ಡಿ.30ರೊಳಗೆ ರಾಮಮಂದಿರ ನಿರ್ಮಾಣದ ಮೊದಲ ಹಂತ ಪೂರ್ಣ- ದರ್ಶನಕ್ಕೆ ಭಕ್ತರಿಗೆ ಅವಕಾಶ

Public TV
1 Min Read
RAMA MANDIRA

ಲಕ್ನೋ: ಅಯೋಧ್ಯೆ (Ayodhya) ಯಲ್ಲಿ ರಾಮಮಂದಿರ (RamaMandir) ದ ಮೊದಲ ಹಂತದ ನಿರ್ಮಾಣ ಕಾರ್ಯ ಡಿಸೆಂಬರ್ 30ರೊಳಗೆ ಪೂರ್ಣಗೊಳ್ಳಲಿದ್ದು, ದರ್ಶನ ಮಾಡಲು ಭಕ್ತರಿಗೆ ಅನುವು ಮಾಡಿಕೊಡಲಾಗುವುದು ಎಂದು ರಾಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ (Nripendra Mishra) ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಪ್ರಧಾನ ಕಾರ್ಯದರ್ಶಿಯೂ ಆಗಿದ್ದ ಮಿಶ್ರಾ ಮಾತನಾಡಿ, ದೇವಾಲಯವನ್ನು ಮೂರು ಹಂತಗಳಲ್ಲಿ ನಿರ್ಮಿಸಲಾಗುತ್ತಿದೆ. ಅದರಲ್ಲಿ ಮೊದಲ ಹಂತದ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಭಕ್ತರು ದೇವಾಲಯವನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ ಎಂದರು.

ರಾಮಮಂದಿರ ನಿರ್ಮಾಣದ ಮೊದಲ ಹಂತವನ್ನು 2023ರ ಡಿಸೆಂಬರ್ 30 ರೊಳಗೆ ಪೂರ್ಣಗೊಳಿಸಲು ದೇವಸ್ಥಾನದ ಟ್ರಸ್ಟ್ ನಿರ್ಧರಿಸಿದೆ. ಮೊದಲ ಹಂತದಲ್ಲಿ, ನೆಲ ಮಹಡಿಯಲ್ಲಿ ಐದು ‘ಮಂಟಪಗಳು’ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಗರ್ಭಗುಡಿ. ದೇವರ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುತ್ತದೆ. ಐದು ಮಂಟಪಗಳ ನಿರ್ಮಾಣದಲ್ಲಿ ಸುಮಾರು 160 ಕಂಬಗಳನ್ನು ಬಳಸಲಾಗಿದೆ. ದೇವಾಲಯದ ಕೆಳಗಿನ ಸ್ತಂಭದಲ್ಲಿ ಶ್ರೀರಾಮನ ಸಂಕ್ಷಿಪ್ತ ವಿವರಣೆಯನ್ನು ಪ್ರಾರಂಭಿಸಲಾಗುವುದು. ವಿದ್ಯುತ್ ಸೌಲಭ್ಯ ಮತ್ತು ಇತರ ಸೌಲಭ್ಯಗಳನ್ನು ಪೂರ್ಣಗೊಳಿಸಬೇಕು. ಈ ಎಲ್ಲಾ ಕಾಮಗಾರಿಗಳು ಡಿಸೆಂಬರ್ 30 ರೊಳಗೆ ಪೂರ್ಣಗೊಳ್ಳಲಿವೆ ಎಂದು ಹೇಳಿದರು.

ಎರಡನೇ ಮಹಡಿಗಳನ್ನು 2024ರ ಡಿಸೆಂಬರ್ 30 ರೊಳಗೆ ಪೂರ್ಣಗೊಳಿಸಲಾಗುವುದು. ಇನ್ನು ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಈ ವರ್ಷಾಂತ್ಯದೊಳಗೆ ಭಕ್ತರಿಗೆ ದರ್ಶನ ಸಿಗಲಿದೆ. ಒಟ್ಟಿನಲ್ಲಿ ಡಿಸೆಂಬರ್ 30 ರೊಳಗೆ ಎಲ್ಲಾ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಮಿಶ್ರಾ ವಿವರಿಸಿದ್ದಾರೆ.

Share This Article