ನಟ ಶರತ್ ಬಾಬು ಆರೋಗ್ಯ ಮತ್ತಷ್ಟು ಗಂಭೀರ: ಹಿರಿಯ ವೈದ್ಯರಿಂದ ಚಿಕಿತ್ಸೆ

Public TV
1 Min Read
SHARATH BABU

ನ್ನಡದ ಅಮೃತವರ್ಷಿಣಿ (Amrutavarshini) ಸೇರಿದಂತೆ ದಕ್ಷಿಣದ ನಾನಾ ಭಾಷೆಗಳ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ ಶರತ್ ಬಾಬು (Sharat Babu) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ ಅವರ ಕಿಡ್ನಿ, ಲಿವರ್, ಲಂಗ್ಸ್ ಸೇರಿದಂತೆ ಮತ್ತಿತರ ಅಂಗಾಂಗ ತೊಂದರೆಯಿಂದ ಅವರು ಬಳಲುತ್ತಿದ್ದಾರಂತೆ. ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆಯಂತೆ.

Sharath Babu 2

ಸದ್ಯ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯದ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದರು. ದಿಢೀರ್ ಅಂತ ಮತ್ತೆ ಆರೋಗ್ಯದಲ್ಲಿ ಏರುಪೇರಾದ ಕಾರಣದಿಂದಾಗಿ ಅವರನ್ನು ಹೈದರಾಬಾದ್ (Hyderabad) ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.  ಇದನ್ನೂ ಓದಿ:ಎಲೋನ್ ಮಸ್ಕ್ ಬಗ್ಗೆ ಸಿಟ್ಟಾದ ಬಿಗ್ ಬಿ: ಹಣ ಕಳೆದುಕೊಂಡ ಬಗ್ಗೆ ಅಮಿತಾಭ್ ಕಿಡಿಕಿಡಿ

Sharath Babu 3

ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ಶಿಫ್ಟ್ ಮಾಡಿದ ನಂತರ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು, ಅಲ್ಲದೇ ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಸಾಮಾನ್ಯ ವಾರ್ಡ್ ಗೆ ಸ್ಥಳಾಂತರ ಮಾಡುವ ಕುರಿತು ವೈದ್ಯರು ನಿರ್ಧಾರ ತಗೆದುಕೊಂಡಿದ್ದಾರೆ ಎನ್ನುವ ಮಾಹಿತಿಯೂ ಇತ್ತು. ಆದರೆ, ಮತ್ತೆ ದಿಢೀರ್ ಅಂತ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆಯಂತೆ.

SHARATH BABU 1

ನಾಲ್ಕು ದಶಕಗಳ ಕಾಲ ಚಿತ್ರೋದ್ಯಮದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿರುವ ಶರತ್ ಬಾಬು, ಹುಟ್ಟಿದ್ದು ಆಂಧ್ರಪ್ರದೇಶದಲ್ಲಿ. ಆದರೂ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ಅವರು ಅಮೃತವರ್ಷಿಣಿ ಶರತ್ ಬಾಬು ಎಂದೇ ಫೇಮಸ್ ಆಗಿದ್ದಾರೆ. ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಅವರದ್ದು

Share This Article