Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ ವೈಮಾನಿಕ ದಾಳಿ – 100ಕ್ಕೂ ಅಧಿಕ ಜನ ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ ವೈಮಾನಿಕ ದಾಳಿ – 100ಕ್ಕೂ ಅಧಿಕ ಜನ ಬಲಿ

Latest

ಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ ವೈಮಾನಿಕ ದಾಳಿ – 100ಕ್ಕೂ ಅಧಿಕ ಜನ ಬಲಿ

Public TV
Last updated: April 12, 2023 9:18 am
Public TV
Share
1 Min Read
Myanmar Military Attack
SHARE

ನೇಪ್ಯಿಡಾವ್: ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ (Airstrikes) ಮಂಗಳವಾರ ಮಧ್ಯ ಮ್ಯಾನ್ಮಾರ್‌ನಲ್ಲಿ (Myanmar) ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.

ಫೆ.2021ರ ದಂಗೆಯಲ್ಲಿ ಮಿಲಿಟರಿ ಅಧಿಕಾರ ವಶಪಡಿಸಿಕೊಂಡಾಗಿನಿಂದ ಮ್ಯಾನ್ಮಾರ್ ಅವ್ಯವಸ್ಥೆಯಲ್ಲಿದೆ ಮತ್ತು ಅದರ ಆರ್ಥಿಕತೆ (Economy) ಹದಗೆಟ್ಟಿದೆ. ಇದನ್ನು ವಿರೋಧಿಸಿ ಅಲ್ಲಿನ ಜನ ನಿರಂತರವಾಗಿ ಪ್ರತಿಭಟನೆಯಲ್ಲಿ ತೊಡಗಿದ್ದರು. ಇದನ್ನೂ ಓದಿ: ನಿವೃತ್ತಿ ಘೋಷಣೆ ಮಾಡಲು ಸಿದ್ಧ, ಆದ್ರೆ ಅದು ಗೌರವಯುತವಾಗಿ ಆಗಬೇಕು: ಶೆಟ್ಟರ್

Myanmar Military Attack 1

ವಿಶ್ವಸಂಸ್ಥೆಯ (United Nations) ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

ಮ್ಯಾನ್ಮಾರ್ ಮಿಲಿಟರಿ ಮತ್ತೊಮ್ಮೆ ಜನರಿಗೆ ಸೂಕ್ತ ಆಡಳಿತ ಒದಗಿಸದೆ ಯುದ್ಧದ ನಡವಳಿಕೆಯಿಂದ ನಾಗರಿಕರನ್ನು ನಿರ್ಲಕ್ಷಿಸಿದೆ ಎಂದು ಟರ್ಕ್ (Turk) ಆರೋಪಿಸಿದೆ.

ಅಮೆರಿಕ (America) ವಿದೇಶಾಂಗ ಇಲಾಖೆಯ ವಕ್ತಾರ ವೇದಾಂತ್ ಪಟೇಲ್ ಪ್ರತಿಕ್ರಿಯಿಸಿ, ಹಿಂಸಾತ್ಮಕ ದಾಳಿಗಳ ಆಡಳಿತವು ಮಾನವ ಜೀವನವನ್ನು ಕಡೆಗಣಿಸುತ್ತದೆ. ಅಂತಹ ಆಡಳಿತವನ್ನು ಬಲವಾಗಿ ಖಂಡಿಸುತ್ತೇವೆ. ಫೆಬ್ರವರಿ 2021ರ ದಂಗೆಯ ನಂತರ ಮ್ಯಾನ್ಮಾರ್ ಭೀಕರ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮ್ಯಾನ್ಮಾರ್‍ಗೆ ಮಾನವೀಯ ಜವಾಬ್ದಾರಿಯ ಸರ್ಕಾರ ಬೇಕಿದೆ. ಭೀಕರ ಹಿಂಸಾಚಾರವನ್ನು ನಿಲ್ಲಿಸಿ ಜನರ ಅಂತರ್ಗತ ಪ್ರಜಾಪ್ರಭುತ್ವದ ಆಕಾಂಕ್ಷೆಗಳನ್ನು ಗೌರವಿಸಲು ಅಮೆರಿಕ, ಮ್ಯಾನ್ಮಾರ್ ಆಡಳಿತಕ್ಕೆ ಕರೆ ನೀಡುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿ ಟಿಕೆಟ್ – ಜಾತಿವಾರು ಲೆಕ್ಕಾಚಾರ ಏನು?

TAGGED:americaeconomyTurkUnited Nationsಅಮೆರಿಕಟರ್ಕಿಮ್ಯಾನ್ಮಾರ್ವಿಶ್ವಸಂಸ್ಥೆವೈಮಾನಿಕ ದಾಳಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
5 minutes ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
21 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
38 minutes ago
Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
49 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
1 hour ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?