ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಶುಭಕೋರಿದ ಮಾಜಿ ಸಿಎಂ ಬೊಮ್ಮಾಯಿ

Public TV
1 Min Read
Basavaraj Bommai 1

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾದ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಆಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್‌ (DK Shivakumar) ಅವರಿಗೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಶುಭಹಾರೈಸಿದ್ದಾರೆ.

ಟ್ವೀಟ್‌ ಮೂಲಕ ಶುಭಕೋರಿರುವ ಅವರು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿಕೆಶಿವಕುಮಾರ್‌ರವರಿಗೆ ಹಾರ್ದಿಕ ಅಭಿನಂದನೆಗಳು. ನೀವು ಕರ್ನಾಟಕದ ಮಹಾ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಆಶಿಸಿದ್ದಾರೆ.

ಕರ್ನಾಟಕ ಸಿಎಂ ಫೈಟ್‌ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿತು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಿದ್ದರಾಮಯ್ಯ ಸಿಎಂ ಎಂದು ಡಿ.ಕೆ.ಶಿವಕುಮಾರ್‌ ಅವರಿಂದಲೇ ಘೋಷಣೆ ಮಾಡಿಸಲಾಯಿತು.

Share This Article