Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಐದು ಗ್ಯಾರಂಟಿ ಜಾರಿ : ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಐದು ಗ್ಯಾರಂಟಿ ಜಾರಿ : ಸಿದ್ದರಾಮಯ್ಯ

Karnataka

ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಐದು ಗ್ಯಾರಂಟಿ ಜಾರಿ : ಸಿದ್ದರಾಮಯ್ಯ

Public TV
Last updated: May 13, 2023 5:34 pm
Public TV
Share
4 Min Read
Siddaramaiah 5
SHARE

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್  (Congress) ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುತ್ತಿದ್ದಂತೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ. ರಾಜ್ಯದ ಜನತೆಗೆ, ತಮ್ಮ ಪಕ್ಷದ ನಾಯಕರಿಗೆ ಧನ್ಯವಾದಗಳನ್ನು ತಿಳಿಸುವುದರ ಜೊತೆಗೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ತಾವು ಪ್ರಣಾಳಿಕೆಯಲ್ಲಿ (Manifesto) ಹೇಳಿದ ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ತಿಳಿಸಿದ್ದಾರೆ. ಸಿದ್ಧರಾಮಯ್ಯ (Siddaramaiah) ಪೋಸ್ಟ್ ಮಾಡಿದ ಬರಹ ಹೀಗಿದೆ.

Siddaramaiah

ಈ ಫಲಿತಾಂಶ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ. ಇದು ಕೇವಲ ಕಾಂಗ್ರೆಸ್ ಪಕ್ಷದ ಗೆಲುವಲ್ಲ, ಇದು ಕರ್ನಾಟಕದ ಗೆಲುವು. ಕನ್ನಡಿಗರ ಗೆಲುವು, ಪ್ರಜಾಪ್ರಭುತ್ವದ ಗೆಲುವು. ಈ ಗೆಲುವಿಗಾಗಿ ರಾಜ್ಯದ ಸಮಸ್ತ ಕನ್ನಡಿಗರೂ ಅಭಿನಂದಿಸುತ್ತೇನೆ. ಯಾವುದೇ ಚುನಾವಣೆಯಲ್ಲಿ ಕೇವಲ ರಾಜಕೀಯ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಮಾತ್ರವಲ್ಲ ಲಕ್ಷಾಂತರ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲದ ಅಭಿಮಾನಿಗಳು ರಾತ್ರಿ ಹಗಲು ಶ್ರಮಪಟ್ಟಿರುತ್ತಾರೆ. ಅವರೆಲ್ಲರಿಗೂ ತುಂಬು ಹೃದಯದ ಕೃತಜ್ಞತೆಗಳು.

ಈ ಚುನಾವಣೆಯಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರು ನಡೆಸಿರುವ ಪ್ರಯತ್ನವನ್ನು ಮರೆಯಲಾಗದು. ಬಹಳ ಮುಖ್ಯವಾಗಿ ಕರ್ನಾಟಕದ ಚುನಾವಣಾ ಪ್ರಚಾರ ಪ್ರಾರಂಭವಾಗಿದ್ದೇ ರಾಹುಲ್ ಗಾಂಧಿಯವರ ಭಾರತ ಜೋಡೋ ಯಾತ್ರೆಯಿಂದ. ಈ ಯಾತ್ರೆ ಇಡೀ ಕರ್ನಾಟಕದಲ್ಲಿ ಸಂಚಲನ ಉಂಟುಮಾಡಿತ್ತು. ನಮ್ಮ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿತ್ತು. ಈ ಫಲಿತಾಂಶದ ಶ್ರೇಯಸ್ಸು ಅವರಿಗೂ ಸಲ್ಲುತ್ತದೆ.

