Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳದಲ್ಲಿ ದೇಶದ ಮೊದಲ ವಾಟರ್ ಮೆಟ್ರೋ, ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇರಳದಲ್ಲಿ ದೇಶದ ಮೊದಲ ವಾಟರ್ ಮೆಟ್ರೋ, ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

Latest

ಕೇರಳದಲ್ಲಿ ದೇಶದ ಮೊದಲ ವಾಟರ್ ಮೆಟ್ರೋ, ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

Public TV
Last updated: April 25, 2023 4:55 pm
Public TV
Share
2 Min Read
Water Metro Vande Bharat Express Train Narendra Modi Kerala
SHARE

ತಿರುವನಂತಪುರಂ: 2 ದಿನಗಳ ಕೇರಳ (Kerala) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ತಿರುವನಂತಪುರಂ (Thiruvananthapuram) ಹಾಗೂ ಕಾಸರಗೋಡು (Kasargod) ನಡುವೆ ಸಂಚರಿಸುವ ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ (Vande Bharat Express Train) ಹಾಗೂ ದೇಶದ ಮೊದಲ ವಾಟರ್ ಮೆಟ್ರೋಗೆ (Water Metro) ಚಾಲನೆ ನೀಡಿದ್ದಾರೆ.

Narendra Modi 3

ಮಂಗಳವಾರ ಬೆಳಗ್ಗೆ 11:10ರ ವೇಳೆಗೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್‌ನಿಂದ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ ನೀಡಿದ್ದಾರೆ. ಬಳಿಕ ಕೊಚ್ಚಿಗೆ (Kochi) ತೆರಳಿ ದೇಶದ ಮೊದಲ ವಾಟರ್ ಮೆಟ್ರೋಗೆ ಮೋದಿ ಚಾಲನೆ ನೀಡಿದರು.

Kerala Water Metro 1

ಕೇರಳದ ಮೊದಲ ವಂದೇ ಭಾರತ್ ರೈಲು ರಾಜಧಾನಿ ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶ್ಯೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು, ಕಾಸರಗೋಡು ಹೀಗೆ ಒಟ್ಟು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ (PMO) ತಿಳಿಸಿದೆ. ಇದನ್ನೂ ಓದಿ: ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಕೂಗು – ಹಾಸನದಲ್ಲಿ ಯಾರಿಗೆ ಒಲಿಯಲಿದೆ ಜಯ?

Kerala Water Metro

ಕೊಚ್ಚಿಯಲ್ಲಿ ಪ್ರಾರಂಭವಾಗಿರುವ ನೀರಿನ ಮೆಟ್ರೋ ಯೋಜನೆ ಕೊಚ್ಚಿ ಮತ್ತು ಸುತ್ತಮುತ್ತಲಿನ ಊರಿನ ಜನರಿಗೆ ಸುರಕ್ಷಿತ ಹಾಗೂ ಕೈಗೆಟಕುವ ದರದಲ್ಲಿ ಪ್ರಯಾಣವನ್ನು ಒದಗಿಸಲಿದೆ. ಇದು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ನೀರಿನ ಮೆಟ್ರೋ ಯೋಜನೆ ಮೊದಲ ಹಂತದಲ್ಲಿ 2 ಮಾರ್ಗಗಳಲ್ಲಿ 8 ವಿದ್ಯುತ್ ಹೈಬ್ರಿಡ್ ದೋಣಿಗಳೊಂದಿಗೆ ನೌಕಾಯಾನವನ್ನು ಪ್ರಾರಂಭಿಸುತ್ತದೆ. ಹೈಕೋರ್ಟ್‌ನಿಂದ ವೈಪಿನ್‌ವರೆಗಿನ ಏಕಮುಖ ಪ್ರಯಾಣಕ್ಕೆ 20 ರೂ. ಇದ್ದು, ವೈಟ್ಟಿಲದಿಂದ ಕಾಕ್ಕನಾಡು ಮಾರ್ಗಕ್ಕೆ 30 ರೂ. ನಿಗದಿಪಡಿಸಲಾಗಿದೆ.

ವಾಟರ್ ಮೆಟ್ರೋ ಯೋಜನೆಯ ಒಟ್ಟು ವೆಚ್ಚ 1,137 ಕೋಟಿ ರೂ.ಯದ್ದಾಗಿದೆ. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳ ಸುತ್ತ ಈ ಮೆಟ್ರೋ ಸಂಚಾರ ಮಾಡಲಿದೆ. 38 ಟರ್ಮಿನಲ್‌ಗಳ ಮೂಲಕ ಪ್ರಯಾಣಿಕರಿಗೆ ಸೇವೆ ನೀಡಲಿದೆ. ಈ ವಾಟರ್ ಮೆಟ್ರೋ ಯೋಜನೆಯು 78 ಕಿ.ಮೀ. ವ್ಯಾಪಿಸಿದ್ದು ಇಲ್ಲಿನ ದ್ವೀಪಗಳಲ್ಲಿ ವಾಸಿಸುವ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ. ಈ ವಾಟರ್ ಮೆಟ್ರೋ ರಬ್ಬರ್ ಟೈರ್ಡ್ ಎಲೆಕ್ಟ್ರಿಕ್ ಬೋಗಿಗಳನ್ನು ಹೊಂದಿದ್ದು, ಇದನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತಯಾರು ಮಾಡಲಾಗಿದೆ. ಇದನ್ನೂ ಓದಿ: ಹಾಲಿ ಸಚಿವರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ತ್ರಿಕೋನ ಪೈಪೋಟಿ

TAGGED:keralakochinarendra modiVande Bharat Express TrainWater Metroಕೇರಳಕೊಚ್ಚಿನರೇಂದ್ರ ಮೋದಿವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುವಾಟರ್ ಮೆಟ್ರೋ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Pralhad Joshi 1
Latest

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ

Public TV
By Public TV
32 minutes ago
Droupadi Murmu Ram Temple
Ayodhya Ram Mandir

ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Public TV
By Public TV
32 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
32 minutes ago
Yatnal
Davanagere

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
54 minutes ago
Mantralayam Sri Raghavendra Swamy Matha
Districts

ಮಂತ್ರಾಲಯದಲ್ಲಿ ಯುಗಾದಿ ಸಂಭ್ರಮ – ಮೂಲ ರಾಮದೇವರಿಗೆ ತೈಲ ಅಭ್ಯಂಗನ

Public TV
By Public TV
1 hour ago
former corporation member who had been absconding for 7 years without appearing in court arrested
Court

ಧಾರವಾಡ | ಕೋರ್ಟ್‌ಗೆ ಹಾಜರಾಗದೇ 7 ವರ್ಷ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?