ಮಗಳ ಸಿನಿಮಾದಲ್ಲಿ ಮೊಹಿದ್ದೀನ್ ಭಾಯ್ ಆಗಿ ಬಂದ ತಲೈವಾ- ‌’ಲಾಲ್‌ ಸಲಾಂ’ ಪೋಸ್ಟರ್‌ ಔಟ್

Public TV
1 Min Read
rajanikanth 1

ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ಸದ್ಯ ‘ಜೈಲರ್’ನಲ್ಲಿ (Jailer)  ಹೀರೋ ಆಗಿ ನಟಿಸುತ್ತಿದ್ದಾರೆ. ಇದರ ಜೊತೆ ಮಗಳು ಐಶ್ವರ್ಯ ನಿರ್ದೇಶನದ ‘ಲಾಲ್ ಸಲಾಂ’ (Lal Salam) ಚಿತ್ರದಲ್ಲಿ ಭಿನ್ನ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡ್ತಿದ್ದಾರೆ. ಸದ್ಯ ಸಿನಿಮಾದಲ್ಲಿನ ತಲೈವಾ ಲುಕ್ ರಿವೀಲ್ ಆಗಿದೆ. ಇದನ್ನೂ ಓದಿ:‘ದಿ ಕೇರಳ ಸ್ಟೋರಿ’ ತಮಿಳು ನಾಡಿನಲ್ಲಿ ಪ್ರದರ್ಶನವಿಲ್ಲ

aishwarya rajanikanth

ಲೈಕಾ ಪ್ರೋಡಕ್ಷನ್ಸ್ ಅಡಿಯಲ್ಲಿ ‘ಲಾಲ್ ಸಲಾಂ’ ಸಿನಿಮಾವನ್ನ ಐಶ್ವರ್ಯ ರಜಿನಿಕಾಂತ್ ನಿರ್ದೇಶನ ಮಾಡಿದ್ದಾರೆ. ತಲೈವಾ ಅವರು ಕೀ ರೋಲ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ಚಿತ್ರದಲ್ಲಿ ಮೊಹಿದ್ದೀನ್ ಭಾಯ್ ಪಾತ್ರಕ್ಕೆ ತಲೈವಾ ಜೀವತುಂಬಿದ್ದಾರೆ. ಗಲಭೆ ಹಿನ್ನೆಲೆ, ಶೆರ್ವಾನಿಯಲ್ಲಿ ಸನ್ ಗ್ಲ್ಯಾಸ್ ಧರಿಸಿ ನಡೆದು ಬರುತ್ತಿರುವ ತಲೈವಾ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ಭರ್ಜರಿಯಾಗಿ ನಡೆಯುತ್ತಿದೆ. ಸದ್ಯ ಸಿನಿಮಾದ ಪೋಸ್ಟರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

1995ರಲ್ಲಿ ಬಂದಿದ್ದ ‘ಬಾಷಾ’ ಚಿತ್ರದಲ್ಲಿ ಜನಸ್ನೇಹಿ ಡಾನ್ ಆಗಿ ರಜನಿಕಾಂತ್ ಅಬ್ಬರಿಸಿದ್ದರು. ಅದೇ ಚಿತ್ರದ ಪಾತ್ರವನ್ನು ‘ಲಾಲ್ ಸಲಾಂ’ ಮೊಹಿದ್ದೀನ್ ಭಾಯ್ ನೆನಪಿಸುತ್ತಿರುವುದು ಸುಳ್ಳಲ್ಲ. ‘ಲಾಲ್ ಸಲಾಂ’ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಆಗಿದ್ದು ಕ್ರಿಕೆಟ್ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಲೀಡ್ ರೋಲ್‌ಗಳಲ್ಲಿ ನಟಿಸುತ್ತಿದ್ದಾರೆ. ಜೀವಿತಾ ರಾಜಶೇಖರ್ ನಾಯಕಿಯಾಗಿ ಮಿಂಚಲಿದ್ದಾರೆ. ವಿಷ್ಣು ರಂಗಸ್ವಾಮಿ ಛಾಯಾಗ್ರಹಣ- ಎಆರ್ ರೆಹಮಾನ್ ಸಂಗೀತ ಈ ಚಿತ್ರಕ್ಕಿದೆ. ರಜನಿಕಾಂತ್ ಕಾರಣಕ್ಕೆ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ.

aishwarya rajanikanth 1

ದಾಂಪತ್ಯ ಜೀವನದಲ್ಲಿ ಸೋತಿರೋ ಐಶ್ವರ್ಯಗೆ ಈ ಸಿನಿಮಾದಿಂದ ಬಿಗ್ ಬ್ರೇಕ್ ಬೇಕಾಗಿದೆ. ರಜನಿಕಾಂತ್ ಚಿತ್ರದಲ್ಲಿ ನಟಿಸುತ್ತಿರುವ ಕಾರಣ, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ರಿಲೀಸ್ ಬಳಿಕ ಸಿನಿಮಾಗೆ ಯಾವ ರೀತಿ ರೆಸ್ಪಾನ್ಸ್ ಸಿಗಲಿದೆ ಕಾದುನೋಡಬೇಕಿದೆ.

Share This Article