Siddaramaiah 10

ಅದೇ ರೀತಿ ಪ್ರಿಯಾಂಕ ಗಾಂಧಿಯವರ ಚುನಾವಣಾ ಪ್ರಚಾರ ಈ ಬಾರಿಯ ಹೊಸ ಆಕರ್ಷಣೆಯಾಗಿತ್ತು. ಬಹಳ ಮುಖ್ಯವಾಗಿ ಮಹಿಳಾ ಮತದಾರರ ಮೇಲೆ ಪ್ರಿಯಾಂಕ ಪ್ರಭಾವ ಬೀರಿದ್ದರು. ಅವರನ್ನು ನೋಡಿದ್ದ ಬಹಳಷ್ಟು ಮತದಾರರು ಶ್ರೀಮತಿ ಇಂದಿರಾ ಗಾಂಧಿಯವರನ್ನು ನೆನಪು ಮಾಡಿಕೊಂಡಿದ್ದರು. ಪಕ್ಷ ಪ್ರಿಯಾಂಕ ಗಾಂಧಿಯವರಿಗೆ ಕೃತಜ್ಞವಾಗಿದೆ.  ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಾ ತಮ್ಮೆಲ್ಲ ಬಿಡುವಿರದ ಕಾರ್ಯಕ್ರಮಗಳ ನಡುವೆಯೂ ರಾಜ್ಯಕ್ಕೆ ಬಂದು ಪ್ರಚಾರ ನಡೆಸಿದ್ದಾರೆ. ಕನ್ನಡಿಗನೊಬ್ಬ ಎಐಸಿಸಿ ಅಧ್ಯಕ್ಷರಾಗಿರುವುದು ಕೂಡಾ ಕನ್ನಡಿಗ ಮತದಾರರ ಮೇಲೆ ಪ್ರಭಾವ ಬೀರಿದಂತೆ ಕಾಣುತ್ತಿದೆ.  ಈ ಫಲಿತಾಂಶ ಅನಿರೀಕ್ಷಿತ ಅಲ್ಲ. ಜನರ ಜೊತೆ ಸಂಪರ್ಕದಲ್ಲಿರುವವರಿಗೆ ಇದು ನಿರೀಕ್ಷಿತ ಫಲಿತಾಂಶ.

ಭ್ರಷ್ಟಾಚಾರ, ಬೆಲೆ ಏರಿಕೆ, ಕೋಮುವಾದ, ಕನ್ನಡ-ಕನ್ನಡಿಗ ವಿರೋಧಿ ನಿಲುವು, ದುರಾಡಳಿತ ಹೀಗೆ ಪ್ರತಿಯೊಂದು ವಿಷಯದಲ್ಲಿಯೂ ಜನ ರೋಸಿಹೋಗಿದ್ದರು. ರೈತರು, ಕಾರ್ಮಿಕರು, ಮಹಿಳೆಯರು, ಯುವಕರು ಹೀಗೆ ಪ್ರತಿಯೊಂದು ವರ್ಗದ ಜನ ಕೂಡಾ ಬಿಜೆಪಿ ಪಕ್ಷದ ಸೋಲನ್ನು ಬಯಸಿದ್ದರು. ನಾಲ್ಕು ವರ್ಷಗಳ ಬಿಜೆಪಿ ಆಳ್ವಿಕೆಯಲ್ಲಿ ಕರ್ನಾಟಕ ಖಂಡಿತ ಹತ್ತು ವರ್ಷಗಳಷ್ಟು ಹಿಂದಕ್ಕೆ ಹೋಗಿದೆ, ಭ್ರಷ್ಟಾಚಾರ ಮತ್ತು ದುರಾಡಳಿತದಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿ ಹೋಗಿದೆ. ಇವುಗಳನ್ನೆಲ್ಲ ಹಳಿಗೆ ಕರೆತರುವ ಪ್ರಯತ್ನವನ್ನು ಮಾಡಬೇಕಾಗುತ್ತದೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ; ಸಿಎಂ ಸ್ಥಾನಕ್ಕೆ ಬೊಮ್ಮಾಯಿ ಇಂದು ರಾಜೀನಾಮೆ LIVE Updates

