ಕುಡಿಯಲು ಹಣ ಕೊಡದಿದ್ದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಪಾಪಿ ಮಗ

Public TV
1 Min Read
Liquor Party 2 e1682567560961

ಬೆಂಗಳೂರು: ಮದ್ಯಪಾನ (Liquor Drinking) ಮಾಡಲು ಹಣ ಕೊಡಲಿಲ್ಲ ಅನ್ನೋ ಕಾರಣಕ್ಕೆ ಮಗನೇ ತಂದೆಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ (Govindarajanagar Police Station) ವ್ಯಾಪ್ತಿಯಲ್ಲಿ ನಡೆದಿದೆ.

ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ ಬಸವರಾಜು (60) ಕೊಲೆಯಾದ ವ್ಯಕ್ತಿ, ಆಟೋ ಚಾಲಕನಾಗಿದ್ದ ಮಗ ನೀಲಾಧರ ಕೊಲೆ ಆರೋಪಿಯಾಗಿದ್ದಾನೆ. ಇದನ್ನೂ ಓದಿ: ಆರಂಭಗೊಂಡ ಕೆಲವೇ ಗಂಟೆಗಳಲ್ಲಿ ವಂದೇ ಭಾರತ್ ಎಕ್ಸಪ್ರೆಸ್ ಅನ್ನು ವಿರೂಪಗೊಳಿಸಿದ ‘ಕೈ’ ಕಾರ್ಯಕರ್ತರು

CRIME

ಇಲ್ಲಿನ ಮಾರೇನಹಳ್ಳಿ ಪಿಎಸ್ ಬಡಾವಣೆಯ ಶೆಡ್‌ವೊಂದರಲ್ಲಿ ಕೊಲೆಯಾದ 15 ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಕೇಸ್‌ ದಾಖಲಿಸಿಕೊಂಡಿದ್ದ ಗೋವಿಂದರಾಜನಗರ ಪೊಲೀಸರು ತನಿಖೆ ನಡೆಸಿದಾಗ ಮಗನಿಂದಲೇ ಕೊಲೆಯಾಗಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ಬಾಡಿಗೆ ವಾಹನದಲ್ಲಿ ಬರುತ್ತಿದ್ದ ಯೋಧರು – ದಾಳಿಗೆ ನಕ್ಸಲರಿಂದ 50 ಕೆಜಿ ಸುಧಾರಿತ IED ಬಳಕೆ

ವಿಚಾರಣೆ ವೇಳೆ ನೀಲಾಧರ ತನ್ನ ತಂದೆ ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಅನ್ನೋ ಕಾರಣಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

Share This Article