‘ದಿ ಕೇರಳ ಸ್ಟೋರಿ’ ನಿಷೇಧ ನಾನು ಒಪ್ಪುವುದಿಲ್ಲ: ನಟ ಚೇತನ್

Public TV
1 Min Read
Chetan

ವಿವಾದಾತ್ಮಕ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾವನ್ನು ನಿಷೇಧ ಮಾಡಬೇಕು ಎನ್ನುವ ಕೂಗು ಜೋರಾಗುತ್ತಿದೆ. ಕೇರಳದ ಸಿಪಿಐ(ಎಂ), ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಮತ್ತು ಸಂಘಟನೆಗಳು ಈ ಸಿನಿಮಾದ ಪ್ರದರ್ಶನವನ್ನು ನಿಲ್ಲಿಸುವಂತೆ ಆಗ್ರಹಿಸಿವೆ. ಸ್ವತಃ ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ವಿರೋಧದ ಅಖಾಡಕ್ಕೆ ಇಳಿದಿದ್ದಾರೆ. ಈ ನಡೆಯನ್ನು ಕನ್ನಡದ ನಟ, ಸಾಮಾಜಿಕ ಹೋರಾಟಗಾರ ಚೇತನ್ ಖಂಡಿಸಿದ್ದಾರೆ.

The Kerala Story 2

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಚೇತನ್ (Chetan),  ‘ವಿವಾದಾತ್ಮಕ ಚಿತ್ರ ದಿ ಕೇರಳ ಸ್ಟೋರಿ ಮೇ 5 ರಂದು ತೆರೆಗೆ ಬರಲಿದೆ.  ನಾನು ಈ ಹಿಂದೆ ಸಮುದಾಯದ/ಲಿಂಗದ ವಿರುದ್ಧ ದ್ವೇಷ ಮತ್ತು ಅವಹೇಳನ ಮಾಡುವ ಚಲನಚಿತ್ರಗಳಲ್ಲಿ ನಟಿಸಲು ನಿರಾಕರಿಸಿದ್ದೆ. ಆದರೆ, ಸೈದ್ಧಾಂತಿಕ ಆಧಾರದ ಮೇಲೆ ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ಚಲನಚಿತ್ರವನ್ನು ರಾಜ್ಯವು ನಿಷೇಧಿಸಬೇಕು ಎಂದು ಹೇಳುವುದನ್ನು ನಾನು ಒಪ್ಪುವುದಿಲ್ಲ. ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯಗತ್ಯ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಮದುವೆಯಾಗದೇ ಮಗುವನ್ನು ಪಡೆಯುವ ಆಸೆ ಇತ್ತು- ಸಲ್ಮಾನ್‌ ಖಾನ್‌

The Kerala Story 1

ಈ ಸಿನಿಮಾ ವಿವಾದ ಆಗುವುದಕ್ಕೆ ಕಾರಣ  ಲವ್ ಜಿಹಾದ್ ಜೊತೆಗೆ ಐಸಿಸ್ ಸೇರುವ ಮುನ್ನ ಮಾಡಲಾಗುವ ಬ್ರೈನ್ ವಾಷ್ ಸೇರಿದಂತೆ ಹತ್ತಾರು ವಿಷಯಗಳನ್ನು ಕಥಾಹಂದರದಲ್ಲಿ ಜೋಡಿಸಲಾಗಿದೆಯಂತೆ. ಕೇರಳದ ಯುವತಿಯರ ನಾಪತ್ತೆ ಆದ ಬಳಿಕ ಲವ್ ಜಿಹಾದ್ ಬಲೆ, ಐಸಿಸ್ ಸೇರಿದ ಕಾಲೇಜು ಯುವತಿಯರ ರಿಯಲ್ ಸ್ಟೋರಿಯನ್ನು ತೆರೆಯ ಮೇಲೆ ತಂದಿರೋದಾಗಿ ನಿರ್ದೇಶಕರು ಹೇಳಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷವು ಈ ವಿಷಯವನ್ನು ಇಟ್ಟುಕೊಂಡು ಹಲವು ಲಾಭಗಳನ್ನು ಪಡೆದುಕೊಳ್ಳಲಿದೆ ಎನ್ನುವುದು ಲೆಕ್ಕಾಚಾರ.

Pinarayi Vijayan

ಕೇರಳದಿಂದ ವಿದೇಶಕ್ಕೆ ಉದ್ಯೋಗ ಅರಸಿಕೊಂಡು ಹೋದ ಮಹಿಳೆಯ ಕಥೆಯನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ವಿವಾದಿತ (Controversy) ಅಂಶಗಳು ಇವೆ ಎಂದು ವಿರೋಧ ವ್ಯಕ್ತವಾಗಿದೆ. ಬುರ್ಖಾ ಧರಿಸಿದ ಪ್ರಧಾನ ಪಾತ್ರಧಾರಿ ‘ನಾನು ಶಾಲಿನಿ, ನರ್ಸ್ ಆಗಿ ಜನಸೇವೆ ಮಾಡಬೇಕು ಅಂತಿದ್ದೆ. ಆದರೆ, ನಾನು ಫಾತಿಮಾ ಆಗಿ ಐಸಿಎಸ್ ಉಗ್ರಸಂಘಟನೆಗೆ ಸೇರಿಕೊಂಡು ಭಯೋತ್ಪಾದಕಿ ಆಗಿದ್ದೇನೆ’ ಈ ರೀತಿಯ ಸಂಭಾಷಣೆಗಳು ಇವೆ.

Share This Article