಲ್ಲಿ ರಾಜಕಾರಣ ಸಲ್ಲದು: ಬೊಮ್ಮಾಯಿ

Public TV
2 Min Read
BASAVARAJ BOMMAI

ನವದೆಹಲಿ: ನಂದಿನಿ (Nandini) ನಂಬರ್ ಒನ್ ಬ್ರ‍್ಯಾಂಡ್ ಆಗಲಿದ್ದು, ಅಮುಲ್ (Amul) ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟವನ್ನು ನಾವು ಕೂಡಾ ಮಾಡಿದ್ದೇವೆ. ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಅಮುಲ್ ಹಿಮ್ಮೆಟ್ಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

NANDINI MILK

ಅಭ್ಯರ್ಥಿಗಳ ಬಗ್ಗೆ ಚರ್ಚೆ: ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಎಲ್ಲಾ ಅಭ್ಯರ್ಥಿಗಳ ವಿಚಾರ ಚರ್ಚೆ ಮಾಡಲಾಗುವುದು. ಭಾನುವಾರ ಸಂಜೆ 5 ಗಂಟೆಗೆ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲಾ 224 ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದರು.

ಸಭೆಯಲ್ಲಿ ನಿರ್ಧಾರ: ಕೆಲ ಎಂಎಲ್‌ಸಿ ಮತ್ತು ಸಂಸದರು ಟಿಕೆಟ್ ಆಕಾಂಕ್ಷಿಗಳಾಗಿದ್ದು, ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಚರ್ಚೆಯ ಬಳಿಕ ಎಷ್ಟು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ನಿರ್ಧಾರವಾಗಲಿದೆ ಎಂದು ತಿಳಿಸಿದರು.

BASAVARAJ BOMMAI 1 3

ನಮ್ಮ ಶಕ್ತಿ ಮೇಲೆ ನಂಬಿಕೆ ಇದೆ: ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆಯ ಗೊಂದಲದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಶಕ್ತಿ ಮೇಲೆ ನಮಗೆ ನಂಬಿಕೆ ಇದೆ. ಸಹಜವಾಗಿಯೇ ಅದರ ಲಾಭ ಆಗಲಿದೆ ಎಂದರು. ಇದನ್ನೂ ಓದಿ: ನನ್ನ ಮಗನನ್ನು ನಿಮಗೆ ಬಿಟ್ಟಿದ್ದೇನೆ- ಕಾಂತಾದೇವಿ ಛೋಪ್ರಾ ಕಣ್ಣೀರು

ಕಾಂಗ್ರೆಸ್‌ಗೆ ನಡುಕ ಹುಟ್ಟಿದೆ: ನಟ ಸುದೀಪ್ ಬಿಜೆಪಿ ಬೆಂಬಲ ನೀಡುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಈ ಹಿಂದೆ ನಟರನ್ನು ಕರೆತಂದು ಚುನಾವಣಾ ಪ್ರಚಾರ ಮಾಡಿದ್ದಾರೆ. ಅಂಬರೀಶ್ ಪ್ರಚಾರ ಮಾಡಲಿಲ್ಲವೇ? ಶಾಸಕರಾಗಿರಲಿಲ್ಲವೇ? ಎಂದು ಪ್ರಶ್ನಿಸಿದರು. ಬಿಜೆಪಿಗೆ ಬೆಂಬಲ ನೀಡುವ ಮುಂಚೆ ಅದರಿಂದಾಗುವ ಎಲ್ಲಾ ಪರಿಣಾಮದ ಬಗ್ಗೆ ಮಾಹಿತಿ ಇದೆ. ಸುದೀಪ್ ಅವರು ನಮಗೆ ಬೆಂಬಲ ನೀಡಿರುವುದರಿಂದ ಸಹಜವಾಗಿ ಕಾಂಗ್ರೆಸ್‌ಗೆ ನಡುಕ ಹುಟ್ಟಿದೆ ಎಂದು ಟಾಂಗ್ ನೀಡಿದರು.

BASAVARAJ BOMMAI 2

ಹಾಲಿ ಶಾಸಕರಿಗೆ ಟಿಕೆಟ್: ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ಆ ತರಹದ ಲೆಕ್ಕಾಚಾರ ಚರ್ಚೆಯಲ್ಲಿ ಮಾಡಿದಾಗಲೇ ತಿಳಿಯುವುದು ಎಂದು ಹೇಳಿದರು. ಇದನ್ನೂ ಓದಿ: ಹಾಲಾಡಿ ಶ್ರೀನಿವಾಸ ಶೆಟ್ಟಿ ಒಂದು ಸಾವಿರ ಅಂತರದಿಂದ ಕೊನೆಗೆ ಲಕ್ಷ ಮತ ಪಡೆದ ರೋಚಕ ಕಥೆ!

Share This Article