ನಟ ಹಾಗೂ ತಮ್ಮ ಪತಿ ಅರ್ನವ್ ಕಿರುಕುಳ ನೀಡಿದ್ದಾರೆ ಎಂದು ಕಣ್ಣೀರಿಡುತ್ತಲೇ ಪೊಲೀಸರಿಗೆ ದೂರು ನೀಡಿದ್ದ ಕನ್ನಡದ ನಟಿ ದಿವ್ಯಾ ಶ್ರೀಧರ್ ಇತ್ತೀಚೆಗಷ್ಟೇ ಹೆಣ್ಣು (girl) ಮಗುವಿಗೆ ಜನ್ಮ ನೀಡಿದ್ದಾರೆ. ಮೊನ್ನೆಯಷ್ಟೇ ಆ ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿದ್ದರು. ಗಂಡನಿಂದ ದೂರವಿರುವ ಅವರು ಮಗುವನ್ನು ಬಲು ಪ್ರೀತಿಯಿಂದ ಬೆಳೆಸುತ್ತಿದ್ದಾರೆ. ಈಗ ಆಮಗುವನ್ನು ನೋಡಬೇಕು ಎಂದು ಅರ್ನವ್ ಕೇಳಿಕೊಂಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅನರ್ವ್, ‘ಬೇರೆಯವರ ಮಕ್ಕಳನ್ನು ಎತ್ತಿಕೊಂಡು ಮುದ್ದಾಡುತ್ತಿರುವೆ. ನನ್ನ ಮಗುವನ್ನು ನೋಡುವುದಕ್ಕೂ ಆಗುತ್ತಿಲ್ಲ. ದಯವಿಟ್ಟು ನನ್ನ ಮಗುವಿನ ವಿಡಿಯೋವನ್ನಾದರೂ ದಿವ್ಯಾ ಹಂಚಿಕೊಳ್ಳಲಿ ಎಂದು ಕೇಳಿಕೊಂಡಿದ್ದಾರೆ. ಕಾನೂನು ಮೂಲಕ ಹೋಗಬಹುದು. ಆದರೆ, ನನಗೆ ಅದು ಇಷ್ಟವಿಲ್ಲ’ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:Exclusive: ‘ಬಡವ ರಾಸ್ಕಲ್’ ನಿರ್ದೇಶಕನ ಜೊತೆ ಡಾಲಿ ಹೊಸ ಸಿನಿಮಾ
‘ಆಕಾಶದೀಪ’ (Akashadeepa) ಸೀರಿಯಲ್ ನಾಯಕಿ ದಿವ್ಯಾ ಶ್ರೀಧರ್ (Divya Shridhar) ಅವರು ಪತಿ ಅರ್ನವ್ (Arnav) ಕಿರುಕುಳ ವಿರುದ್ಧ ತಿರುಗಿ ಬಿದ್ದಿದ್ದರು. ಕಳೆದ ವರ್ಷ ದೂರು ನೀಡಿದ್ದರು. ಈ ಸಂಬಂಧ ಪೊಲೀಸರು ಅರ್ನವ್‌ನ ಬಂಧಿಸಿದ್ದರು. ಎರಡು ದಿನಗಳ ಹಿಂದೆ ನಟಿ ದಿವ್ಯಾ ಮುದ್ದಾದ ಹೆಣ್ಣು ಮಗುವಿಗೆ ಫೋಟೋ ಹಂಚಿಕೊಂಡಿದ್ದಾರೆ.
ಪ್ರೀತಿಸಿ ಮದುವೆಯಾದ ಗಂಡ ನಾನು ಗರ್ಭಿಣಿ ಆಗುತ್ತಿದ್ದಂತೆ ಮತ್ತೊಬ್ಬಳ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ. ನನಗೆ ಕಿರುಕುಳ ಕೊಡುತ್ತಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಕಿರುತೆರೆ ನಟ ಅರ್ನವ್ ಬಂಧನವಾಗಿತ್ತು. ಕಳೆದ ವರ್ಷ ಈ ವಿಚಾರ ದೊಡ್ಡದಾಗಿ ಸದ್ದು ಮಾಡಿತ್ತು. ಜೀವನದಲ್ಲಿ ನಡೆದ ಕಹಿ ಘಟನೆಯನ್ನು ಮರೆತು ಮಗಳ ಆಗಮನದ ಖುಷಿಯಲ್ಲಿದ್ದಾರೆ.
ನನ್ನ ಮುದ್ದು ಕಂದ ಲವ್ ಯೂ ಡಾರ್ಲಿಂಗ್ ಎಂದು ಮಗಳ ಆಗಮನದ ಬಗ್ಗೆ ನಟಿ ಹೇಳಿಕೊಂಡಿದ್ದರು. ಈ ಬೆನ್ನಲ್ಲೇ ಮುದ್ದಾದ ಮಗಳ ಮುಖವನ್ನ ರಿವೀಲ್ ಮಾಡಿದ್ದಾರೆ. ಪುಟ್ಟ ದೇವತೆ ಸ್ವಾಗತ ಎಂದು ಅಡಿಬರಹ ನೀಡಿ ಶೇರ್ ಮಾಡಿದ್ದಾರೆ. ಆಕಾಶದೀಪ, ಕಣ್ಮಣಿ ಸೀರಿಯಲ್ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೇವಂತಿ ಧಾರಾವಾಹಿ ಮೂಲಕ ತಮಿಳು ಕಿರುತೆರೆಗೆ ದಿವ್ಯಾ ಶ್ರೀಧರ್ ಕಾಲಿಟ್ಟರು.