siddaramaiah 9

ಆದರೆ ಈ ಫಲಿತಾಂಶ ಕೇವಲ ಬಿಜೆಪಿ ದುರಾಡಳಿತದ ವಿರುದ್ಧದ ಜನಮತ ಮಾತ್ರ ಅಲ್ಲ, ಇದು ಕಾಂಗ್ರೆಸ್ ಪಕ್ಷದ ಪರವಾಗಿರುವ ಫಲಿತಾಂಶ ಕೂಡಾ ಹೌದು. ಇದು ಸುಭದ್ರ ಸರ್ಕಾರಕ್ಕಾಗಿ ಜನ ನೀಡಿರುವ ಮತಗಳಾಗಿವೆ. ಕಳೆದ ನಾಲ್ಕು ವರ್ಷಗಳ ಬಿಜೆಪಿ ಆಡಳಿತವನ್ನು ರಾಜ್ಯದ ಮತದಾರರು 2013ರಿಂದ 2018ರ ಕಾಂಗ್ರೆಸ್ ಆಡಳಿತದ ಜೊತೆ ಖಂಡಿತ ಹೋಲಿಸಿ ಮತನೀಡಿದ್ದಾರೆ.  ಕಾಂಗ್ರೆಸ್ ಪಕ್ಷವನ್ನು ಹೊರತುಪಡಿಸಿದರೆ ರಾಜ್ಯದಲ್ಲಿ ಬೇರೆ ಯಾವ ಪಕ್ಷಗಳು ಕೂಡಾ ಸುಭದ್ರ ಸರ್ಕಾರ ನೀಡಿರುವ ಉದಾಹರಣೆಗಳಿಲ್ಲ.

Siddaramaiah 8

2013-2018ರ ಅವಧಿಯ ನಮ್ಮ ಆಡಳಿತದಲ್ಲಿ ನಾವು ಜನತೆಗೆ ನೀಡಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದೇವೆ. ನಮ್ಮ ದಕ್ಷ ಮತ್ತು ಜನಪರ ಆಡಳಿತವನ್ನು ಜನ ಮರೆತಿಲ್ಲ ಎನ್ನುವುದನ್ನು ಕೂಡಾ ಫಲಿತಾಂಶ ತೋರಿಸುತ್ತಿದೆ. ಆದ್ದರಿಂದ ಈ ಫಲಿತಾಂಶ ಕೇವಲ ನೆಗೆಟಿವ್ ವೋಟ್ ಅಲ್ಲ, ಇದು ಪಾಸಿಟಿವ್ ವೋಟ್ ಕೂಡಾ ಹೌದು ಎನ್ನುವುದು ನನ್ನ ಅಭಿಪ್ರಾಯ.  ರಾಜ್ಯದಲ್ಲಿ ಧರ್ಮ ವಿಭಜನೆ ಮತ್ತು ಧರ್ಮ ದ್ವೇಷದ ಹಿಂದುತ್ವದ ರಾಜಕೀಯವನ್ನು ರಾಜ್ಯದ ಮತದಾರರು ತಿರಸ್ಕರಿಸಿದ್ದಾರೆ.

ರಾಜ್ಯದ ಮತದಾರರು ಬಿಜೆಪಿಯ ಹಿಂದುತ್ವದ ರಾಜಕೀಯವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷದ ಬಂಧುತ್ವದ ರಾಜಕೀಯವನ್ನು ಪುರಸ್ಕರಿಸಿದ್ದಾರೆ. ಈ ಫಲಿತಾಂಶ ಕೇವಲ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು  ಕೋಮುದ್ವೇಷದ ವಿರುದ್ಧದ ಜನಮತ ಮಾತ್ರ ಅಲ್ಲ, ಇದು ಜೆಡಿಎಸ್ ಪಕ್ಷದ ಸ್ವಾರ್ಥ ಮತ್ತು ಅವಕಾಶವಾದಿ ರಾಜಕಾರಣದ ವಿರುದ್ಧದ ಜನಮತ ಕೂಡಾ ಹೌದು.  ನಮ್ಮ ಸರ್ಕಾರದ ಮೇಲೆ ದೊಡ್ಡ ಜವಾಬ್ದಾರಿ ಇದೆ. ಪ್ರಣಾಳಿಕೆಯ ಮೂಲಕ ರಾಜ್ಯದ ಜನತೆಗೆ ನೀಡಿರುವ ಭರವಸೆಗಳನ್ನು ನಾವು ಈಡೇರಿಸುತ್ತೇವೆ ಎನ್ನುವುದನ್ನು ರಾಜ್ಯದ ಮತದಾರರು ಬಲವಾಗಿ ನಂಬಿದ್ದಾರೆ. ಇದಕ್ಕೆ ಕಾರಣ ಹಿಂದಿನ ನಮ್ಮ ಸರ್ಕಾರದ ಕಾಲದಲ್ಲಿ ನಾವು ಪ್ರಣಾಳಿಕೆಯ ಮೂಲಕ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಿರುವುದು.

