ಪ್ರಚಾರದ ನೆಪದಲ್ಲಿ ಮಹಿಳೆಯರನ್ನ ಮಂಚಕ್ಕೆ ಕರೆದ ಆರೋಪ – JDS ಅಭ್ಯರ್ಥಿ ವಿರುದ್ಧ ಕ್ರಮಕ್ಕೆ ಆಗ್ರಹ

Public TV
1 Min Read
Tumakuru Protest

ತುಮಕೂರು: ಚುನಾವಣಾ ಪ್ರಚಾರಕ್ಕೆ ಮಹಿಳೆಯರನ್ನು ಕರೆಸುವ ನೆಪದಲ್ಲಿ ಲೈಂಗಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ತುಮಕೂರಿನ (Tumakuru) ನಗರ ವೃತ್ತದಲ್ಲಿ 5 ಸಾವಿರಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆ (Protest) ನಡೆಸಿದ್ದಾರೆ.

ಜೆಡಿಎಸ್‌ (JDS) ಅಭ್ಯರ್ಥಿ ಗೋವಿಂದರಾಜು ವಿರುದ್ಧ ಸಾವಿರಾರು ಮಹಿಳೆಯರು ಕ್ರಮಕ್ಕೆ ಆಗ್ರಹಿಸಿದ್ದಾರೆ. ಗೋವಿಂದರಾಜು ಅವರನ್ನ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು ಅವರಿಗೆ ʻಬಿʼ ಫಾರಂ ಕೊಡದೇ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Protest

ಇಂತಹ ವ್ಯಕ್ತಿತ್ವ ಉಳ್ಳವರು ಶಾಸಕರಾದರೆ ಕ್ಷೇತ್ರದ ಮಹಿಳೆಯರು ಹಗಲು ಹೊತ್ತಿನಲ್ಲಿ ಭಯದಿಂದ ಓಡಾಡುವ ವಾತಾವರಣ ಸೃಷ್ಟಿಯಾಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಚಿಂಚನಸೂರ್ ಆರೋಗ್ಯ ವಿಚಾರಿಸಿದ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು

Protest 1

ಮಹಿಳೆಯೊಬ್ಬರನ್ನ ಪ್ರಚಾರಕ್ಕೆ ಕರೆಯುವ ನೆಪದಲ್ಲಿ ಗೋವಿಂದರಾಜು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲದೇ ಇವರ 8 ಪೋಲಿ ಆಡಿಯೋಗಳು ಬಿಡುಗಡೆಯಾಗಿದ್ದು, ಜನಪ್ರತಿನಿಧಿಯಾಗಲು ಹೊರಟವರ ಬಣ್ಣ ಬಯಲಾಗಿದೆ. ಈ ಕೂಡಲೇ ಗೋವಿಂದರಾಜು ಅವರನ್ನ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮಹಿಳೆಯರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹೋಗುವವರು ಹೋಗಲಿ ಪಕ್ಷ ಸ್ವಚ್ಛವಾಗುತ್ತದೆ: ಶೆಟ್ಟರ್ ವಿರುದ್ಧ ಜಾರಕಿಹೊಳಿ ಕಿಡಿ 

Share This Article