ಬೆತ್ತಲೆ ಫೋಟೋ ಹಂಚಿಕೊಂಡ ಆಸ್ಕರ್ ಪ್ರಶಸ್ತಿ ವಿಜೇತ ನಟಿ ಹಾಲೆ ಬೆರ್ಯೆ

Public TV
1 Min Read
Halle Berry 4

ಹಾಲಿವುಡ್ (Hollywood) ಖ್ಯಾತ ನಟಿ, ಆಸ್ಕರ್ (Oscar) ಪ್ರಶಸ್ತಿ ವಿಜೇತೆ ಹಾಲೆ ಬೆರ್ಯೆ (Halle Berry), ‘ನನಗೇನನಿಸುತ್ತೋ ಅದನ್ನೇ ಮಾಡುತ್ತೇನೆ’ ಎಂದು ಬೆತ್ತಲೆ ಫೋಟೋವನ್ನು (Nude Photo) ಶೇರ್ ಮಾಡಿದ್ದಾರೆ. ಈ ಫೋಟೋಗೆ ಕೆಲವರು ಮೆಚ್ಚುಗೆ ವ್ಯಕ್ತ ಪಡಿಸಿದ್ದರೆ, ಇನ್ನೂ ಕೆಲವರು ನೆಗೆಟಿವ್ ಕಾಮೆಂಟ್ ಮಾಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇರೋರು ಹೀಗೆ ಮಾಡುವುದು ಸರಿನಾ ಎಂದು ಪ್ರಶ್ನೆ ಮಾಡಿದ್ದಾರೆ.

Halle Berry 1

ಬೋಲ್ಡ್ ಪಾತ್ರಗಳ ಮೂಲಕವೇ ಫೇಮಸ್ ಆಗಿರುವ ಹಾಲೆ ಬೆರ್ಯೆ, ಜೇಮ್ಸ್ ಬಾಂಡ್ ಸರಣಿಯ ಡೈ ಅನದರ್ ಡೇ ಚಿತ್ರದಲ್ಲಿ ನಟಿಸಿದ್ದಾರೆ. ಕ್ಯಾಟ್ ವುಮನ್ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ಹಾಲೆ ನಟಿಸಿದ್ದಾರೆ. ಅತ್ಯುತ್ತಮ ನಟನೆಗಾಗಿ 2002ರಲ್ಲಿ ಆಸ್ಕರ್ ಪ್ರಶಸ್ತಿಯನ್ನೂ ಈ ನಟಿ ಪಡೆದುಕೊಂಡಿದ್ದಾರೆ.

ಈ ಹಿಂದೆಯೂ ಹಾಲೆ ತಮ್ಮ ಬೆತ್ತಲೆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಬಾರಿಯೂ ಬಾಲ್ಕನಿಯಲ್ಲಿ ಬೆತ್ತಲೆಯಾಗಿ ನಿಂತು, ಕೈಯಲ್ಲಿ ವೈನ್ ಗ್ಲಾಸ್ ಹಿಡಿದುಕೊಂಡಿರುವ ಫೋಟೋವನ್ನು ಟ್ವೀಟರ್ ನಲ್ಲಿ ಶೇರ್ ಮಾಡಿದ್ದಾರೆ.   ಅದಕ್ಕೆ ‘ಅಂದುಕೊಂಡಿದ್ದನ್ನು ಮಾಡುತ್ತೇನೆ’ ಎಂಬ ಕ್ಯಾಪ್ಷನ್ ಬೇರೆ ಕೊಟ್ಟಿದ್ದಾರೆ.

Halle Berry 2

ಈಗಲೂ ಹಾಲಿವುಡ್ ನಲ್ಲಿ ಉತ್ತಮ ಹೆಸರನ್ನು ಉಳಿಸಿಕೊಂಡಿರುವ ಮತ್ತು ದಿ ಮದರ್ ಶಿಪ್ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ಈ ನಟಿ ಬೆತ್ತಲೆ ಫೋಟೋ ಹಂಚಿಕೊಂಡಿದ್ದು ಕೆಲವರ ಇಷ್ಟವಾಗಿಲ್ಲ. ಹಾಗಾಗಿ ಹಾಲೆಗೆ ಬುದ್ದಿ ಹೇಳುವ ಪ್ರಯತ್ನ ಮಾಡಿದ್ದಾರೆ. ಅಭಿಮಾನಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Share This Article