ಯೋಧರ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ – ಗ್ರೆನೇಡ್ ಬಳಕೆ ಸಾಧ್ಯತೆ

Public TV
2 Min Read
Terrorists Open Fire In Jammu Kashmir Poonch Soldiers

– ಹುತಾತ್ಮ  ಐವರು ಯೋಧರ ಹೆಸರು ಬಿಡುಗಡೆ
– ಇಂದು ಎನ್‍ಐಎ ತಂಡ ಸ್ಥಳಕ್ಕೆ ಭೇಟಿ

ಶ್ರೀನಗರ: ಭಿಂಬರ್ ಗಲಿ ಪ್ರದೇಶದ ಬಳಿ ನಡೆದ ಉಗ್ರರ (Terrorists) ದಾಳಿ ವೇಳೆ ಯೋಧರ (Soldiers) ವಾಹನದ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಗ್ರೆನೇಡ್ ದಾಳಿಯ ಸಾಧ್ಯತೆಯಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಸೇನೆ ಶಂಕಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ತಂಡ ಜಮ್ಮು ಕಾಶ್ಮೀರದ (Jammu And Kashmir) ಪೂಂಚ್ ಜಿಲ್ಲೆಗೆ ಆಗಮಿಸಲಿದೆ.

ಗುರುವಾರ ಜಮ್ಮು ಕಾಶ್ಮೀರದ ಪೂಂಚ್ (Poonch) ಜಿಲ್ಲೆಯ ಭಿಂಬರ್ ಗಲಿ ಪ್ರದೇಶದ ಬಳಿ ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಈ ವೇಳೆ ಐವರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಎನ್‍ಐಎ ತಂಡ ಶುಕ್ರವಾರ ಮಧ್ಯಾಹ್ನ 12:30ರ ಸುಮಾರಿಗೆ ದೆಹಲಿಯಿಂದ ವಿಧಿವಿಜ್ಞಾನ ತಜ್ಞರೊಂದಿಗೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಲಿದೆ.

Jammu and Kashmir soldiers truck fire

ದಾಳಿಯಲ್ಲಿ ಮೃತಪಟ್ಟ ಯೋಧರನ್ನು ಹವಿಲ್ದಾರ್ ಮನ್ದೀಪ್ ಸಿಂಗ್, ದೇಬಾಶಿಶ್ ಬಸ್ವಾಲ್, ಕುಲ್ವಂತ್ ಸಿಂಗ್, ಹಕ್ರ್ರಿಶನ್ ಸಿಂಗ್ ಮತ್ತು ಸೇವಕ್ ಸಿಂಗ್ ಎಂದು ಗುರುತಿಸಲಾಗಿದೆ. ಮೃತ ಯೋಧರೆಲ್ಲರೂ ಈ ಪ್ರದೇಶದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆಗೆ ನಿಯೋಜಿಸಲಾಗಿದ್ದ ರಾಷ್ಟ್ರೀಯ ರೈಫಲ್ಸ್ ಘಟಕದ ಸಿಬ್ಬಂದಿಯಾಗಿದ್ದಾರೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವ ಯೋಧನನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೇನಾ ಪ್ರಧಾನ ಕಚೇರಿಯ ಉತ್ತರ ಕಮಾಂಡ್ ಅಧಿಕೃತವಾಗಿ ಮಾತನಾಡಿ, ಅನಾಮಿಕ ಉಗ್ರರು ಸೇನಾ ವಾಹನದ ಮೇಲೆ ಗುಂಡು ಹಾರಿಸಿದ್ದಾರೆ. ಭಾರೀ ಮಳೆ ಹಾಗೂ ಕಡಿಮೆ ಗೋಚರತೆಯ ಲಾಭವನ್ನು ಉಗ್ರರು ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಘಟನೆಗೆ ಉಗ್ರರು ಗ್ರೆನೇಡ್‍ಗಳನ್ನು ಬಳಸಿದ್ದರಿಂದ ವಾಹನಕ್ಕೆ ಬೆಂಕಿ ಹತ್ತಿಕೊಂಡಿದೆ ಎಂದು ತಿಳಿಸಿದರು.

ಜೈಶ್ ಬೆಂಬಲಿತ ಉಗ್ರರ ಗುಂಪು, ಪೀಪಲ್ಸ್ ಆ್ಯಟಿ ಫ್ಯಾಸಿಸ್ಟ್ ಫ್ರಂಟ್ (ಪಿಎಎಫ್‍ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ನಾಲ್ವರು ಉಗ್ರರು ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಇದನ್ನೂ ಓದಿ: ಅರಕಲಗೂಡಿನಲ್ಲಿ ದಿಢೀರ್‌ ಬೆಳವಣಿಗೆ – ಕೈ ಟಿಕೆಟ್‌ ಆಕಾಂಕ್ಷಿ ಬಿಜೆಪಿ ಅಭ್ಯರ್ಥಿ?

ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ ವಿದೇಶಾಂಗ ಸಚಿವರ ಸಭೆಗಾಗಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಘೋಷಿಸಿದ ದಿನವೇ ಉಗ್ರರ ದಾಳಿ ನಡೆದಿದೆ. ಪ್ರಮುಖವಾಗಿ, ಮೇ ತಿಂಗಳಲ್ಲಿ ಶ್ರೀನಗರದಲ್ಲಿ ಜಿ20 ಪ್ರವಾಸೋದ್ಯಮ ವಕಿರ್ಂಗ್ ಗ್ರೂಪ್ ಸಭೆಯನ್ನು ಸಹ ನಿಗದಿಯಾಗಿದೆ. ಕಳೆದ ವಾರ ಕೇಂದ್ರಾಡಳಿತ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪರಿಶೀಲಿಸಿದ್ದರು. ಇದನ್ನೂ ಓದಿ: ಅತೀಕ್ ಅಹ್ಮದ್ 1,169 ಕೋಟಿ ರೂ. ಒಡೆಯ- ಹುಡುಕಿದಷ್ಟು ಸಿಗುತ್ತಿದೆ ಗ್ಯಾಂಗಸ್ಟರ್‌ನ ಆಸ್ತಿ

Share This Article