ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರು (Basavaraj Bommai) ವಿಧಾನಸಭಾ ಚುನಾವಣೆಗೆ (Assembly Election) ಹಾವೇರಿ (Haveri) ಜಿಲ್ಲೆಯ ಶಿಗ್ಗಾಂವಿಯಲ್ಲಿ (Shiggaavi) ಸ್ಪರ್ಧಿಸಲಿದ್ದಾರೆ. ಈ ಹಿನ್ನೆಲೆ ಸಿಎಂ ಶನಿವಾರ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ಈಗಾಗಲೇ ಬೊಮ್ಮಾಯಿಯವರು ತಮ್ಮ ನಾಮಪತ್ರ ಸಲ್ಲಿಸಲು ಶಿಗ್ಗಾಂವಿ ಪ್ರಯಾಣದಲ್ಲಿದ್ದಾರೆ. ಬೆಂಗಳೂರಿನ ಆರ್‌ಟಿ ನಗರ ನಿವಾಸದಿಂದ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಅವರು ತೆರಳಿದ್ದಾರೆ. ವಿಶೇಷ ವಿಮಾನದ ಮೂಲಕ ಸಿಎಂ ಹುಬ್ಬಳ್ಳಿಗೆ ತೆರಳಲಿದ್ದು, ಬಳಿಕ ಅಲ್ಲಿಂದ ಶಿಗ್ಗಾಂವಿಗೆ ರಸ್ತೆ ಮಾರ್ಗದ ಮೂಲಕ ತೆರಳಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ – ಮಾಜಿ ಸಚಿವ ಆಸ್ಪತ್ರೆಗೆ ದಾಖಲು
ಸಿಎಂ 11 ಗಂಟೆ ವೇಳೆಗೆ ತಮ್ಮ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ನಾಮಪತ್ರ ಸಲ್ಲಿಕೆಯ ಬಳಿಕ ಬೊಮ್ಮಾಯಿ ಶಿಗ್ಗಾಂವಿಯ ತಮ್ಮ ನಿವಾಸದಲ್ಲಿ ಸಂಜೆ ವರೆಗೂ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