ಸಾ.ರಾ. ಬಾಸ್‌ಗೆ ದೇಶ ಕಾಯುವ ಸೈನಿಕನಿಂದ ಮೊದಲ ಮತ – ವೋಟ್‌ ಹಾಕಿ ಬ್ಯಾಲೆಟ್‌ ಪೇಪರ್‌ ಪ್ರದರ್ಶಿಸಿದ ಯೋಧನ ಫೋಟೋ ವೈರಲ್‌

Public TV
1 Min Read
soldier sa ra mahesh

ಮೈಸೂರು: ಮತ ಹಾಕಿ ಬ್ಯಾಲೆಟ್‌ ಪೇಪರ್‌ ಜೊತೆಗೆ ಯೋಧರೊಬ್ಬರು ಫೋಟೋ ತೆಗೆಸಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

SARA MAHESH

ಮತ ಹಾಕಿರುವ ಬ್ಯಾಲೆಟ್‌ ಪೇಪರನ್ನು ಯೋಧ ಪ್ರದರ್ಶಿಸುತ್ತಿದ್ದಾರೆ. ಆ ಫೋಟೋದೊಂದಿಗೆ, ನಮ್ಮ “ಸಾ.ರಾ. ಬಾಸ್‌”ಗೆ ಮೊದಲ ಮತ. ನಮ್ಮ ದೇಶ ಕಾಯುವ ಸೈನಿಕನಿಂದ ಜೈ ಹಿಂದ್‌ ಎಂಬ ಅಡಿಬರಹವಿದೆ. ಈ ಪೋಸ್ಟ್‌ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್

ಈ ಯೋಧ ಕೆ.ಆರ್.ನಗರದ ಕ್ಷೇತ್ರದ ಮತದಾರ ಎಂಬುದು ಪೋಸ್ಟ್‌ನಿಂದ ತಿಳಿದುಬಂದಿದೆ. ಕರ್ತವ್ಯದ ಹಿನ್ನಲೆಯಲ್ಲಿ ಹೊರ ರಾಜ್ಯದಿಂದ ಅಂಚೆ ಮತದಾನ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಯೋಧ ಯಾರು ಮತ್ತು ಎಲ್ಲಿಂದ ಮತ ಹಾಕಿದ್ದಾರೆ ಎಂಬುದನ್ನ ಚುನಾವಣಾಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

ಇದೇ ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಿರಿಯರು, ಬೇರೆ ಬೇರೆ ಕಡೆಯಿರುವ ಸರ್ಕಾರಿ ನೌಕರರು ತಾವು ಇರುವಲ್ಲಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಹೊಯ್ಸಳರ ನಾಡಲ್ಲಿ ತ್ರಿಕೋನ ಸ್ಪರ್ಧೆ – ಯಾರಾಗ್ತಾರೆ ಸಾಮ್ರಾಟ?

ಕೆ.ಆರ್.ನಗರ ಕ್ಷೇತ್ರದಲ್ಲಿ ಶಾಸಕ ಸಾ.ರಾ.ಮಹೇಶ್ (Sa.Ra.Mahesh) (ಜೆಡಿಎಸ್), ಜಿಪಂ ಮಾಜಿ ಸದಸ್ಯ ಡಿ.ರವಿಶಂಕರ್ (ಕಾಂಗ್ರೆಸ್), ಹೊಸಹಳ್ಳಿ ವೆಂಕಟೇಶ್ (ಬಿಜೆಪಿ) ಕಣದಲ್ಲಿದ್ದಾರೆ.

Share This Article