12ನೇ ತರಗತಿ ಪಾಸ್‌ ಮಾಡಿದ ಸಿಎಂ ಸಿದ್ದರಾಮಯ್ಯ ಮೊಮ್ಮಗ

Public TV
2 Min Read
Siddaramaiah 11

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕುಟುಂಬಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

ಸಿದ್ದರಾಮಯ್ಯ ಅವರ ಮೊಮ್ಮಗ, ದಿ. ರಾಕೇಶ್ ಸಿದ್ದರಾಮಯ್ಯ ಅವರ ಪುತ್ರ ಧವನ್ ರಾಕೇಶ್ (Dhavan Rakesh) 12ನೇ ತರಗತಿ ಪಾಸ್‌ ಮಾಡಿದ್ದು, ಸಿದ್ದರಾಮಯ್ಯ ಅವರಿಂದಲೇ ಪ್ರಮಾಣಪತ್ರ ಸ್ವೀಕರಿಸಿರುವುದು ವಿಶೇಷ. ಇದನ್ನೂ ಓದಿ: ನನಗೆ ಜೀರೋ ಟ್ರಾಫಿಕ್‌ ಸೌಲಭ್ಯ ಬೇಡ; ಸಾರ್ವಜನಿಕರಿಗೆ ತೊಂದರೆಯಾಗುತ್ತೆ ಅಂತ ಈ ನಿರ್ಧಾರ: ಸಿಎಂ

ಈ ಕುರಿತು ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, ನನ್ನ ಮೊಮ್ಮಗ 12ನೇ ತರಗತಿ ಪೂರ್ಣಗೊಳಿಸಿದ್ದಾನೆ. ಬೆಂಗಳೂರಿನ ಕೆನಡಿಯನ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು. ಅಲ್ಲದೇ ಈ ಕಾರ್ಯಕ್ರಮದ ಭಾಗವಾಗಿದ್ದು, ನನಗೆ ತುಂಬಾ ಸಂತೋಷವಾಯಿತು. 12ನೇ ತರಗತಿ ಪೂರ್ಣಗೊಳಿಸಿದ್ದಕ್ಕಾಗಿ ಧವನ್‌ ರಾಕೇಶ್‌ನನ್ನ ಅಭಿನಂದಿಸುತ್ತೇನೆ ಎಂದು ಶುಭಾಶಯ ಕೋರಿದ್ದಾರೆ.

siddaramaiah zero traffic

ಕೆಲವು ದಿನಗಳ ಹಿಂದೆಯಷ್ಟೇ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಚುನಾವಣಾ ಪ್ರಚಾರ ಸಭೆಯಲ್ಲಿ ಧವನ್‌ ರಾಕೇಶ್‌ ಭಾಗಿಯಾಗಿದ್ದರು. ಈ ವೇಳೆ ಧವನ್‍ಗೆ ರಾಜಕೀಯದ ಬಗ್ಗೆ ಬಹಳ ಆಸಕ್ತಿ ಇದೆ. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವತಃ ಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ ಎಂದು ಹೇಳಿದ್ದರು. ಇದನ್ನೂ ಓದಿ: ಪತಿ ಹೆಸರನ್ನ ಹಣೆ ಮೇಲೆ ಹಚ್ಚೆ ಹಾಕಿಸಿಕೊಂಡ ಬೆಂಗ್ಳೂರು ಮಹಿಳೆ – ಓವರ್ ಆಕ್ಷನ್ ಅಂತಾ ನೆಟ್ಟಿಗರಿಂದ ತರಾಟೆ

ಜೊತೆಗೆ ವಿದ್ಯಾಭ್ಯಾಸ ಮುಗಿಸಿದ ಬಳಿಕ ರಾಜಕೀಯಕ್ಕೆ ಬರುತ್ತಾನೆ ಎಂದಿದ್ದರು. ಧವನ್‌ ಸಹ ತಾತನಂತೆ ಕಾನೂನು ಪದವಿ ಪಡೆದು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿದ್ದರು.

Share This Article