ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ- ಡಿಕೆ ಶಿವಕುಮಾರ್‌ ಗ್ರೇಟ್‌ ಎಸ್ಕೇಪ್‌

Public TV
1 Min Read
Karnataka Election 2023 DK Shivakumar helicopter emergency landing after eagle hits 3

ಬೆಂಗಳೂರು: ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಅವರು ಪ್ರಾಣಾಪಾಯದಿಂದ ಗ್ರೇಟ್‌ ಎಸ್ಕೇಪ್‌ ಆಗಿದ್ದಾರೆ.

ಇಂದು ಬೆಳಗ್ಗೆ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಡಿಕೆ ಶಿವಕುಮಾರ್‌ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್‌ (Helicopter) ಏರಿದ್ದರು. ಜಕ್ಕೂರಿನಿಂದ ಹೆಲಿಕಾಪ್ಟರ್‌ ಟೇಕಾಫ್‌ ಆಗಿ ಹೊಸಕೋಟೆ ಬಳಿ ಹೋಗುತ್ತಿದ್ದಾಗ ಹದ್ದೊಂದು (Egale) ಡಿಕ್ಕಿ ಹೊಡೆದಿದೆ.

 

ಹದ್ದು ಡಿಕ್ಕಿ ಹೊಡೆದ ರಭಸಕ್ಕೆ ಹೆಲಿಕಾಪ್ಟರ್‌ ಮುಂದಿನ ಗಾಜು ಪುಡಿ ಪುಡಿಯಾಗಿದೆ. ಕೂಡಲೇ ಎಚ್ಚೆತ್ತ ಪೈಲಟ್‌ ಎಚ್‌ಎಎಲ್‌ನಲ್ಲಿ ಹೆಲಿಕಾಪ್ಟರ್‌ ಅನ್ನು ತುರ್ತು ಭೂಸ್ಪರ್ಶ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ಶರದ್‌ ಪವಾರ್‌ ರಾಜೀನಾಮೆ

ಹೆಲಿಕಾಪ್ಟರ್‌ನಲ್ಲಿ 4 ಮಂದಿ ಪ್ರಯಣಿಸುತ್ತಿದ್ದರು. ಹೆಲಿಕಾಪ್ಟರ್‌ನಿಂದ ಇಳಿದ ಡಿಕೆ ಶಿವಕುಮಾರ್‌ ಕಾರು ಮೂಲಕ ಮುಳಬಾಗಿಲು ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ.

Share This Article