ಬೆಂಗಳೂರು: ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆ 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗವು (Election Commission) ನೀಡಿದೆ. ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ (Ballot Paper Voting) ನಡೆಯಲಿದೆ.
ಏಪ್ರಿಲ್ 29ರಿಂದ ಮೇ 6ರವರೆಗೆ ಬ್ಯಾಲೆಟ್ ಪೇಪರ್ ವೋಟಿಂಗ್ ನಡೆಯಲಿದ್ದು, 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಹಾಗೂ ವಿಕಲಚೇತನರಿಗೆ ಚುನಾವಣಾ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ ನೀಡುವ ಮೂಲಕ ಮತದಾನ ಪ್ರಕ್ರಿಯೆಯನ್ನು ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 12.15 ಲಕ್ಷ ಜನ 80 ವರ್ಷ ಮೇಲ್ಪಟ್ಟ ಮತದಾರರಿದ್ದು, ಮನೆಯಿಂದಲೇ ಮತದಾನ ಮಾಡಲಿದ್ದಾರೆ. ಇದನ್ನೂ ಓದಿ: ಖರ್ಗೆ ಹೇಳಿಕೆಯಿಂದ ಬಿಜೆಪಿಗೆ 2-3% ಮತ ಹೆಚ್ಚಳವಾಗಲಿದೆ: ಸುಧಾಕರ್
ಬೆಂಗಳೂರಿನಲ್ಲಿ (Bengaluru) 2 ಲಕ್ಷಕ್ಕೂ ಹೆಚ್ಚು ಮಂದಿ 80 ವರ್ಷ ಮೇಲ್ಪಟ್ಟವರಿದ್ದಾರೆ. ಅದರಲ್ಲಿ 9,152 ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಲಿದ್ದಾರೆ. ಇದನ್ನೂ ಓದಿ: ‘ಹೊಳೆ’ಯನ್ನು ಈಜಿ ‘ನರಸೀಪುರ’ ದಡ ಸೇರುವವರ‍್ಯಾರು?
ಎಷ್ಟು ಜನ ಮನೆಯಿಂದ ಮತದಾನ?
ಬೆಂಗಳೂರು ಕೇಂದ್ರ- 1,995
ಬೆಂಗಳೂರು ಉತ್ತರ- 2,298
ಬೆಂಗಳೂರು ದಕ್ಷಿಣ- 2,530
ಡಿಸಿ ಅರ್ಬನ್- 2,329
ಒಟ್ಟು- 9,152
ಬ್ಯಾಲೆಟ್ ಪೇಪರ್ ವೋಟಿಂಗ್ ಹೇಗೆ?
- ಗೌಪ್ಯ ಮತದಾನ ಮಾಡುವಾಗ ಸ್ಥಳೀಯ ಪೊಲೀಸರು ಹಾಗೂ ಚುನಾವಣಾ ಸಿಬ್ಬಂದಿ
- ಹಾಜರಿರುತ್ತಾರೆ. ಮತದಾನ ಮಾಡುವ ಸಂದರ್ಭದಲ್ಲಿ ವಿಡಿಯೋ ರೆಕಾರ್ಡಿಂಗ್ ನಡೆಯಲಿದೆ.
- ಮತದಾನದ ನಂತರ ಸ್ಟ್ರಾಂಗ್ ರೂಮ್‌ಗೆ ಮತಪೆಟ್ಟಿಗೆಯನ್ನು ರವಾನಿಸಲಾಗುವುದು.
- ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.