ತಿರುವನಂತಪುರಂ: ವ್ಯಕ್ತಿಯೊಬ್ಬ ಟೀ (Tea) ಕುಡಿಯುತ್ತಾ ಕುಳಿತಿದ್ದ ಸಂದರ್ಭದಲ್ಲಿ ಶರ್ಟ್ ಕಿಸೆಯಲ್ಲಿದ್ದ ಮೊಬೈಲ್ (Mobile Blast) ಏಕಾಏಕಿ ಬ್ಲಾಸ್ಟ್ ಆದ ಘಟನೆ ಕೇರಳ (Kerala) ದಲ್ಲಿ ನಡೆದಿದೆ.
ಈ ಘಟನೆ ಮರೋಟಿಚಾಲ್ ಎಂಬಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ. 70 ವರ್ಷದ ಇಲಿಯಾಸ್ ಎಂಬವರು ಹೋಟೆಲಿನಲ್ಲಿ ತನ್ನ ಪಾಡಿಗೆ ತಾನು ಟೀ ಕುಡಿಯುತ್ತಾ ಕುಳಿತಿದ್ದರು. ಈ ವೇಳೆ ಅವರ ಕಿಸೆಯಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿದೆ. ಇದನ್ನೂ ಓದಿ: ಎರಡು ದಿನಗಳ ಹಿಂದೆ ಕಾಡಾನೆ ದಾಳಿಗೆ ಒಳಗಾಗಿದ್ದ ಕಾರ್ಮಿಕ ಆಸ್ಪತ್ರೆಯಲ್ಲಿ ಸಾವು
ಕೂಡಲೇ ಅವರ ಶರ್ಟ್‍ಗೂ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಇಲಿಯಾಸ್ ಕಿಸೆಯಲ್ಲಿದ್ದ ಮೊಬೈಲ್ ಬಿಸಾಕಿದ್ದಾರೆ. ಅಲ್ಲದೆ ಹೋಟೆಲ್ ಸಿಬ್ಬಂದಿ ಕೂಡ ಅವರ ರಕ್ಷಣೆ ಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಬ್ಯಾಟರಿ (Battery) ಯೇ ಸ್ಫೋಟಕ್ಕೆ ಕಾರಣವಾಗಿರಬಹುದು ಎಂಬುದಾಗಿ ಶಂಕಿಸಲಾಗಿದೆ.
ಸ್ಫೋಟಗೊಂಡ ಫೋನ್ ಯಾವ ಕಂಪನಿಯದ್ದು ಎಂಬುದಾಗಿ ತಿಳಿದುಬಂದಿಲ್ಲ. ಘಟನಯ ಸಂಪೂರ್ಣ ದೃಶ್ಯ ಹೋಟೆಲಿನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.