ಕೋಲ್ಕತ್ತಾ: ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟಗೊಂಡು 9 ಜನರ ಸಾವಿಗೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ (West Bengal) ಸಿಐಡಿ (CID) ಅಧಿಕಾರಿಗಳು ಗುರುವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕಾರ್ಖಾನೆಯ ಮಾಲೀಕ ಭಾನು ಬಾಗ್ ಹಾಗೂ ಆತನ ಇಬ್ಬರು ಸಹಚರರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ಮಾಲೀಕನಿಗೂ ಸ್ಫೋಟದಲ್ಲಿ 70% ರಷ್ಟು ದೇಹದಲ್ಲಿ ಸುಟ್ಟ ಗಾಯಗಳಾಗಿದ್ದು ಒಡಿಶಾದ (Odisha) ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಸ್ಥಿತಿ ಗಂಭೀರವಾಗಿದೆ, ಆತನನ್ನು ಕೋಲ್ಕತ್ತಾಗೆ ಕರೆ ತರಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಜಲ್ಲಿಕಟ್ಟುಗೆ ಸುಪ್ರೀಂ ಅನುಮತಿ – ಕಂಬಳಕ್ಕೂ ಗ್ರೀನ್ ಸಿಗ್ನಲ್
ಮಂಗಳವಾರ ಪುರ್ಬಾ ಮೇದಿನಿಪುರ್‌ನಲ್ಲಿ (Purba Medinipur) ನಡೆದಿದ್ದ ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ (Bomb Squad) ಅಧಿಕಾರಿಗಳು ತೆರಳಿ ರಾಸಾಯನಿಕಗಳ ಮಾದರಿ ಸಂಗ್ರಹಿಸಿದ್ದಾರೆ.
ಮಾಲೀಕ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸುತ್ತಿದ್ದ. ಆಕಸ್ಮಿಕವಾಗಿ ಮಂಗಳವಾರ ಕಾರ್ಖಾನೆ ಸ್ಫೋಟಗೊಂಡಿತ್ತು. ಸ್ಫೋಟಕ್ಕೆ ಕಾರಣ ಏನೆಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಇದೇ ತಿಂಗಳು ಉದ್ಘಾಟನೆಗೊಳ್ಳಬೇಕಿದ್ದ ಸಮುದಾಯ ಭವನದಲ್ಲಿ ಡಬಲ್ ಮರ್ಡರ್