ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸಂಪುಟ ಪುನರ್‌ರಚನೆಯಾಗಿದ್ದು (Cabinet) ಸಚಿವರಾದ ರಿಜಿಜು (Kiren Rijiju) ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರ ಖಾತೆ ಬದಲಾವಣೆಯಾಗಿದೆ.
ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜುಗೆ ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ನೀಡಲಾಗಿದೆ. ಸಂಸದೀಯ ವ್ಯವಹಾರ ಮತ್ತು ಸಂಸ್ಕೃತಿ ಖಾತೆಯ ರಾಜ್ಯ ಸಚಿವರಾಗಿದ್ದ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಅವರಿಗೆ ಕಾನೂನು ಸಚಿವ (Law Minister) ಸ್ಥಾನ ನೀಡಲಾಗಿದೆ. ಇದನ್ನೂ ಓದಿ: ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು: ಡಿಕೆಶಿ
ರಿಜಿಜು 2021ರ ಜು.8 ರಂದು ಕಾನೂನು ಮತ್ತು ನ್ಯಾಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮೊದಲು, ಅವರು ಮೇ 2019 ರಿಂದ ಜು. 2021 ರವರೆಗೆ ಯುವ ಸಬಲೀಕರಣ ಮತ್ತು ಕ್ರೀಡೆಗಳ ರಾಜ್ಯ (ಸ್ವತಂತ್ರ ಖಾತೆ)ಯನ್ನು ನೋಡಿಕೊಳ್ಳುತ್ತಿದ್ದರು.
ಈ ವಾರ ನ್ಯಾಯಾಧೀಶರ ನೇಮಕಾತಿ ನಡೆಸುವ ಕೊಲಿಜಿಯಂ ವ್ಯವಸ್ಥೆಯ ಬಗ್ಗೆ ರಿಜಿಜು ನೀಡಿದ್ದ ಹೇಳಿಕೆಗಳ ವಿರುದ್ಧ ಬಾಂಬೆ ವಕೀಲರ ಸಂಘ (ಬಿಎಲ್‍ಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಈ ಹೇಳಿಕೆ ಮತ್ತು ನಡವಳಿಕೆಯಿಂದಾಗಿ ಕೇಂದ್ರ ಸಚಿವರಿಗೆ ಸಂವಿಧಾನ ಮೇಲೆ ನಂಬಿಕೆ ಇಲ್ಲ ಎಂಬುದನ್ನು ತೋರಿಸುತ್ತದೆ ಎಂದು ಬಿಎಲ್‍ಎ ಆರೋಪಿಸಿತ್ತು. ಅಷ್ಟೇ ಅಲ್ಲದೇ ಬಿಎಲ್‍ಎ ರಿಜಿಜು ಅವರು ಕಾನೂನು ಖಾತೆಯನ್ನು ನಿರ್ವಹಿಸದಂತೆ ಆದೇಶ ನೀಡಬೇಕೆಂದು ಮನವಿ ಮಾಡಿತ್ತು.
ನ್ಯಾಯಮೂರ್ತಿಗಳ ನೇಮಕದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ಉತ್ತರದಾಯಿತ್ವವನ್ನು ಕಾಪಾಡಲು ಕೇಂದ್ರ ಸರ್ಕಾರದ ಪ್ರತಿನಿಧಿಗೂ ಕೊಲಿಜಿಯಂನಲ್ಲಿ ಅವಕಾಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ಡಿ.ವೈ. ಚಂದ್ರಚೂಡ್ ಅವರಿಗೆ ಈ ಹಿಂದೆ ರಿಜಿಜು ಪತ್ರ ಬರೆದಿದ್ದರು. ಇದನ್ನೂ ಓದಿ: ಡಿಕೆಶಿಗೆ ಡಿಸಿಎಂ ಸ್ಥಾನ ನೀಡಿರುವುದು ನನಗೆ ಸಂಪೂರ್ಣ ಸಂತೋಷವಿಲ್ಲ: ಡಿ.ಕೆ ಸುರೇಶ್