ನನ್ನನ್ನ ನೇಣಿಗಾದ್ರೂ ಹಾಕಿ, ಆದ್ರೆ ಕುಸ್ತಿ ನಿಲ್ಲಿಸಿದ್ರೆ ನಿಮ್ಮ ಭವಿಷ್ಯಕ್ಕೆ ಹಾನಿ – ಬ್ರಿಜ್‌ಭೂಷಣ್ ಭಾವುಕ ಹೇಳಿಕೆ

Public TV
2 Min Read
wrestlers

ನವದೆಹಲಿ: ಕುಸ್ತಿಪಟುಗಳಿಂದ (Wrestlers) ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ಭಾವುಕ ಹೇಳಿಕೆಯೊಂದನ್ನ ನೀಡಿದ್ದಾರೆ.

ಕಳೆದ 4 ತಿಂಗಳಿನಿಂದ ಕುಸ್ತಿ ಕ್ರೀಡೆ ಸ್ಥಗಿತಗೊಂಡಿದೆ. ನನ್ನನ್ನ ಗಲ್ಲಿಗೇರಿಸಿದರೂ ಏರಲು ಸಿದ್ಧನಿದ್ದೇನೆ. ನನ್ನ ನೇಣಿಗೆ ಬೇಕಾದರೂ ಹಾಕಿ ಆದ್ರೆ ಕುಸ್ತಿ ಚಟುವಟಿಕೆ ಮಾತ್ರ ನಿಲ್ಲಬಾರದು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕುಸ್ತಿಪಟುಗಳು ಬೀದಿಗಿಳಿದು ಪ್ರತಿಭಟನೆ ಮಾಡ್ತಿರೋದು ದೇಶದ ಘನತೆಗೆ ಧಕ್ಕೆ – ಪಿ.ಟಿ ಉಷಾ ಬೇಸರ

Wrestlers 1

ಟಾಪ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ (Vinesh Phogat), ಸಾಕ್ಷಿ ಮಲಿಕ್ ಮತ್ತು ಭಜರಂಗ್ ಪೂನಿಯಾ (Bajrang Punia) ಸೇರಿದಂತೆ ಹಲವು ಮಂದಿ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಿ, ಫೆಡರೇಶನ್‌ನಿಂದ ಹೊರಹಾಕುವಂತೆ ಒತ್ತಾಯಿಸಿ ಪ್ರತಿಭಟನೆಗಿಳಿದಿದ್ದಾರೆ. ಅಧ್ಯಕ್ಷರು ಮಹಿಳಾ ಗ್ರಾಫ್ಲರ್‌ಗಳನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಹಲವು ದಿನಗಳಿಂದ ಪ್ರತಿಭಟನೆಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಂಪಿಯನ್‌ಶಿಪ್‌ ಸೇರಿದಂತೆ ಇನ್ನಿತರ ಶಿಬಿರಗಳು ಬಂದ್‌ ಆಗಿವೆ.

brij bhushan

ಈ ಕುರಿತು ಸೋಮವಾರ ಮಾತನಾಡಿರುವ ಬ್ರಿಜ್‌ ಭೂಷಣ್‌, ಕುಸ್ತಿ ಚಟುವಟಿಕೆಯನ್ನು ನಿಲ್ಲಿಸುವುದು ಕೆಡೆಟ್ ಮತ್ತು ಜೂನಿಯರ್ ಕುಸ್ತಿಪಟುಗಳ ಭವಿಷ್ಯಕ್ಕೆ ಹಾನಿಕಾರಕವಾಗಿದೆ. ಮಕ್ಕಳ ಭವಿಷ್ಯದ ಜೊತೆ ಆಟವಾಡಬೇಡಿ. ಹೊಸ ಕೆಡೆಟ್‌ಗಳಿಗೆ ಅವಕಾಶ ನೀಡಿ. ಸರ್ಕಾರ ಅಥವಾ ಡಬ್ಲ್ಯೂಎಫ್‌ಐ ನಿಂದ ಯಾರೇ ಕುಸ್ತಿ ಚಟುವಟಿಕೆಗಳನ್ನು ಆಯೋಜಿಸಿದರೂ ನಿಲ್ಲಿಸಬೇಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಇಂದು ಸುಪ್ರೀಂ ನಲ್ಲಿ ವಿಚಾರಣೆ

Wrestlers

ಈ ಮೊದಲು ಯಾವುದೇ ಕಾರಣಕ್ಕೂ ತಮ್ಮ ಸ್ಥಾನವನ್ನು ತೊರೆಯಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದ ಭೂಷಣ್‌, ಇದೀಗ ಪ್ರತಿಭಟನಾಕಾರರು ಶಾಂತಿಯುತವಾಗಿ ಮನೆಗೆ ಹಿಂದಿರುಗಿದರೆ ರಾಜೀನಾಮೆ ನೀಡಲು ಸಿದ್ಧ ಎಂದಿದ್ದಾರೆ. ಆದ್ರೆ ಕುಸ್ತಿಪಟುಗಳು ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಪಟ್ಟುಹಿಡಿದಿದ್ದಾರೆ. ಇದನ್ನೂ ಓದಿ: ವಿರಾಟ್‌ ಕೊಹ್ಲಿ ನನ್ನ ಫೇವ್ರೆಟ್‌ – ʻಈ ಸಲ ಕಪ್‌ ನಮ್ದೆʼ ಅಂತಿದ್ದಾರೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ

SUPREME COURT

ಏನಿದು ಕೇಸ್?
ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಡಬ್ಲ್ಯುಎಫ್‌ಐ ಅಧಿಕಾರಿಗಳು ಅಥ್ಲೀಟ್‌ಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಿವಿಧ ಕುಸ್ತಿಪಟುಗಳು ನವದೆಹಲಿಯ ಜಂತರ್ ಮಂತರ್‌ನಲ್ಲಿ ಈ ವರ್ಷದ ಆರಂಭದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಡಬ್ಲ್ಯುಎಫ್‌ಐ ಅಧ್ಯಕ್ಷರನ್ನ ಕೆಲಸದಿಂದ ವಜಾಗೊಳಿಸುವವರೆಗೆ ನಾವು ಯಾವುದೇ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸುವುದಿಲ್ಲ ಎಂದೂ ಘೋಷಿಸಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಕೇಂದ್ರ ಕ್ರೀಡಾ ಸಚಿವರು ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದಾದ ಬಳಿಕ ಕುಸ್ತಿಪಟುಗಳು ಪ್ರತಿಭಟನೆ ಕೈಬಿಟ್ಟಿದ್ದರು. ಇದೀಗ ಮತ್ತೆ ಪ್ರತಿಭಟನೆಗಿಳಿದಿರುವ ಕುಸ್ತಿಪಟುಗಳು ಸುಪ್ರೀಂ ಕೋರ್ಟ್ ಮೊರೆಹೋದ ಬಳಿಕ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿ 7 ಮಹಿಳೆಯರಿಗೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಒದಗಿಸಿದ್ದಾರೆ. ತನಿಖೆ ಮುಂದುವರಿದಿದೆ.

Share This Article