ನಕಲಿ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ಹಾರಲು ಸಂಚು ರೂಪಿಸಿದ್ದ ಆರೋಪಿ ಅಂದರ್‌

Public TV
1 Min Read
fake passport man arrest

ಬೆಂಗಳೂರು: ನಕಲಿ ಪಾಸ್‌ಪೋರ್ಟ್‌ (Fake Passport) ಬಳಸಿ ವಿದೇಶಕ್ಕೆ ಹೋಗಲು ಸಂಚು ರೂಪಿಸಿದ್ದ ಪಂಜಾಬ್‌ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪಂಜಾಬ್ ಮೂಲದ ಕುಲ್ವಂತ್ ಸಿಂಗ್ ಬಂಧಿತ ಆರೋಪಿ. ಈತ ಆಸ್ಟ್ರೇಲಿಯಾಗೆ ಹೋಗಲು ನಕಲಿ ಪಾಸ್‌ಪೋರ್ಟ್ ಮಾಡಿಸಿದ್ದ. ಹಳೆ ಪಾಸ್‌ಪೋರ್ಟ್‌ನಲ್ಲಿ ವೀಸಾ ರಿಜೆಕ್ಟ್ ಆಗಿದ್ದ ಕಾರಣ ನಕಲಿ ಆಧಾರ್ ಕಾರ್ಡ್ ಸಲ್ಲಿಸಿ ನಕಲಿ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ. ಇದನ್ನೂ ಓದಿ: ಕುಡಿಯಲು ಹಣ ಕೊಡದಿದ್ದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಪಾಪಿ ಮಗ

passport web

ಈತನ ಸಹೋದರ ಕೂಡ ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡಿಕೊಂಡಿದ್ದ. ಹೀಗಾಗಿ ತಾನೂ ಕೂಡ ಆಸ್ಟ್ರೇಲಿಯಾಗೆ ತೆರಳಿ ಹಣ ಮಾಡಲು ಈ ರೀತಿ ಅಡ್ಡ ದಾರಿ ಹಿಡಿದು ಪಾಸ್‌ಪೋರ್ಟ್ ಮಾಡಿಸಿರುವುದಾಗಿ ವಿಚಾರಣೆ ವೇಳೆ ಆರೋಪಿ ಬಾಯಿಬಿಟ್ಟಿದ್ದಾನೆ.

ಲೇಬರ್ ವೀಸಾದಲ್ಲಿ ವಿದೇಶಕ್ಕೆ ತೆರಳಲು ಆರೋಪಿ ಬಯಸಿದ್ದ. ಅನುಮಾನಗೊಂಡ ಏರ್‌ಪೋರ್ಟ್ ಸಿಬ್ಬಂದಿ ವಶಕ್ಕೆ ಪಡೆದು ಪರಿಶೀಲನೆ ಮಾಡಿದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿ ತನಿಖೆ ವೇಳೆ ಎರಡು ಪಾಸ್‌ಪೋರ್ಟ್ ಇರುವುದು ಗೊತ್ತಾಗಿದೆ. ಈ ಹಿನ್ನಲೆ ಆರೋಪಿಯನ್ನ ಏರ್‌ಪೋರ್ಟ್‌ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಲಿಫ್ಟ್‌ಗೆ ಸಿಲುಕಿ 26ರ ಯುವಕ ಸಾವು

ವಿಚಾರಣೆ ವೇಳೆ ಮುಂಬೈ ಪಾಸ್‌ಪೋರ್ಟ್ ಕಚೇರಿಯಲ್ಲಿ ನಕಲಿ ಮಾಡಿರುವುದು ತಿಳಿದು ಬಂದಿದೆ. ಹೀಗಾಗಿ ಏರ್‌ಪೋರ್ಟ್‌ ಪೊಲೀಸರು ಮುಂಬೈ ಪಾಸ್‌ಪೋರ್ಟ್ ಅಧಿಕಾರಿಗಳಿಗೆ ನೋಟಿಸ್‌ ಕೊಟ್ಟಿದ್ದಾರೆ.

Share This Article