Siddaramaiah 1 1

ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲ ಭರವಸೆಗಳನ್ನು ನಾವು ಈಡೇರಿಸುತ್ತೇವೆ. ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ನಮ್ಮ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ರಾಜ್ಯದ ಜನತೆ ಇನ್ನು ನೆಮ್ಮದಿಯಿಂದ ಇರಬಹುದು. ರಾಜ್ಯದ ಜನತೆಯ ಕಲ್ಯಾಣ ಮಾತ್ರವಲ್ಲ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯ ಬದುಕು ಕೂಡಾ ನಮ್ಮ ಗ್ಯಾರಂಟಿ. ನಮ್ಮ ಪಕ್ಷದ ಕಾರ್ಯಕರ್ತರು ಸಂಯಮದಿಂದ ವಿಜಯೋತ್ಸವವನ್ನು ಆಚರಿಸಬೇಕು. ಎದುರಾಳಿಗಳು ಸೋಲಿನ ಹತಾಶೆಯಿಂದ ಪ್ರಚೋದಿಸಿದರೂ ನಮ್ಮ ಕಾರ್ಯಕರ್ತರು ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು.

Siddaramaiah

ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗಾಗಿ ದುಡಿದ ಪಕ್ಷದ ಕಾರ್ಯಕರ್ತರಿಗೂ, ಮುಖಂಡರಿಗೂ, ನಾಯಕರಿಗೂ ಹಾಗೂ ಮತನೀಡಿ ಆಶೀರ್ವದಿಸಿದ ಎಲ್ಲಾ ಮತದಾರ ಬಂಧುಗಳಿಗೂ ಮತ್ತೊಮ್ಮೆ ಧನ್ಯವಾದಗಳು. ನಾಡಿನ ಸಮಗ್ರ ಅಭಿವೃದ್ಧಿಯೇ ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ.

TAGGED:congressManifestoResponsesiddaramaiahಕಾಂಗ್ರೆಸ್ಪ್ರಣಾಳಿಕೆಪ್ರತಿಕ್ರಿಯೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

DK Shivakumar Odisha Congress MLAs
Districts

ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

Public TV
By Public TV
17 minutes ago
Iran Foreign Minister Abbas Araghchi
Latest

ರಷ್ಯಾದಿಂದ ಕಚ್ಚಾ ತೈಲ ಖರೀದಿಸುವಂತೆ ಅಮೆರಿಕ ಭಾರತದ ಜೊತೆ ಬೇಡಿಕೊಂಡಿದೆ: ಇರಾನ್‌

Public TV
By Public TV
1 hour ago
Chitradurga Fake Sign Fraud
Chitradurga

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

Public TV
By Public TV
2 hours ago
Online Gas Booking
Bengaluru City

ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ

Public TV
By Public TV
2 hours ago
Kharg Island
Latest

ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಭೀಕರ ದಾಳಿ – ಇರಾನಿನ ಕಿರೀಟ ಖಾರ್ಗ್ ದ್ವೀಪಕ್ಕೆ ಬಾಂಬ್‌

Public TV
By Public TV
2 hours ago
Mojtaba Khamenei 1 1
Latest

ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ತಲೆಗೆ 92.47 ಕೋಟಿ ಬಹುಮಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?