ಹಾರ್ದಿಕ್ ಪಾಂಡ್ಯ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ಯಶ್ ವೀಡಿಯೋ ವೈರಲ್

Public TV
2 Min Read
yash 1 1

‘ಕೆಜಿಎಫ್ 2′ (KGF 2) ಸೂಪರ್ ಸ್ಟಾರ್ ಯಶ್‌ಗೆ (Yash) ಸಿನಿಮಾ ರಂಗವಲ್ಲದೇ ಬೇರೇ ಬೇರೇ ಕ್ಷೇತ್ರಗಳಲ್ಲಿ ಸ್ನೇಹಿತರಿದ್ದಾರೆ. ಇದೀಗ ಇತ್ತೀಚಿಗೆ ನಡೆದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ (Hardik Pandya) ಮದುವೆಯಲ್ಲಿ (Wedding)  ನಟ ಯಶ್ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ:ದಾಂಪತ್ಯ ಜೀವನ, ಮಗನ ಆರೋಗ್ಯದ ಬಗ್ಗೆ ಅಸಲಿ ವಿಚಾರ ಬಿಚ್ಚಿಟ್ಟ ಅವಿನಾಶ್‌ ದಂಪತಿ

YASH HARDIK PANDYA AND KRUNAL PANDYA

ಈ ವರ್ಷ ಫೆಬ್ರವರಿಯಲ್ಲಿ ಹಾರ್ದಿಕ್ ಪಾಂಡ್ಯ- ನತಾಶಾ ಜೊತೆ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ಮದುವೆ ಆದರು. ಉದಯಪುರದಲ್ಲಿ ನಡೆದ ಅದ್ದೂರಿ ವಿವಾಹ ಸಮಾರಂಭಕ್ಕೆ ಅನೇಕ ಗಣ್ಯರು ಭಾಗಿ ಆಗಿದ್ದರು. ಕ್ರಿಕೆಟ್ ಮತ್ತು ಸಿನಿಮಾ ಗಣ್ಯರು ಸಹ ಹಾರ್ದಿಕ್ ಪಾಂಡ್ಯ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದರು. ರಾಕಿಂಗ್ ಸ್ಟಾರ್ ಭಾಗಿಯಾಗಿದ್ದ ವಿಡಿಯೋಗಳು ಈಗ ವೈರಲ್ ಆಗಿದೆ. ಯಶ್ ಭಾಗಿಯಾಗಿದ್ದು ಅಷ್ಟೇ ಅಲ್ಲದೇ, ಹಾರ್ದಿಕ್ ಪಾಂಡ್ಯ ಜೊತೆ ಸಖತ್ ಆಗಿ ಡಾನ್ಸ್ ಮಾಡಿದ್ದರು. ಪಾಂಡ್ಯ ಜೊತೆ ಡಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಯಶ್ ಸಖತ್ ಸ್ಟೈಲಿಶ್ ಆಗಿ ಕಾಣಿಸುತ್ತಿದ್ದರು. ಕಪ್ಪು ಬಣ್ಣದ ಶೆರ್ವಾನಿಯಲ್ಲಿ ಯಶ್ ಮಿಂಚಿದ್ದಾರೆ. ಮದುವೆಯಲ್ಲಿ ಹಾರ್ದಿಕ್-ಯಶ್ ಮಸ್ತ್ ಆಗಿ ಡಾನ್ಸ್ ಮಾಡಿದ್ದಾರೆ. ಹಾರ್ದಿಕ್ ಮತ್ತು ಯಶ್ ಇಬ್ಬರೂ ಉತ್ತಮ ಸ್ನೇಹಿತರು. ಹಾಗಾಗಿ ಯಶ್ ಕ್ರಿಕೆಟಿಗ ಪಾಂಡ್ಯ ಮದುವೆಗೆ ಹಾಜರಾಗಿದ್ದರು. ಯಶ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ‘ಕೆಜಿಎಫ್-2’ ರಿಲೀಸ್ ಆಗಿ ಒಂದು ವರ್ಷವಾಗಿದೆ. ಆದರೂ ಮುಂದಿನ ಸಿನಿಮಾ ಅನೌನ್ಸ್ ಮಾಡಿಲ್ಲ. ಯಾವಾಗ ಹೊಸ ಸಿನಿಮಾ ಅನೌನ್ಸ್ ಮಾಡುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಯಶ್ ಕಡೆಯಿಂದ ಅಧಿಕೃತ ಅಪ್‌ಡೇಟ್‌ಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ. ಈ ನಡುವೆ ‘ಕೆಜಿಎಫ್ 3’ ಬರುವ ಬಗ್ಗೆ ಫ್ಯಾನ್ಸ್‌ಗೆ ಸಿಹಿಸುದ್ದಿ ಕೂಡ ಸಿಕ್ಕಿದೆ.

Share This Article