ಕೆಸರು ಗದ್ದೆಯಲ್ಲಿ ಸಿಲುಕಿದ ಪ್ರಧಾನಿ ಮೋದಿ ಭದ್ರತೆಯ ಸೇನಾ ಹೆಲಿಕಾಪ್ಟರ್‌ – ಮುಂದೇನಾಯ್ತು?

Public TV
1 Min Read
modi army helicopter

ರಾಯಚೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಿದ ಹೆಲಿಪ್ಯಾಡ್‌ನಲ್ಲಿ ಮತ್ತೊಂದು ಎಡವಟ್ಟು ನಡೆದಿದೆ. ಮೋದಿ ಭದ್ರತೆಗಾಗಿ ಬಂದಿದ್ದ ಸೇನಾ ಹೆಲಿಕಾಪ್ಟರ್‌ ಕೆಸರಿನ ಗದ್ದೆಯಲ್ಲಿ ಸಿಲುಕಿಕೊಂಡ ಘಟನೆ ರಾಯಚೂರಿನಲ್ಲಿ (Raichuru) ನಡೆಯಿತು.

NARENDRA MODI 1

ಸಿಂಧನೂರಿನ ಹೊಸಳ್ಳಿ ಕ್ಯಾಂಪ್‌ನ ಹೆಲಿಪ್ಯಾಡ್‌ನಲ್ಲಿ ಈ ಘಟನೆ ನಡೆಯಿತು. ಮೋದಿ ಭದ್ರತೆಗೆ ಬಂದಿದ್ದ 3ನೇ ಹೆಲಿಕಾಪ್ಟರ್‌ ಕೆಸರಿನ ಗದ್ದೆಯಲ್ಲಿ ಸಿಲುಕಿಕೊಂಡಿತ್ತು. ಮಳೆಯಿಂದಾಗಿ ಹೆಲಿಪ್ಯಾಡ್ ಸಂಪೂರ್ಣ ಜಲಾವೃತವಾಗಿತ್ತು. ಅವಸರದಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿತ್ತು. ಹೀಗಾಗಿ ಹೆಲಿಪ್ಯಾಡ್‌ನಲ್ಲಿ ಸೇನಾ ಹೆಲಿಕಾಪ್ಟರ್‌ ಸಿಲುಕಿಕೊಂಡಿತ್ತು. ಇದನ್ನೂ ಓದಿ: ಹಿಂದೆ ರಾಮನನ್ನು ಬಂಧಿಸಿಟ್ಟಿತ್ತು, ಈಗ ಹನುಮಾನ್ ಜನ್ಮಸ್ಥಳದಲ್ಲೇ ಭಜರಂಗಬಲಿಯನ್ನು ಬಂಧಿಸಿಡಲು ಮುಂದಾಗಿದೆ: ಮೋದಿ ಕಿಡಿ

modi army helicopter1

ಹೆಲಿಕ್ಯಾಪ್ಟರ್ ಮೇಲೆತ್ತಲು ಸಿಬ್ಬಂದಿ ಹರಸಾಹಸಪಟ್ಟರು. ನಂತರ ಜೆಸಿಬಿ‌ ಮೂಲಕ ಹೆಲಿಕಾಪ್ಟರ್ ಮೇಲೆತ್ತುವ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಭದ್ರತಾ ಸಿಬ್ಬಂದಿ ಸಹ ಅಲ್ಲೇ ಸಿಲುಕಿಕೊಂಡಿದ್ದರು.

ಮತ್ತೆರಡು ಹೆಲಿಕಾಪ್ಟರ್‌ಗಳು ಸ್ಥಳಕ್ಕೆ ಆಗಮಿಸಿ ಭದ್ರತಾ ಸಿಬ್ಬಂದಿಯನ್ನು ಕರೆದುಕೊಂಡು ಹೋದವು. ಈ ಸಂದರ್ಭದಲ್ಲಿ ಮೋದಿ ಅವರು ಬಂದಿದ್ದ ಹೆಲಿಕಾಪ್ಟರ್‌, ಕಾರ್ಯಕ್ರಮದ ಸಂದರ್ಭದಲ್ಲಿ ವೇದಿಕೆ ಸುತ್ತ ಸುತ್ತು ಹಾಕಿತು. ಇನ್ನೆರಡು ಹೆಲಿಕಾಪ್ಟರ್‌ ಹಾರಾಟ ನಡೆಸುವವರೆಗೂ ಇದು ಸುತ್ತು ಹಾಕಿತ್ತು. ಇದನ್ನೂ ಓದಿ: ಸಿಎಂ ಆರ್‌.ಗುಂಡೂರಾವ್‌ ಸೋಲಿಸಿದ್ದ ಮಾಜಿ ಸಚಿವ ಜೀವಿಜಯ ಕಾಂಗ್ರೆಸ್‌ಗೆ ರಾಜೀನಾಮೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇದೇ ಮೇ 10 ರಂದು ಮತದಾನ ನಡೆಯಲಿದೆ. ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಮುಖ ರಾಜಕೀಯ ಪಕ್ಷಗಳು ಕಸರತ್ತು ನಡೆಸುತ್ತಿವೆ. ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಕರ್ನಾಟಕದಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ರೋಡ್‌ಶೋ, ಸಮಾವೇಶ, ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಪಾಲ್ಗೊಳ್ಳುತ್ತಿದ್ದಾರೆ.

Share This Article