ಮಗಳ ಭವಿಷ್ಯಕ್ಕಾಗಿ ದೇಶ ಬಿಡಲು ಸಿದ್ಧ ಎಂದ ಪ್ರಿಯಾಂಕಾ ಚೋಪ್ರಾ

Public TV
1 Min Read
priyanka chopra

ಬಾಲಿವುಡ್ (Bollywood) ಬ್ಯೂಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಬ್ಯಾಕ್ ಟು ಬ್ಯಾಕ್ ಹಾಲಿವುಡ್ ಸಿನಿಮಾಗಳಲ್ಲಿ ಆಕ್ಟೀವ್ ಆಗಿದ್ದಾರೆ. ಸಿನಿಮಾ ಜೊತೆಗೆ ಮಗಳ ಆರೈಕೆಯಲ್ಲೂ ಬ್ಯುಸಿಯಾಗಿದ್ದಾರೆ. ಮುದ್ದು ಮಗಳ ಒಳಿತಿಗೆ ಕೆಲಸ ತೊರೆದು, ದೇಶ ಬಿಡಲು ಸಿದ್ಧ ಎಂದು ಸಂದರ್ಶನವೊಂದರಲ್ಲಿ ನಟಿ ಮಾತನಾಡಿದ್ದಾರೆ. ಇದನ್ನೂ ಓದಿ:ಹೈಸ್ಕೂಲ್ ದತ್ತು ಪಡೆದ ಗೀತಾ ಶಿವರಾಜ್ ಕುಮಾರ್

priyanka chopra

ಹಿಂದಿ ಸಿನಿಮಾರಂಗದಲ್ಲಿ ಸ್ಟಾರ್ ನಟಿಯಾಗಿ ಮೆರೆದ ನಟಿ ಪ್ರಿಯಾಂಕಾ ಚೋಪ್ರಾ, ಬೇಡಿಕೆಯಿರುವಾಗಲೇ ನಿಕ್ ಜೋನಸ್ (Nick Jonas) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕಳೆದ ವರ್ಷ ಬಾಡಿಗೆ ತಾಯ್ತನದ ಮೂಲಕ ಮುದ್ದಾದ ಮಗುವನ್ನ ಪಡೆದರು. ಸಿನಿಮಾದಲ್ಲಿ ಅದೆಷ್ಟೇ ಬ್ಯುಸಿಯಿದ್ದರು ಕೂಡ ಮಗಳಿಗಾಗಿ ಬಿಡುವು ಮಾಡಿಕೊಂಡು ಸಮಯ ಕಳೆಯುತ್ತಾರೆ. ಪ್ರಿಯಾಂಕಾ ದಂಪತಿ, ಮಗುವಿನ ಫೋಟೋವನ್ನು ಅವರು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇನ್ನೂ ಮಗಳ ಭವಿಷ್ಯಕ್ಕಾಗಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಯಾವುದೇ ತ್ಯಾಗಕ್ಕೂ ಸಿದ್ಧವಾಗಿದ್ದಾರೆ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

priyanka chopra 5

ಪ್ರಿಯಾಂಕಾ 17ನೇ ವಯಸ್ಸಿನಲ್ಲಿದ್ದಾಗ ಅವರ ತಂದೆ-ತಾಯಿ ಬರೇಲಿಯಲ್ಲಿ ಆಸ್ಪತ್ರೆ ನಡೆಸುತ್ತಿದ್ದರು. ಆದರೆ ಮಗಳ ಭವಿಷ್ಯಕ್ಕಾಗಿ ಅವರು ಎಲ್ಲವನ್ನೂ ತೊರೆದು ಮುಂಬೈಗೆ ಶಿಫ್ಟ್ ಆಗಿದ್ದರು. ಆ ಸಂದರ್ಭವನ್ನು ಪ್ರಿಯಾಂಕಾ ಚೋಪ್ರಾ ಅವರು ಈಗ ನೆನಪಿಸಿಕೊಂಡಿದ್ದಾರೆ. ನನ್ನ ತಂದೆ-ತಾಯಿಯಂತೆಯೇ ನನ್ನ ಮಗಳಿಗಾಗಿ ಇಂಥ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಿದ್ಧ ಎಂದು ಪ್ರಿಯಾಂಕಾ ಚೋಪ್ರಾ ಹೇಳಿದ್ದಾರೆ.

Priyanka Chopra 4

ಅಂದು ಅಪ್ಪ-ಅಮ್ಮನ ತ್ಯಾಗವನ್ನು ನಾನು ಹಗುರವಾಗಿ ತೆಗೆದುಕೊಂಡೆ. ಅದು ಅವರ ಕೆಲಸ ಅಂತ ಭಾವಿಸಿದ್ದೆ. ನನಗೆ ನನ್ನ ಭವಿಷ್ಯ ಮುಖ್ಯವಾಗಿತ್ತು. ನಾನು ಒಂದು ಪುಸ್ತಕ ಬರೆಯುವವರೆಗೂ ಅವರ ತ್ಯಾಗದ ಬಗ್ಗೆ ನಾನು ಯೋಚಿಸಿರಲಿಲ್ಲ. ಈಗ ನನಗೆ 40 ವರ್ಷ ವಯಸ್ಸಾಗಿದೆ. ಮಗಳಿಗಾಗಿ ನನ್ನ ಕೆಲಸ ಬಿಟ್ಟು, ಬೇರೆ ದೇಶಕ್ಕೆ ಹೋಗಬೇಕಾದ ಪ್ರಸಂಗ ಬಂದರೆ ನಾನು ಮರುಮಾತಿಲ್ಲದೇ ಒಪ್ಪಿಕೊಳ್ಳುತ್ತೇನೆ ಎಂದು ನಟಿ ಹೇಳಿದ್ದಾರೆ.

Share This Article