– ತರಬೇತಿ ಕೊಡೋದು ನಿಮ್ಮ ಕೆಲಸ.. ಅದನ್ನ ಪಡೆಯಬೇಕೋ ಬೇಡವೋ ಅನ್ನೋದು ನನ್ನಿಷ್ಟ ಅಂತ ಅವಾಜ್
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Elections 2023) ಮತದಾನದ ಹಿನ್ನೆಲೆಯಲ್ಲಿ ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ ತೋರಿದ ಮಹಿಳಾ ಇನ್‌ಸ್ಪೆಕ್ಟರ್‌ವೊಬ್ಬರನ್ನು ಅಮಾನತುಗೊಳಿಸಲಾಗಿದೆ.
ಮಹಿಳಾ ಇನ್‌ಸ್ಪೆಕ್ಟರ್ ಭವ್ಯ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇವರನ್ನು ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ತರಬೇತಿಗೆ ನಿಯೋಜನೆ ಮಾಡಲಾಗಿತ್ತು. ತರಬೇತಿ ಪಡೆಯುವ ಸಂದರ್ಭದಲ್ಲಿ ಉದ್ಧಟತನ ತೋರಿದ್ದಕ್ಕೆ ಅಮಾನತುಗೊಂಡಿದ್ದಾರೆ. ಇದನ್ನೂ ಓದಿ: ವೋಟ್ ಹಾಕೋಕೆ 2 ಕಿ.ಮೀ ನಡೆಯಬೇಕು – ಗ್ರಾಮದಲ್ಲಿ ಮತಗಟ್ಟೆ ತೆರೆಯಲು ಒತ್ತಾಯ
ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ತರಬೇತಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಹಿಳಾ ಇನ್‌ಸ್ಪೆಕ್ಟರ್ ತರಬೇತಿಗೆ ಹಾಜರಾಗದೇ ಪೇಪರ್ ಓದುತ್ತಾ ಕುಳಿತಿದ್ದರು. ನೋಡಲ್ ಅಧಿಕಾರಿ ಹಾಗೂ ಸೆಕ್ಟರ್ ಅಧಿಕಾರಿ ಪ್ರಶ್ನಿಸಿದಾಗ ಉದ್ಧಟತನ ಮೆರೆದಿದ್ದಾರೆ.
“ನಾನು ಮಾಡುತ್ತಿರುವುದು ಸರಿ. ತರಬೇತಿ ಕೊಡುವುದು ನಿಮ್ಮ ಕೆಲಸ. ತರಬೇತಿ ಪಡೆಯುವುದು ಬಿಡುವುದು ನಮ್ಮಿಷ್ಟ. ನೀವು ಹೇಳಿದಂತೆ ಕೇಳೋದಕ್ಕೆ ನಾನು ನಿಮ್ಮ ಡಿಪಾರ್ಟ್‌ಮೆಂಟ್ ಅಲ್ಲ. ಈ ತರಬೇತಿ ಉಪಯೋಗಕ್ಕಿಲ್ಲ” ಎಂದು ಉದ್ಧಟತನದ ಮಾತುಗಳನ್ನಾಡಿದ್ದಾರೆ. ಇದನ್ನೂ ಓದಿ: ವೋಟ್ ಹಾಕಿ, ಶಾಯಿ ಗುರುತು ತೋರಿಸಿದ್ರೆ ಮಾತ್ರ ಪ್ರವಾಸಿತಾಣಗಳಿಗೆ ಎಂಟ್ರಿ – ಕೊಡಗು ಡಿಸಿ
ಯಾರಿಗಾದರೂ ಹೇಳಿಕೊಳ್ಳಿ ಎಂದಿದ್ದ ಮಹಿಳಾ ಇನ್‌ಸ್ಪೆಕ್ಟರ್ ವರ್ತನೆ ಬಗ್ಗೆ ಬಿಬಿಎಂಪಿ ಆಯುಕ್ತರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಈ ಹಿನ್ನಲೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಅಮಾನತುಗೊಳಿಸಲಾಗಿದೆ.