ರಾಹುಲ್‌ಗೆ ಹಿನ್ನಡೆ – ಜೈಲು ಶಿಕ್ಷೆಗೆ ತಡೆ ಕೋರಿದ ಅರ್ಜಿ ವಜಾ

Public TV
2 Min Read
rahul gandhi 5

ಅಹಮದಾಬಾದ್‌: ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ (Defamation Case) ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ (Rahul Gandhi) ಹಿನ್ನಡೆಯಾಗಿದ್ದು ಗುಜರಾತ್‌ನ ಸೂರತ್‌ ಸೆಷನ್ಸ್‌ ಕೋರ್ಟ್‌ (Surat Court) ಜೈಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ.

ಮೋದಿ ಉಪನಾಮಕ್ಕೆ (Modi Surname) ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾರ್ಚ್ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಈ ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್‌ ಗಾಂಧಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

Narendra Modi

ಎರಡೂ ಕಡೆಯ ವಾದಗಳನ್ನು ಆಲಿಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್. ಪಿ. ಮೊಗೇರ ಅವರು ಇಂದು ರಾಹುಲ್‌ ಅರ್ಜಿಯನ್ನು ವಜಾಗೊಳಿಸಿ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದಾರೆ. ಇದನ್ನೂ ಓದಿ: ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ : ಈಶ್ವರಪ್ಪ

ಏನಿದು ಪ್ರಕರಣ?
ಕಳೆದ ಲೋಕಸಭಾ ಚುನಾವಣಾ (Loksabha Election) ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ (Kolara) ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ (Narendra Modi) ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ (BJP) ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

 

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ಮಾರ್ಚ್ 23 ರಂದು ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದರ ಜೊತೆ ಈ ಶಿಕ್ಷೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಕಾಶ ನೀಡಿ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿತ್ತು.

2 ವರ್ಷ ಜೈಲು ಶಿಕ್ಷೆಯಾದ ಹಿನ್ನೆಲೆಯಲ್ಲಿ ಲೋಕಸಭಾ ಸಚಿವಾಲಯ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.

Share This Article