ಬೆಂಗಳೂರು: ಬಿಸಿಲ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿಗೆ (Bengaluru) ವರುಣನ ಸಿಂಚನವಾಗಿದೆ. ಮುಂದಿನ ಮೂರು ದಿನಗಳಲ್ಲಿ ಬೆಂಗಳೂರು (Bengaluru) ಸೇರಿ ರಾಜ್ಯದ ಹಲವೆಡೆ ಮಳೆಯಾಗುವ (Rain) ಮುನ್ಸೂಚನೆಯನ್ನ ಹವಮಾನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸ್ವಲ್ಪ ಬಿಸಿಲಿನ ಪ್ರಮಾಣ ಕಡಿಮೆಯಾಗಿದೆ. ತಮಿಳುನಾಡಿನಲ್ಲಿ (Tamil Nadu) ಟ್ರಫ್ ಉಂಟಾಗಿರುವ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಹಲವಡೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಏಪ್ರಿಲ್ 25ರ ತನಕ ಗುಡುಗು ಸಹಿತ ಮಳೆಯಾಗಬಹುದೆಂಬ ಅಲರ್ಟ್ ನೀಡಿದ್ದು, ರಾಜ್ಯದಲ್ಲಿ ಬಿಸಿಲಿನ ತಾಪಮಾನವೂ ಇಳಿಕೆಯಾಗಲಿದೆ.
ಕಳೆದ ಎರಡು ದಿನಗಳ ಹಿಂದೆ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದೆ ಎಂದು ವರದಿಯಲ್ಲಿ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ಮಳೆಯಾಗಲಿದ್ದು, ನಗರದಲ್ಲಿಯೂ ಬಿಸಿಲಿನ ತಾಪಮಾನ ಇಳಿಕೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ 3 ದಿನ ಮಳೆಯಾಗುವ ಸಂಭವವಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ಕೋಲಾರ, ಬಳ್ಳಾರಿ, ಕೊಡಗು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಅದೇನೆ ಆಗ್ಲಿ ಈ ವರ್ಷದಲ್ಲಿ ದಾಖಲಾದ ಅತ್ಯಾಧಿಕ 36.5 ಡಿಗ್ರಿ ಸೆಲ್ಸಿಯಸ್ ತಾಪಮಾನ ಮಳೆಯ ಎಫೆಕ್ಟ್‌ನಿಂದ ತಗ್ಗಲಿದೆ. ಮಳೆಯ ಸಿಂಚನದಿಂದ ಬಿಸಿಲಿನ ಹೊಡೆತದಿಂದ ಜನ ಸ್ವಲ್ಪ ನಿರಾಳರಾಗಬಹುದು. ಇದನ್ನೂ ಓದಿ: ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