ಡಾ.ರಾಜ್ ಪ್ರಶಸ್ತಿ ಇನ್ನೂ ಕೊಟ್ಟಿಲ್ಲ, ಯಾರನ್ನು ಕೇಳೋದು? : ಹಿರಿಯ ನಟ ಬೇಸರ

Public TV
2 Min Read
Srinivas Murthy 1

ನ್ನಡ ಸಿನಿಮಾ ರಂಗದ ಹಿರಿಯ ನಟ ಶ್ರೀನಿವಾಸ್ ಮೂರ್ತಿ (Srinivas Murthy) ಅವರಿಗೆ  ಕರ್ನಾಟಕ ಸರಕಾರವು 2018ರಲ್ಲಿ ಡಾ. ರಾಜ್ ಕುಮಾರ್ (Raj Kumar) ಪ್ರಶಸ್ತಿ ಘೋಷಣೆ ಆಗಿತ್ತು. ಪ್ರಶಸ್ತಿ (Award) ಘೋಷಣೆಯಾಗಿ ಐದು ವರ್ಷ ಕಳೆದರೂ, ಇವರಿಗೆ ಪ್ರಶಸ್ತಿ ಪ್ರದಾನವಾಗಿಲ್ಲ. ಈ ಕುರಿತು ಮಾತನಾಡಿರುವ ಶ್ರೀನಿವಾಸ್ ಮೂರ್ತಿ, ‘ಪ್ರಶಸ್ತಿಯನ್ನು ಇದುವರೆಗೂ ಕೊಟ್ಟಿಲ್ಲ. 2017ರ ಕಾರ್ಯಕ್ರಮ ಮಾಡಿದ್ದೇ ಕೊನೆ. ಆ ನಂತರದ ವರ್ಷಗಳ ಪ್ರಶಸ್ತಿಗಳ ಘೋಷಣೆ ಮಾಡಿದ್ದರೂ, ಇನ್ನೂ ಸಮಾರಂಭ ಮಾಡಿ ಪ್ರಶಸ್ತಿ ಕೊಟ್ಟಿಲ್ಲ. ಡಾ. ರಾಜ್ ಜೀವಮಾನದ ಸಾಧನೆ ಪ್ರಶಸ್ತಿ ಸಿಕ್ಕಿದೆ ಎಂದು ಖುಷಿಪಡಬೇಕು. ಆದರೆ, ಇದುವರೆಗೂ ಪ್ರಶಸ್ತಿ ಸಿಕ್ಕಿಲ್ಲ. ಯಾರನ್ನು ಕೇಳುವುದು?’ ಎಂದು ಪ್ರಶ್ನೆ ಮಾಡಿದ್ದಾರೆ.

Srinivas Murthy 3

ಶ್ರೀನಿವಾಸಮೂರ್ತಿ ಅವರು ಬಣ್ಣ ಹಚ್ಚಿ 50 ವರ್ಷಗಳಾಗಿವೆ. ಇಂದು ಅವರು 75ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಹುಟ್ಟು ಹಬ್ಬದ ಸಂದರ್ಭದಲ್ಲಿ ಇಂದು ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ‘ಸದಾರಮೆ ಕಳ್ಳ ಎಂಬ ನಾಟಕ ಆಡುತ್ತಿದ್ದಾರೆ. ಬರೀ ಇವತ್ತಷ್ಟೇ ಅಲ್ಲ, ನಾಳೆ ಸಂಜೆ ಅದೇ ಸ್ಥಳದಲ್ಲಿ ‘ತರಕಾರಿ ಚೆನ್ನಿ ಎಂಬ ಇನ್ನೊಂದು ನಾಟಕದಲ್ಲಿ ಅವರು ಬಣ್ಣ ಹಚ್ಚುತ್ತಿದ್ದಾರೆ.

srinivasa murthy actor

‘ಹೇಮಾವತಿ ಚಿತ್ರದಲ್ಲಿ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುವುದಕ್ಕೂ ಮುನ್ನ ಯೋಗಾನರಸಿಂಹ ಅವರ ನಾಟಕದ (Drama) ಕಂಪೆನಿಯಲ್ಲಿ ಪಾತ್ರ ಮಾಡುತ್ತಿದ್ದರು. ನಂತರ ಅವರದ್ದೇ ಆದ ಜಿಕೆಎಸ್ ಕಲಾನಿಕೇತನ ಟ್ರಸ್ಟ್ ಎಂಬ ಸಂಸ್ಥೆ ಸ್ಥಾಪನೆ ಮಾಡಿ ‘ಬೇಡರ ಕಣ್ಣಪ್ಪ’, ‘ಸದಾರಮೆ, ‘ತರಕಾರಿ ಚೆನ್ನಿ’, ‘ಮುದುಕನ ಮದುವೆ’ ಮುಂತಾದ ನಾಟಕಗಳನ್ನು ಮಾಡಿಕೊಂಡು ಬಂದಿದ್ದಾರೆ. ಇದನ್ನೂ ಓದಿ:ಮದುವೆಯಾಗಿ 14 ಕಳೆದರೂ ಮಕ್ಕಳಾಗದ್ದಕ್ಕೆ ಮಹತ್ವದ ನಿರ್ಧಾರ ಕೈಗೊಂಡ ‘ಲಾಲಿಹಾಡು’ ನಟಿ

Srinivas Murthy 2

ಶ್ರೀನಿವಾಸಮೂರ್ತಿ ಇದುವರೆಗೂ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 32 ಚಿತ್ರಗಳಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ‘ಕವಿರತ್ನ ಕಾಳಿದಾಸ’ ಚಿತ್ರದ ಭೋಜರಾಜನ ಪಾತ್ರ ಮಾತ್ರ ಜನರ ಮನಸ್ಸಿನಲ್ಲಿ ಹಸಿರಾಗಿ ಉಳಿದುಬಿಟ್ಟಿದೆ. ಮೂರ್ತಿಗಳಿಗೆ ಕನ್ನಡ ಚಿತ್ರರಂಗದಲ್ಲಿ ಸೂಕ್ತ ಸ್ಥಾನಮಾನ ಸಿಗಲಿಲ್ಲ, ಅವರನ್ನು ಚಿತ್ರರಂಗ ಇನ್ನಷ್ಟು ಚೆನ್ನಾಗಿ ಬಳಸಿಕೊಳ್ಳಬಹುದಾಗಿತ್ತು ಎಂಬ ಅಭಿಪ್ರಾಯವಿದೆಯಾದರೂ, ತಮಗೆ ಎಷ್ಟು ಸಿಕ್ಕಿದೆಯೋ ಅದೆಲ್ಲ ಕೀರ್ತಿಯನ್ನು ಹಿರಿಯ ನಿರ್ದೇಶಕ ಸಿದ್ಧಲಿಂಗಯ್ಯ ಮತ್ತು ಡಾ. ರಾಜಕುಮಾರ್ ಸಹೋದರ ವರದಪ್ಪ ಅವರಿಗೆ ಸಲ್ಲಿಸುತ್ತಾರೆ.

Share This Article