ಬೆಂಗಳೂರು: ರಾಜ್ಯದಲ್ಲಿ (Karnataka) ಮುಸ್ಲಿಂ ಮೀಸಲಾತಿ (Muslim Reservation) ರದ್ದು ನಿರ್ಧಾರವನ್ನು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ. ಸುಪ್ರೀಂಕೋರ್ಟ್‌ಗೆ (Supreme Court) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸರ್ಕಾರ ಈ ವಿಚಾರವನ್ನು ಸಮರ್ಥಿಸಿಕೊಂಡಿದೆ.
ಧರ್ಮದ ಆಧಾರದ ಮೇಲೆ ಮೀಸಲಾತಿ ಸಂವಿಧಾನ ಬಾಹಿರ. ಸಂವಿಧಾನದ 14, 15 ಮತ್ತು 16ನೇ ವಿಧಿ ಮತ್ತು ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ತತ್ವಗಳ ಆದೇಶಕ್ಕೆ ವಿರುದ್ಧವಾಗಿದೆ. ಈ ಹಿಂದೆ ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ಒದಗಿಸಲಾಗಿದೆ ಎಂಬ ಕಾರಣಕ್ಕಾಗಿ ಅದನ್ನೇ ಶಾಶ್ವತವಾಗಿ ಮುಂದುವರಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಮೀಸಲಾತಿಗಳನ್ನು ನೀಡುವುದು ಮತ್ತು ಅದರ ಪರಿಷ್ಕೃರಣೆ ಸಂಪೂರ್ಣವಾಗಿ ನೆಲದ ವಾಸ್ತವಗಳ ಮೇಲೆ ಅವಲಂಬಿತವಾದ ಕಾರ್ಯವಾಗಿದೆ ಎಂದು ಹೇಳಿದೆ.
ಯಾವ ಗುಂಪನ್ನು ಹಿಂದುಳಿದ ವರ್ಗ ಎಂದು ಪರಿಗಣಿಸಬೇಕು ಮತ್ತು ಅವರಿಗೆ ಯಾವ ಪ್ರಯೋಜನಗಳು ನೀಡಬೇಕು ಎನ್ನುವುದು ಪ್ರತಿ ರಾಜ್ಯದ ಸಾಂವಿಧಾನಿಕ ಕರ್ತವ್ಯವಾಗಿದೆ. ಮುಸ್ಲಿಮರನ್ನು ಹಿಂದುಳಿದವರೆಂದು ಸೇರಿಸಲು ಆಯೋಗಗಳು ಶಿಫಾರಸು ಮಾಡಿದರೂ ಕಾನೂನಿನ ಪ್ರಕಾರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದೆ. ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ತಡೆ – ಮೇ 9 ರವರೆಗೆ ಜಾರಿ ಬೇಡವೆಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ
ಕರ್ನಾಟಕದಲ್ಲಿ ಮುಸ್ಲಿಮರ ಮೀಸಲಾತಿ (Karnataka Muslim Reservation) ರದ್ದುಗೊಳಿಸಿದ್ದ ಆದೇಶಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ (Supreme Court) ತಡೆಯಾಜ್ಞೆ ನೀಡಿತ್ತು. ಮೇ 9 ರವರೆಗೆ ಈ ಆದೇಶವನ್ನು ಜಾರಿಗೊಳಿಸದಂತೆ ಕರ್ನಾಟಕ ಸರ್ಕಾರಕ್ಕೆ (Karnataka Government) ಸುಪ್ರೀಂ ಕೋರ್ಟ್ ಹೇಳಿದೆ. ಇದನ್ನೂ ಓದಿ: ಆಪರೇಷನ್ ಕಾವೇರಿ- 135 ಮಂದಿ ಭಾರತೀಯರಿದ್ದ 3ನೇ ತಂಡ ಸೌದಿಗೆ ರೀಚ್