ಶಿವಮೊಗ್ಗ: ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ತಿಳಿಸಿದರು.
ಶಿವಮೊಗ್ಗ ನಗರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಿದ್ದಾರೆ. ಚನ್ನಬಸಪ್ಪ ಗೆಲ್ಲುವವರೆಗೂ ಸುಮ್ಮನೆ ಕೂರುವುದಿಲ್ಲ. ಕಾಂತೇಶ್‍ಗೆ ಮುಂದಿನ ದಿನಗಳಲ್ಲಿ ಅವನ ಕಾರ್ಯವೈಖರಿ ನೋಡಿ ಪಕ್ಷ ಸೂಕ್ತಮಾನ ಕೊಡುವ ಬಗ್ಗೆ ನಿರ್ಧಾರ ಮಾಡುತ್ತದೆ ಎಂದರು.
ಇವತ್ತಿಗೆ ಇದು ಮುಗಿದು ಹೋಗಿಲ್ಲ. ಪಕ್ಷದ ನಾಯಕರು ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಮಾಡಿರುತ್ತಾರೆ ಎಂದ ಅವರು, ಆಯನೂರು ಮಂಜುನಾಥ್ ಜೆಡಿಎಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಜೆಡಿಎಸ್ ಸಿದ್ದಾಂತ ಮೆಚ್ಚಿ ಹೋಗಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದರು. ಇದನ್ನೂ ಓದಿ: ಅಯೋಧ್ಯೆಯ ಬಾಲರಾಮನ ನಿರ್ಮಾಣಕ್ಕೆ ಕರ್ನಾಟಕದ ಕಲ್ಲು
ಈಶ್ವರಪ್ಪ ನಿವಾಸಕ್ಕೆ ಆಗಮಿಸಿದ ಶಿವಮೊಗ್ಗ ನಗರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರಿಗೆ ಏನು ತಲೆಕೆಡಿಸಿಕೊಳ್ಳಬೇಡ ಗೆಲ್ಲುತ್ತೀಯಾ ಎಂದು ಹರಸಿದರು. ಚನ್ನಬಸಪ್ಪ ಅವರು ಈಶ್ವರಪ್ಪ ಕಾಲಿಗೆ ಬಿದ್ದು ನಮಸ್ಕರಿಸಿದರು. ಈ ವೇಳೆ ಈಶ್ವರಪ್ಪ – ಚನ್ನಬಸಪ್ಪ ಪರಸ್ಪರ ಸಿಹಿ ತಿನ್ನಿಸಿಕೊಂಡರು. ಇದನ್ನೂ ಓದಿ: ಕಾಂಗ್ರೆಸ್‌ನ ಅಂತಿಮ ಪಟ್ಟಿ ಬಿಡುಗಡೆ – 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