ತಮ್ಮ ಆರೋಗ್ಯದ ಕುರಿತಾಗಿ ಹಲವಾರು ಯೂಟ್ಯೂಬ್ ಚಾನೆಲ್ ಗಳು ತಪ್ಪಾದ ಸುದ್ದಿಗಳನ್ನು ಪ್ರಸಾರ ಮಾಡುತ್ತಿವೆ. ಆರಾಧ್ಯ ಅಸ್ವಸ್ಥ, ಆರಾಧ್ಯ (Aaradhya Bachchan) ಇನ್ನಿಲ್ಲ ರೀತಿಯ ವರದಿಗಳನ್ನು ಪ್ರಸಾರ ಮಾಡುವ ಮೂಲಕ ತಪ್ಪಾದ ಮಾಹಿತಿಯನ್ನು ನೀಡುತ್ತಿವೆ. ಇಂತಹ ಯೂಟ್ಯೂಬ್ ಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ದೆಹಲಿ (Delhi) ಹೈಕೋರ್ಟಿಗೆ (Court) ಆರಾಧ್ಯ ಬಚ್ಚನ್ ಮೊರೆ ಹೋಗಿದ್ದರು. ಈ ಪ್ರಕರಣವನ್ನು ಕೋರ್ಟ್ ಗಂಭೀರವಾಗಿ ತಗೆದುಕೊಂಡಿದೆ.
ಅಮಿತಾಭ್ (Amitabh) ಮೊಮ್ಮಗಳು ನೀಡಿದ್ದ ದೂರಿನನ್ವಯ ದೆಹಲಿ ಹೈಕೋರ್ಟ್ ಹಲವಾರು ಯೂಟ್ಯೂಬ್ ಚಾಲನೆಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಆರಾಧ್ಯ ಕುರಿತಾಗಿ ತಪ್ಪಾದ ಮಾಹಿತಿ ಹಂಚಿಕೊಂಡ ಯೂಟ್ಯೂಬ್ ವರದಿಗಳನ್ನು ಗೂಗಲ್ ನಿಂದ ತೆಗೆದು ಹಾಕಬೇಕು ಎಂದು ಗೂಗಲ್ ಗೆ ನಿರ್ದೇಶಿಸಿದೆ. ಪ್ರತಿಯೊಂದು ಮಗುವಿನ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ‘ಬ್ರಹ್ಮಕಮಲ’ ಚಿತ್ರ
ನಟ ಅಭಿಷೇಕ್- ಐಶ್ವರ್ಯ ರೈ (Aishwarya Rai) ಪುತ್ರಿ ಆರಾಧ್ಯಗೆ (Aradhya) ಈಗಿನ್ನೂ 11 ವರ್ಷ. ಬಚ್ಚನ್ ಕುಟುಂಬದ ಕುಡಿ ಎನ್ನುವ ಕಾರಣಕ್ಕೆ ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ಆರಾಧ್ಯ ಹೆಸರಲ್ಲಿ ಅನೇಕ ಫ್ಯಾನ್‌ಪೇಜ್‌ಗಳು ಸಿದ್ಧಗೊಂಡಿವೆ. ಇದರ ಜೊತೆ ಕೆಲವು ಯೂಟ್ಯೂಬ್ ಚಾನೆಲ್‌ಗಳು ವೀವ್ಸ್ ಗಿಟ್ಟಿಸಿಕೊಳ್ಳಲು ಆರಾಧ್ಯ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದವು. ಅವುಗಳ ವಿರುದ್ಧ ಆರಾಧ್ಯ ಕ್ರಮಕ್ಕೆ ಮುಂದಾಗಿದ್ದರು.
ದೆಹಲಿ ಹೈಕೋರ್ಟ್‌ನಲ್ಲಿ ತಮ್ಮ ಬಗ್ಗೆ ಈ ರೀತಿ ಸುದ್ದಿ ಪ್ರಕಟ ಆಗದಂತೆ ತಡೆ ನೀಡಬೇಕು ಎಂದು ಆರಾಧ್ಯ ಮನವಿ ಮಾಡಿದ್ದಳು. ಈ ಪ್ರಕರಣದ ವಿಚಾರಣೆ ಇಂದು ನಡೆಯಿತು. ಸೆಲೆಬ್ರಿಟಿಗಳ ಬಗ್ಗೆ ಅನೇಕ ವದಂತಿಗಳ ಬಗ್ಗೆ ಸುದ್ದಿಯಾಗುತ್ತಲೇ ಇರುತ್ತದೆ. ಆದರೆ, ಅವರ ಮಕ್ಕಳ ಬಗ್ಗೆ ಈ ರೀತಿ ಸುಳ್ಳು ಸುದ್ದಿ ಹುಟ್ಟಿಕೊಂಡಾಗ ಅದನ್ನು ಒಪ್ಪಿಕೊಳ್ಳೋಕೆ ಬಚ್ಚನ್ ಕುಟುಂಬಕ್ಕೆ ಹಾಗೂ ಆರಾಧ್ಯಗೆ ಸಾಧ್ಯವಾಗಿಲ್ಲ. ಇಲ್ಲಸಲ್ಲದ ಸುಳ್ಳು ಸುದ್ದಿ ಬಿತ್ತರಿಸುವ ಖಾಸಗಿ ಯೂಟ್ಯೂಬರ್‌ಗಳಿಗೆ ಇದು ಎಚ್ಚರಿಕೆಯ ಗಂಟೆಯಾಗಲಿ ಎನ್ನುವ ಕಾರಣಕ್ಕೆ ಕೋರ್ಟ್ ಮೆಟ್ಟಿಲು ಏರಿದ್ದರು.